AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಯೆಲ್ಲೋ ಲೈನ್​ನಲ್ಲಿ ಇಂದಿನಿಂದ 7ನೇ ರೈಲು ಸಂಚಾರ

Namma Metro Yellow Line: ಕೊನೆಗೂ ಬೆಂಗಳೂರು ಮೆಟ್ರೋ ಯೆಲ್ಲೋ ಲೈನ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ದೊರೆತಿದೆ. ಹಳದಿ ಮಾರ್ಗದಲ್ಲಿ 7ನೇ ಮೆಟ್ರೋ ರೈಲು ಸಂಚಾರ ಶುರುವಾಗುತ್ತಿದ್ದು, ಇನ್ನು ಮುಂದೆ ಸೋಮವಾರದಿಂದ ಶುಕ್ರವಾರದ ವರೆಗೆ ಪ್ರತಿ 10 ನಿಮಿಷಕ್ಕೊಮ್ಮೆ ಒಂದು ರೈಲು ಸಂಚಾರ ನಡೆಸಲಿದೆ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಯೆಲ್ಲೋ ಲೈನ್​ನಲ್ಲಿ ಇಂದಿನಿಂದ 7ನೇ ರೈಲು ಸಂಚಾರ
ಯೆಲ್ಲೋ ಲೈನ್​ನ ಹೊಸ ರೈಲು
Ganapathi Sharma
|

Updated on: Jan 15, 2026 | 6:35 AM

Share

ಬೆಂಗಳೂರು, ಜನವರಿ 15: ನಮ್ಮ ಮೆಟ್ರೋ (Namma Metro) ಯೆಲ್ಲೋ ಲೈನ್‌ನಲ್ಲಿ ಇಂದಿನಿಂದ ಮತ್ತೊಂದು ಮೆಟ್ರೋ ರೈಲು ವಾಣಿಜ್ಯ ಸಂಚಾರ ಆರಂಭವಾಗುತ್ತಿದೆ. ಆರ್.ವಿ.ರೋಡ್–ಬೊಮ್ಮಸಂದ್ರ ಮಾರ್ಗದಲ್ಲಿ 7ನೇ ಮೆಟ್ರೋ ರೈಲು ಸೇವೆಗೆ ಸೇರ್ಪಡೆಯಾಗಿದ್ದು, ಇದರಿಂದ ಪ್ರಯಾಣಿಕರಿಗೆ ಸಂಚಾರ ಇನ್ನಷ್ಟು ಸುಗಮವಾಗಲಿದೆ. ಬೆಳಗ್ಗೆ 6 ಗಂಟೆಯಿಂದಲೇ ಯೆಲ್ಲೋ ಮಾರ್ಗದಲ್ಲಿ 7ನೇ ಮೆಟ್ರೋ ರೈಲು ಸಂಚಾರ ಆರಂಭವಾಗುತ್ತಿದ್ದು, ರೈಲುಗಳ ಸಂಚಾರದ ನಡುವಿನ ಅಂತರ ಕಡಿಮೆಯಾಗಿದೆ. ಈವರೆಗೆ ಈ ಮಾರ್ಗದಲ್ಲಿ ಪ್ರತಿ 13 ನಿಮಿಷಕ್ಕೊಮ್ಮೆ ಒಂದು ಮೆಟ್ರೋ ರೈಲು ಸಂಚರಿಸುತ್ತಿತ್ತು. ಇದೀಗ 7ನೇ ರೈಲು ಸೇರ್ಪಡೆಯೊಂದಿಗೆ ಸೋಮವಾರದಿಂದ ಶನಿವಾರದವರೆಗೆ ಪ್ರತಿ 10 ನಿಮಿಷಕ್ಕೊಮ್ಮೆ ಒಂದು ರೈಲು ಸಂಚಾರ ನಡೆಸಲಿದೆ ಎಂದು ಬಿಎಂಆರ್​ಸಿಎಲ್ (BMRCL) ತಿಳಿಸಿದೆ.

ಭಾನುವಾರಗಳಂದು ಈ ಹಿಂದೆ 15 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚರಿಸುತ್ತಿದ್ದರೆ, ಈಗ ಹೊಸ ರೈಲು ಸೇರ್ಪಡೆಯಿಂದ 14 ನಿಮಿಷಕ್ಕೊಮ್ಮೆ ಸೇವೆ ಲಭ್ಯವಾಗಲಿದೆ. ಆದರೆ ಮೊದಲ ಹಾಗೂ ಕೊನೆಯ ಮೆಟ್ರೋ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ.

ಯೆಲ್ಲೋ ಲೈನ್‌ಗೆ 2025ರ ಆಗಸ್ಟ್ 10ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಇದೀಗ ಮತ್ತೊಂದು ರೈಲು ಸೇರ್ಪಡೆಯೊಂದಿಗೆ ಪ್ರಯಾಣಿಕರ ಒತ್ತಡ ಕಡಿಮೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ಯೆಲ್ಲೋ ಲೈನ್‌ನಲ್ಲಿ ಸಂಚಾರ ಮಾಡುವುದಕ್ಕೆ 7ನೇ ಚಾಲಕರಹಿತ ರೈಲು ಡಿಸೆಂಬರ್​​ನಲ್ಲೇ ಬೆಂಗಳೂರಿಗೆ ಆಗಮಿಸಿತ್ತು. ನಂತರ ಟೆಸ್ಟಿಂಗ್ ಕಾರ್ಯಗಳು ನಡೆದಿದ್ದವು.

ಇದನ್ನೂ ಓದಿ: ನಮ್ಮ ಮೆಟ್ರೋ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು ತಲುಪಿದ ಡ್ರೈವರ್ಲೆಸ್ 7ನೇ ರೈಲು

ಬೆಂಗಳೂರು ಮೆಟ್ರೋ ಹಳದಿ ಮಾರ್ಗವು 19.15 ಕಿಮೀ ಇದ್ದು, ಇದು ಸಂಪೂರ್ಣ ಎಲಿವೇಟೆಡ್ ಕಾರಿಡಾರ್ ಆಗಿದೆ. ರಾಷ್ಟ್ರೀಯ ವಿದ್ಯಾಲಯ (ಆರ್‌ವಿ) ರಸ್ತೆಯನ್ನು ಬೊಮ್ಮಸಂದ್ರಕ್ಕೆ ಸಂಪರ್ಕಿಸುತ್ತದೆ ಮತ್ತು ಈ ಮಾರ್ಗದಲ್ಲಿ 16 ನಿಲ್ದಾಣಗಳಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ