AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಿ ರೋಗಿಗಳಿಗೆ ಆರೋಗ್ಯ ಇಲಾಖೆಯಿಂದ ಗುಡ್‌ನ್ಯೂಸ್: ಇನ್ಮುಂದೆ ಮನೆ ಬಾಗಿಲಲ್ಲೇ ಸಿಗಲಿದೆ ಗುಣಮಟ್ಟದ ಡಯಾಲಿಸಿಸ್ ಸೇವೆ

ರಾಜ್ಯದ ಕಿಡ್ನಿ ರೋಗಿಗಳಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಡಯಾಲಿಸಿಸ್ ಸೇವೆ ಒದಗಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಇದರ ಜೊತೆಗೆ 750 ನೂತನ ಆ್ಯಂಬುಲೆನ್ಸ್ ಸೇವೆಯನ್ನು ಶೀಘ್ರದಲ್ಲೇ ಲೋಕಾರ್ಪಣೆಗೊಳಿಸುವುದಾಗಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಅಲ್ಲದೆ, ಹೆಚ್ಚು ಹೆಚ್ಚು ಆಸ್ಪತ್ರೆಗಳ ಬದಲು ಇರುವ ಆಸ್ಪತ್ರೆಗಳಲ್ಲಿಯೇ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಗುರಿಯಾಗಿದೆ ಎಂದವರು ತಿಳಿಸಿದ್ದಾರೆ.

ಕಿಡ್ನಿ ರೋಗಿಗಳಿಗೆ ಆರೋಗ್ಯ ಇಲಾಖೆಯಿಂದ ಗುಡ್‌ನ್ಯೂಸ್: ಇನ್ಮುಂದೆ ಮನೆ ಬಾಗಿಲಲ್ಲೇ ಸಿಗಲಿದೆ ಗುಣಮಟ್ಟದ ಡಯಾಲಿಸಿಸ್ ಸೇವೆ
ಕಿಡ್ನಿ ರೋಗಿಗಳಿಗೆ ಆರೋಗ್ಯ ಇಲಾಖೆಯಿಂದ ಗುಡ್‌ನ್ಯೂಸ್Image Credit source: Getty Images
ವಿನಯ್​ ಕಾಶಪ್ಪನವರ್​
| Edited By: |

Updated on:Oct 28, 2026 | 3:03 PM

Share

ಬೆಂಗಳೂರು, ಅಕ್ಟೋಬರ್​​ 28:  ಕಿಡ್ನಿ ರೋಗಿಗಳಿಗೆ ಆರೋಗ್ಯ ಇಲಾಖೆ ಗುಡ್‌ನ್ಯೂಸ್ ನೀಡಿದ್ದು, ಡಯಾಲಿಸಿಸ್ ಸೇವೆ ಬಲಪಡಿಸಲು ರಾಜ್ಯ ಸರ್ಕಾರ ಮಹತ್ವ ಪ್ಲ್ಯಾನ್​​ ಮಾಡಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಡಯಾಲಿಸಿಸ್ ಸೇವೆ ಒದಗಿಸಲು ಸಿದ್ಧತೆ ನಡೆದಿದ್ದು, ಡಯಾಲಿಸಿಸ್ ಸೇವೆಗಳ ನಿರ್ವಹಣೆ ಮತ್ತು ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಹಾಗೂ ಉತ್ತಮ ಸೇವೆ ಒದಗಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದ್ದು, ಆರೋಗ್ಯ ಸೇವೆಗಳ ಲಭ್ಯತೆ ಹೆಚ್ಚಿಸಿ ಕಿಡ್ನಿ ರೋಗಿಗಳಿಗೆ ನೆರವಿಗೆ ಮುಂದಾಗಿದೆ.

750 ನೂತನ ಆ್ಯಂಬುಲೆನ್ಸ್

ಅತ್ಯುತ್ತಮ ಗುಣಮಟ್ಟದ 750 ನೂತನ ಆ್ಯಂಬುಲೆನ್ಸ್ ಲೋಕಾರ್ಪಣೆಗೂ ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ. ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಯು.ಟಿ. ಖಾದರ್​​ ಅವರೇ ಮಾಹಿತಿ ನೀಡಿದ್ದು, ಗ್ರಾಮೀಣ ಪ್ರದೇಶಗಳಿಗೆ ಕೇವಲ 20 ನಿಮೀಷದಲ್ಲಿ ಆ್ಯಂಬುಲೆನ್ಸ್ ತಲುಪಬೇಕೆಂಬ ಗುರಿ ಹೊಂದಿದ್ದೇವೆ. ಇಲ್ಲವಾದಲ್ಲಿ 3 ಸಾವಿರ ರೂ. ದಂಡ ವಿಧಿಸುತ್ತೇವೆ. ಪ್ರತಿ ತಾಲೂಕಾಸ್ಪತ್ರೆಗಳಲ್ಲಿಯೂ ಐದು ಐಸಿಯು ಬೆಡ್​​ಗಳನ್ನು ನಿರ್ಮಿಸುತ್ತಿದ್ದೇವೆ. ಹೆಚ್ಚು ಹೆಚ್ಚು ಆಸ್ಪತ್ರೆಗಳ ಬದಲು ಇರುವ ಆಸ್ಪತ್ರೆಗಳಲ್ಲಿಯೇ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಗುರಿಯಾಗಿದೆ ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆತಂಕ ತಂದ ಹವಮಾನ ಬದಲಾವಣೆ: ಮಕ್ಕಳಲ್ಲಿ ಹೆಚ್ಚಿದ ವೈರಲ್ ಫೀವರ್, ಡೆಂಗ್ಯೂ

‘ಶೀಘ್ರ ಮಹಿಳಾ ಆರೋಗ್ಯ ನೀತಿ ಜಾರಿ’

ಮಹಿಳಾ ಆರೋಗ್ಯ ನೀತಿಯನ್ನು ಸಹ ಶೀಘ್ರವೇ ಜಾರಿಗೆ ತರುತ್ತೇವೆ. ಅವರ ಆರೋಗ್ಯ ಬಹಳ ಮುಖ್ಯ ಎಂದು ಖಾದರ್​​ ಹೇಳಿದ್ದಾರೆ. ಮಾಧ್ಯಮಗಳ ಸಹಕಾರದಿಂದ ಕ್ಯಾನ್ಸರ್ ಔಷಧಿ ಕಡಿಮೆ ದರಕ್ಕೆ ಸಿಗುವಂತಾಗಿದೆ. ಜನಸಾಮನ್ಯರ ಆರೋಗ್ಯದ ಕಾಳಜಿ ಕೇಂದ್ರ ಸರ್ಕಾರಕ್ಕೆ ಯಾಕಿಲ್ಲ? ಎಲ್ಲದಕ್ಕೂ ಯಾಕೆ ಸುಪ್ರೀಂ ಕೋಟ್೯ ಹೇಳಬೇಕು? ಮುಂದಿನ ದಿನಗಳಲ್ಲಿಹೆಚ್ಚು ದರ ಇರುವ ಔಷಧಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಕಡಿವಾಣ ಹಾಕಬೇಕು ಎಂದವರು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:01 pm, Wed, 28 October 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More