AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಅಕ್ಟೋಬರ್ 31ರವರೆಗೂ ದಾಖಲೆ ಪರಿಶೀಲನೆಗೆ ಅವಕಾಶ

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನಾ ಸಮೀಕ್ಷೆಯಲ್ಲಿ ಬಿಟ್ಟುಹೋಗಿರುವ ಗ್ರಾಹಕರಿಗೆ ತಮ್ಮ ದಾಖಲೆಗಳನ್ನು ಸಲ್ಲಿಸಲು ಅಕ್ಟೋಬರ್ 31ರವರೆಗೆ ಕೊನೆಯ ಅವಕಾಶವನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಮೀಕ್ಷೆಯ ಸಂದರ್ಭದಲ್ಲಿ ಫಲಾನುಭವಿಗಳು ಲಭ್ಯವಿಲ್ಲದ ಕಾರಣಕ್ಕೆ ಅರ್ಹರು ಉಚಿತ ವಿದ್ಯುತ್ ಯೋಜನೆಯ ಸೌಲಭ್ಯದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಅಕ್ಟೋಬರ್ 31ರವರೆಗೂ ದಾಖಲೆ ಪರಿಶೀಲನೆಗೆ ಅವಕಾಶ
ಗೃಹ ಜ್ಯೋತಿ ಯೋಜನೆ
ಪ್ರಸನ್ನ ಹೆಗಡೆ
|

Updated on:Oct 18, 2026 | 9:38 AM

Share

ಬೆಂಗಳೂರು, ಅಕ್ಟೋಬರ್​​ 18: ರಾಜ್ಯದಲ್ಲಿ ಮನೆಮನೆಗೆ ತೆರಳಿ ನಡೆಸುತ್ತಿರುವ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನಾ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದವರು, ಅಕ್ಟೋಬರ್ 31ರೊಳಗೆ ತಮ್ಮ ಸಮೀಪದ ವಿದ್ಯುತ್ ಸರಬರಾಜು ಕಂಪನಿಯ (ಎಸ್ಕಾಂ) ಉಪವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ದಾಖಲೆಗಳನ್ನು ಸಲ್ಲಿಸಬಹುದು. ಮನೆಗೆ ಬೀಗ ಹಾಕಿದ್ದವರು ಹಾಗೂ ಖಾಲಿ ಮನೆಗಳ ಕಾರಣದಿಂದ ಪರಿಶೀಲನೆಗೆ ಒಳಪಡದವರಿಗೂ ರಾಜ್ಯ ಸರ್ಕಾರ ಮತ್ತೆ ಅವಕಾಶ ನೀಡಿದೆ.

ಸುಮಾರು ಶೇ. 97.5ರಷ್ಟು ಫಲಾನುಭವಿಗಳ ಪರಿಶೀಲನೆ ಪೂರ್ಣ

ಸಮೀಕ್ಷೆಯ ಸಂದರ್ಭದಲ್ಲಿ ಫಲಾನುಭವಿಗಳು ಲಭ್ಯವಿಲ್ಲದ ಕಾರಣಕ್ಕೆ ಅರ್ಹರು ಉಚಿತ ವಿದ್ಯುತ್ ಯೋಜನೆಯ ಸೌಲಭ್ಯದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮನೆಮನೆಗೆ ತೆರಳಿ ನಡೆಸುವ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದ ಗ್ರಾಹಕರು ಅಕ್ಟೋಬರ್ 31ರೊಳಗೆ ಸಂಬಂಧಪಟ್ಟ ಕಚೇರಿಗಳಿಗೆ ತೆರಳಿ ದಾಖಲೆ ಪರಿಶೀಲನೆ ಪೂರ್ಣಗೊಳಿಸುವಂತೆ ಸರ್ಕಾರ ಸೂಚಿಸಿದೆ. ಎಂಟು ಜಿಲ್ಲೆಗಳನ್ನು ಒಳಗೊಂಡ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯಲ್ಲಿ ಭಾಗ್ಯಜ್ಯೋತಿ, ಕುಟೀರಜ್ಯೋತಿ ಮತ್ತು ಅಮೃತಜ್ಯೋತಿ ಯೋಜನೆಗಳ ಫಲಾನುಭವಿಗಳನ್ನೂ ಒಳಗೊಂಡಂತೆ ಒಟ್ಟು 74,29,773 ಮಂದಿ ಗೃಹಜ್ಯೋತಿ ಫಲಾನುಭವಿಗಳಿದ್ದಾರೆ. ಈ ವಾರದವರೆಗಿನ ಮಾಹಿತಿಯ ಪ್ರಕಾರ, 72,40,000ಕ್ಕೂ ಹೆಚ್ಚು ಫಲಾನುಭವಿಗಳ ಪರಿಶೀಲನೆ ಪೂರ್ಣಗೊಂಡಿದೆ. ಇದು ಒಟ್ಟು ಫಲಾನುಭವಿಗಳ ಪೈಕಿ ಸುಮಾರು ಶೇ. 97.5ರಷ್ಟಾಗಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಬಿಗ್ ರಿಲೀಫ್: ಮನೆ ಮುಂದೆ ವಾಹನ ಪಾರ್ಕ್ ಮಾಡಿದ್ದಕ್ಕೆ ಶುಲ್ಕ ವಿಧಿಸುವ ಪ್ರಸ್ತಾವಕ್ಕೆ ತಡೆ

ಆದರೆ, ಸಮೀಕ್ಷೆಯ ವೇಳೆ ಸುಮಾರು 16.1 ಲಕ್ಷ ಮನೆಗಳಿಗೆ ಬೀಗ ಹಾಕಿರುವುದು ಹಾಗೂ 28,519 ಮನೆಗಳು ಖಾಲಿ ಇರುವುದು ಪತ್ತೆಯಾಗಿದೆ. ಹೀಗಾಗಿ, ಈ ಮನೆಗಳ ಗ್ರಾಹಕರ ಪರಿಶೀಲನೆ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಬೆಸ್ಕಾಂ ಮನವಿಯ ಮೇರೆಗೆ, ಈ ಗ್ರಾಹಕರಿಗೆ ಅಗತ್ಯ ದಾಖಲೆಗಳನ್ನು ಖುದ್ದಾಗಿ ಸಲ್ಲಿಸಲು ಸರ್ಕಾರ ಅಂತಿಮ ಅವಕಾಶ ನೀಡಿದೆ. ಈ ವಿಶೇಷ ವ್ಯವಸ್ಥೆಯಡಿ ದಾಖಲೆ ಪರಿಶೀಲನೆಗೆ ಅಕ್ಟೋಬರ್ 31 ಕೊನೆಯ ದಿನಾಂಕವಾಗಿರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಯೋಜನೆಯಡಿ ತಮ್ಮ ಅರ್ಹತೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆ ಎದುರಾಗದಂತೆ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:37 am, Sun, 18 October 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ
ಸ್ಟಿಂಗ್ ಆಪರೇಷನ್ ಪ್ರಕರಣ: ಕುಮಾರಸ್ವಾಮಿ ದೆಹಲಿ ನಿವಾಸ ಪರಿಶೀಲನೆ ಸಾಧ್ಯತೆ
ಸ್ಟಿಂಗ್ ಆಪರೇಷನ್ ಪ್ರಕರಣ: ಕುಮಾರಸ್ವಾಮಿ ದೆಹಲಿ ನಿವಾಸ ಪರಿಶೀಲನೆ ಸಾಧ್ಯತೆ
ಶಕ್ತಿದೇವತೆ ಹಾಸನಾಂಬೆಯನ್ನು ನೋಡಲು ಕಿಕ್ಕಿರಿದ ಭಕ್ತರ ದಂಡು!
ಶಕ್ತಿದೇವತೆ ಹಾಸನಾಂಬೆಯನ್ನು ನೋಡಲು ಕಿಕ್ಕಿರಿದ ಭಕ್ತರ ದಂಡು!
ಕೃಷ್ಣಾ ನದಿ ನೀರು ವಿವಾದ, ಮಹಾರಾಷ್ಟ್ರದ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ
ಕೃಷ್ಣಾ ನದಿ ನೀರು ವಿವಾದ, ಮಹಾರಾಷ್ಟ್ರದ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ
ನಂದಿನಿ ಹಾಲು ದರ ಏರಿಕೆ ಪರಿಣಾಮ: ರಾಜ್ಯಾದ್ಯಂತ ಕಾಫಿ, ಟೀ ಬೆಲೆ ₹5 ಹೆಚ್ಚಳ
ನಂದಿನಿ ಹಾಲು ದರ ಏರಿಕೆ ಪರಿಣಾಮ: ರಾಜ್ಯಾದ್ಯಂತ ಕಾಫಿ, ಟೀ ಬೆಲೆ ₹5 ಹೆಚ್ಚಳ
‘ಧಮ್ ಇದ್ರೆ ಬಿಚ್ಚಿಡು’; ಗಾನವಿ-ಆಸಿಯಾ ಮಧ್ಯೆ ನಡೆಯಿತು ದೊಡ್ಡ ವಾಕ್ಸಮರ
‘ಧಮ್ ಇದ್ರೆ ಬಿಚ್ಚಿಡು’; ಗಾನವಿ-ಆಸಿಯಾ ಮಧ್ಯೆ ನಡೆಯಿತು ದೊಡ್ಡ ವಾಕ್ಸಮರ
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಸತ್ತ ನಾಲ್ವರ ಮೃತದೇಹ ಬೆಂಗಳೂರಿಗೆ
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಸತ್ತ ನಾಲ್ವರ ಮೃತದೇಹ ಬೆಂಗಳೂರಿಗೆ