ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​​: ಬರಲಿದೆ ಕ್ಯೂಆರ್ ಕೋಡ್ ಆಧಾರಿತ ಟಿಕೆಟ್​ ವ್ಯವಸ್ಥೆ

ನಮ್ಮ ಮೆಟ್ರೋದಲ್ಲಿ ಟಿಕೆಟ್​​​ಗಾಗಿ ಉದ್ದುದ್ದ ಸಾಲಿನಲ್ಲಿ ನಿಂತುಕೊಳ್ಳಬೇಕಾಗಿತ್ತು. ಆದರೆ ಇನ್ಮುಂದೆ ನಿಮ್ಮ ಮೊಬೈಲ್ ಮೂಲಕವೇ ಟಿಕೆಟ್ ಖರೀದಿಸುವ ವ್ಯವಸ್ಥೆಯನ್ನು ಮೆಟ್ರೋ ನಿಗಮ ಮಾಡುತ್ತಿದೆ.

ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​​: ಬರಲಿದೆ ಕ್ಯೂಆರ್ ಕೋಡ್ ಆಧಾರಿತ ಟಿಕೆಟ್​ ವ್ಯವಸ್ಥೆ
ನಮ್ಮ ಮೆಟ್ರೋ (ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 27, 2022 | 9:44 AM

ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಬೇಕು ಅನ್ನೋ ಕಾರಣಕ್ಕೆ ಮೆಟ್ರೋ ಸಂಚಾರ ಆರಂಭ ಮಾಡಲಾಗಿದೆ. ಈಗಾಗಲೇ ಜನರು ಮೆಟ್ರೋಗೆ ಫಿದಾ ಆಗಿದ್ದುಂಟು. ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಹಾಯವಾಗುವಂತಹ ಹತ್ತು ಹಲವು ವಿನೂತನ ಯೋಜನೆಗಳನ್ನು ಬಿಎಂಆರ್​​​​​ಸಿಎಲ್​​​ (BMRCL) ಜಾರಿ ಮಾಡುತ್ತಾ ಬಂದಿದೆ. ಸದ್ಯ ಮತ್ತೊಂದು ಹೊಸ ಯೋಜನೆ ಜಾರಿ ಮಾಡಲು ನಮ್ಮ ಮೆಟ್ರೋ ಮುಂದಾಗಿದ್ದು, ಮುಂದಿನ ತಿಂಗಳ ಅಂತ್ಯಕ್ಕೆ ಕ್ಯೂ ಆರ್ ಕೋಡ್ ಆಧಾರಿತ ಟಿಕೆಟ್​ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಈಗಾಗಲೇ ಟೋಕನ್​, ಸ್ಮಾರ್ಟ್ ಕಾರ್ಡ್ ಮತ್ತು ಪಾಸ್​ನ್ನು ಬಳಸಿ ಪ್ರಯಾಣಿಸಲು ನಮ್ಮ ಮೆಟ್ರೋ ಅವಕಾಶ ಕಲ್ಪಿಸಿದೆ. ಈಗ ಇನ್ನೊಂದು ಹೊಸ ಮಾದರಿಯ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.

ನಮ್ಮ ಮೆಟ್ರೋದಲ್ಲಿ ಟಿಕೆಟ್​​​ಗಾಗಿ ಉದ್ದುದ್ದ ಸಾಲಿನಲ್ಲಿ ನಿಂತುಕೊಳ್ಳಬೇಕಾಗಿತ್ತು. ಆದರೆ ಇನ್ಮುಂದೆ ನಿಮ್ಮ ಮೊಬೈಲ್ ಮೂಲಕವೇ ಟಿಕೆಟ್ ಖರೀದಿಸುವ ವ್ಯವಸ್ಥೆಯನ್ನು ಮೆಟ್ರೋ ನಿಗಮ ಮಾಡುತ್ತಿದೆ. ಈ ಕ್ಯೂ ಆರ್ ಕೋಡ್​ ಆಧಾರಿತ ಟಿಕೆಟ್​ ವ್ಯವಸ್ಥೆಯಿಂದ ಚಿಲ್ಲರೆ ನೀಡುವ ಸಮಸ್ಯೆಯೂ ದೂರವಾಗಲಿದೆ. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಉಪಕರಣ ಮತ್ತು  ವ್ಯವಸ್ಥೆಯನ್ನು ಮೆಟ್ರೋ ನಿಲ್ದಾಣಗಳಲ್ಲಿ ಅಳವಡಿಸುತ್ತಿದ್ದೇವೆ. ಮುಂದಿನ ಕೆಲ ದಿನಗಳಲ್ಲಿ ವ್ಯವಸ್ಥೆಯ ಪರೀಕ್ಷೆ ನಡೆಯಲಿದ್ದು, ಎಲ್ಲವೂ ಸರಾಗವಾಗಿ ಸಾಗಿದರೆ ಸೆಪ್ಟೆಂಬರ್ ಅಂತ್ಯಕ್ಕೆ ಕ್ಯೂಆರ್ ಕೋಡ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಮೆಟ್ರೋ ಸಂವಹನ ವಿಭಾಗದ ಹಿರಿಯ ಅಧಿಕಾರಿ ವೇಣುಗೋಪಾಲ್ ಹೇಳಿದ್ದಾರೆ.

ಕ್ಯೂಆರ್​ ಕೋಡ್ ವಿಧಾನ: 

  1. ಪ್ರಯಾಣಿಕರು ತಮ್ ಸ್ಮಾರ್ಟ್ ಪೋನ್ನಲ್ಲೇ ಪೇಟಿಎಂ, ಮೆಟ್ರೋ ಯಾತ್ರಾ ಆ್ಯಪ್​ ಡೌನ್ ಲೋಡ್ ಮಾಡಿಕೊಳ್ಳಬೇಕು.
  2. ನಂತರ ತಾವು ಪ್ರಯಾಣಿಸುವ ಮಾರ್ಗ ಮತ್ತು ಎಷ್ಟು ಸಂಖ್ಯೆಯ ಜನರು ಪ್ರಯಾಣಿಸುತ್ತಾರೆ ಎಂಬುದನ್ನು ನಮೂದಿಸಬೇಕು.
  3. ಬಳಿಕ ಅಪ್ಲಿಕೇಷನ್ ಮೂಲಕ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಬೇಕು. ಕೂಡಲೇ ಪ್ರಯಾಣದ ಮೊತ್ತವು ಆನ್ಲೈನ್ ಮೂಲಕ ಬಿಎಂಆರ್​​​​​ಸಿಎಲ್​ಗೆ ಜಮಾ ಆಗುತ್ತದೆ.
  4. ನಂತರ ಕ್ಯೂಆರ್ ಕೋಡ್ ಡೌನ್‌ ಲೋಡ್ ಮಾಡಿ, ಮೆಟ್ರೋ ಗೇಟ್‌ನಲ್ಲಿರುವ ಸ್ಕ್ಯಾನರ್​​ಗೆ ಡೌ‌ಲೋಡ ಮಾಡಿರುವ ಕ್ಯೂಆರ್ ಕೋಡ್ ತೋರಿಸಿ ಮೆಟ್ರೋ ನಿಲ್ದಾಣದೊಳಗೆ ಪ್ರವೇಶಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ