ಕರ್ನಾಟಕ ರಾಜ್ಯೋತ್ಸವದಂದೇ ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್: ಯೆಲ್ಲೋ ಲೈನ್ಗೆ ಮತ್ತೊಂದು ರೈಲು
ನವೆಂಬರ್ 1ರಿಂದ ಹಳದಿ ಮಾರ್ಗದಲ್ಲಿ 5ನೇ ಮೆಟ್ರೋ ರೈಲು ಸೇವೆ ಆರಂಭಿಸಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಆ ಮೂಲಕ ಕರ್ನಾಟಕ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಯೆಲ್ಲೋ ಲೈನ್ನಲ್ಲಿ ಪ್ರತಿದಿನ 5 ಮೆಟ್ರೋ ಸಂಚರಿಸಲಿವೆ.

ಬೆಂಗಳೂರು, ಅಕ್ಟೋಬರ್ 31: ನವೆಂಬರ್ 1ರಿಂದ ಹಳದಿ ಮಾರ್ಗದಲ್ಲಿ ನಾಳೆ ಬೆಳಿಗ್ಗೆ 5 ಗಂಟೆಗೆ 5ನೇ ಮೆಟ್ರೋ ರೈಲು ಸೇವೆ ಆರಂಭವಾಗಲಿದೆ. ಆ ಮೂಲಕ ಕರ್ನಾಟಕ ರಾಜ್ಯೋತ್ಸವ (Karnataka Rajyotsava) ಸಂದರ್ಭದಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ನಾಳೆಯಿಂದ ಯೆಲ್ಲೋ ಲೈನ್ನಲ್ಲಿ ಪ್ರತಿದಿನ 5 ಮೆಟ್ರೋ ಸಂಚರಿಸಲಿವೆ. ಈ ಕುರಿತಾಗಿ ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?
ಕರ್ನಾಟಕ ರಾಜ್ಯೋತ್ಸವದ 70ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು, ನವೆಂಬರ್ 1ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲನ್ನು ವಾಣಿಜ್ಯ ಸೇವೆಗೆ ಒಳಪಡಿಸುತ್ತಿದೆ.
ನಮ್ಮ ಮೆಟ್ರೋ ಟ್ವೀಟ್
ನವೆಂಬರ್ 1, 2025ರಿಂದ ಹಳದಿ ಮಾರ್ಗದಲ್ಲಿ 5ನೇ ಮೆಟ್ರೋ ರೈಲು ಸೇವೆ ಆರಂಭವಾಗಲಿದೆ. ಹೆಚ್ಚಿನ ಮಾಹಿತಿಗೆ ಮಾಧ್ಯಮ ಪ್ರಕಟಣೆಯನ್ನು ಪರಿಶೀಲಿಸಿ.
5th Metro Train to commence operations on Yellow Line from November 1, 2025. Check the media release for more details. pic.twitter.com/HDo6N3ID39
— ನಮ್ಮ ಮೆಟ್ರೋ (@OfficialBMRCL) October 31, 2025
ಈ ಹೊಸ ರೈಲಿನ ಚಾಲನೆಯಿಂದ, ಹಳದಿ ಮಾರ್ಗದಲ್ಲಿ ಪೀಕ್ ಅವಧಿಯಲ್ಲಿ ರೈಲುಗಳ ಆವರ್ತನವು ಪ್ರತಿ 15 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುತ್ತವೆ. (ಪ್ರಸಕ್ತ 19 ನಿಮಿಷಗಳ ಅಂತರದ ಬದಲಾಗಿ). ಇದರಿಂದ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆ ಎಲ್ಲಾ ದಿನಗಳಿಗೆ ಅನ್ವಯವಾಗುತ್ತದೆ.
ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಹೊಸ ರೈಲು: ವೇಳಾಪಟ್ಟಿಯಲ್ಲಿ ಬದಲಾವಣೆ
ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಮೊದಲ ಹಾಗೂ ಕೊನೆಯ ರೈಲುಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈ ಮಾರ್ಗದಲ್ಲಿ ಕೊನೆಯ ರೈಲು ರಾತ್ರಿ 11 ಗಂಟೆಗೆ ಸಂಚಾರ ಮಾಡಲಿದೆ. ಪ್ರಯಾಣಿಕರು ಈ ಬದಲಾವಣೆಯನ್ನು ಗಮನಿಸಿ. ಸುಧಾರಿತ ಮೆಟ್ರೋ ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ಬಿಎಂಆರ್ಸಿಎಲ್ವಿನಂತಿಸಿದೆ.
ಇದನ್ನೂ ಓದಿ: Yellow Line Metro: ಮುಂದಿನ ವಾರದಿಂದ ಟ್ರ್ಯಾಕಿಗಿಳಿಯಲಿದೆ ನಮ್ಮ ಮೆಟ್ರೋ ಯೆಲ್ಲೋ ಲೈನ್ ನಾಲ್ಕನೇ ರೈಲು
ಇನ್ನು ಆಗಸ್ಟ್ 10 ರಂದು ಈ ಮಾರ್ಗಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗ್ರೀನ್ ಸಿಗ್ನಲ್ ನೀಡಿದ್ದರು. ಆರ್.ವಿ ರೋಡ್ ಟು ಬೊಮ್ಮಸಂದ್ರ 16 ಮೆಟ್ರೋ ಸ್ಟೇಷನ್ಗಳಿದ್ದು, 19.5 ಕಿಮೀ ವಿಸ್ತೀರ್ಣ ಇದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:11 pm, Fri, 31 October 25







