ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಹಳದಿ ಮಾರ್ಗದಲ್ಲಿನ ಮೆಟ್ರೋ ಸ್ಟೇಷನ್​​ಗಳ ಸಮೀಪ ಬಿಎಂಟಿಸಿ ಬಸ್​​ ನಿಲ್ದಾಣಗಳ ವ್ಯವಸ್ಥೆ

ಹಳದಿ ಮಾರ್ಗದಲ್ಲಿನ ಮೆಟ್ರೋ ನಿಲ್ದಾಣಗಳ ಸಮೀಪ ಬಿಎಂಟಿಸಿ ಬಸ್​​​ ನಿಲ್ದಾಣಗಳ ವ್ಯವಸ್ಥೆ ಮಾಡುವ ಮೂಲಕ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗುಡ್ ನ್ಯೂಸ್​​ ನೀಡಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಿದೆ. ಹಾಗಾದರೆ ಎಲ್ಲೆಲ್ಲಿ ಬಸ್​ ನಿಲ್ದಾಣಗಳನ್ನು ನಿರ್ಮಿಸಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಹಳದಿ ಮಾರ್ಗದಲ್ಲಿನ ಮೆಟ್ರೋ ಸ್ಟೇಷನ್​​ಗಳ ಸಮೀಪ ಬಿಎಂಟಿಸಿ ಬಸ್​​ ನಿಲ್ದಾಣಗಳ ವ್ಯವಸ್ಥೆ
ಹಳದಿ ಮೆಟ್ರೋ
Edited By:

Updated on: Dec 17, 2025 | 6:53 PM

ಬೆಂಗಳೂರು, ಡಿಸೆಂಬರ್​ 17: ಇತ್ತೀಚೆಗೆ ಯೆಲ್ಲೋ ಮಾರ್ಗದ 6ನೇ ಡ್ರೈವರ್ ಲೆಸ್ ಮೆಟ್ರೋ ರೈಲು ಬೆಂಗಳೂರಿಗೆ ಆಗಮಿಸಿದ್ದ ಸಿಹಿ ಸುದ್ದಿ ನೀಡಿದ್ದ ನಮ್ಮ ಮೆಟ್ರೋ ಇದೀಗ ಮತ್ತೊಂದು ಗುಡ್​ ನ್ಯೂಸ್​​ ನೀಡಿದೆ. ಅದೇನೆಂದರೆ ಯೆಲ್ಲೋ ಲೈನ್ ಮೆಟ್ರೋ (Metro Yellow Line) ಸ್ಟೇಷನ್​​ ಬಳಿ ಬಿಎಂಟಿಸಿ ಬಸ್ ನಿಲ್ದಾಣಗಳ ವ್ಯವಸ್ಥೆ ಮಾಡಲಾಗಿದೆ. ಆ ಮೂಲಕ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕೆ ಬಿಎಂಆರ್‌ಸಿಎಲ್ (BMRCL)​​ ಮುಂದಾಗಿದೆ. ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಬಿಎಂಆರ್‌ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?​​ 

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವತಿಯಿಂದ ರಾಷ್ಟ್ರೀಯ ವಿದ್ಯಾಲಯ ರಸ್ತೆ, ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಹಳದಿ ಮಾರ್ಗದಲ್ಲಿ 2025 ಆಗಸ್ಟ್ 11ರಿಂದ ಮೆಟ್ರೋ ರೈಲು ಸೇವೆ ಆರಂಭಿಸಲಾಯಿತು. ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ, ಬಿಎಂಆರ್‌ಸಿಎಲ್ ಮತ್ತು ಬಿಎಂಟಿಸಿ ಸಂಯುಕ್ತವಾಗಿ ಮಾರ್ಗ ಪರಿಶೀಲನೆ ನಡೆಸಿ, ಮೆಟ್ರೋ ನಿಲ್ದಾಣಗಳ ಸಮೀಪ ಬಸ್ ನಿಲ್ದಾಣಗಳನ್ನು ಹೊಸದಾಗಿ ಸ್ಥಾಪಿಸಲಾಗಿದ್ದು ಹಾಗೂ ಕೆಲವು ಬಸ್ ನಿಲ್ದಾಣಗಳನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ.

ನಮ್ಮ ಮೆಟ್ರೋ ಟ್ವೀಟ್​​

ಮೆಟ್ರೋ ನಿಲ್ದಾಣಗಳ ಸಮೀಪ ಹೊಸದಾಗಿ ಸ್ಥಾಪಿಸಿರುವ ಬಸ್ ನಿಲ್ದಾಣಗಳು

  • ಬಯೋಕಾನ್ ಹೆಬ್ಬಗೋಡಿ
  • ಬೆರೆಟೇನ ಅಗ್ರಹಾರ
  • ಸಿಂಗಸಂದ್ರ
  • ಹೊಂಗಸಂದ್ರ
  • ಸೆಂಟ್ರಲ್ ಸಿಲ್ಕ್ ಬೋರ್ಡ್​
  • ಆ‌ರ್.ವಿ. ರಸ್ತೆ

ಇರುವ ಬಸ್ ನಿಲ್ದಾಣಗಳನ್ನು ಮೆಟ್ರೋ ನಿಲ್ದಾಣದ ಸಮೀಪ ಸ್ಥಳಾಂತರಿಸಿರುವ ನಿಲ್ದಾಣಗಳು

  • ಎಲೆಕ್ಟ್ರಾನಿಕ್ ಸಿಟಿ
  • ಹೊಸ ರಸ್ತೆ
  • ರಾಗಿಗುಡ್ಡ

ಜಯದೇವ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಕುಡ್ಡು ಗೇಟ್ ಹಾಗೂ ಇನ್ಫೋಸಿಸ್ ಫೌಂಡೇಶನ್, ಕೊನ್ನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣಗಳಲ್ಲಿ ಬಸ್ ನಿಲ್ದಾಣಗಳು ಈಗಾಗಲೇ 100 ಮೀಟರ್ ಒಳಗೆ ಲಭ್ಯವಿವೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಕ್ರಿಸ್ಮಸ್, ಹೊಸ ವರ್ಷದ ಗಿಫ್ಟ್: 12 ನಿಮಿಷಕ್ಕೊಂದರಂತೆ ಸಂಚರಿಲಿದೆ ಯೆಲ್ಲೋ ಲೈನ್ ಮೆಟ್ರೋ

ಹಸೂರು ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಲ್ಲಿ ಸ್ಥಳದ ಕೊರತೆಯಿಂದಾಗಿ ಬಸ್ ನಿಲ್ದಾಣಗಳನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ. ಹೀಗಾಗಿ ಮೆಟ್ರೋ ಪ್ರಯಾಣಿಕರು ಈ ಸುಧಾರಿತ ಬಸ್ ಸಂಪರ್ಕವನ್ನು ಸದುಪಯೋಗಪಡಿಸಿಕೊಳ್ಳುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮನವಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:50 pm, Wed, 17 December 25