AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಗುಡ್​ ನ್ಯೂಸ್​: 100 ಹೊಸ ಬಿಎಂಟಿಸಿ ಬಸ್​ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಸರ್ಕಾರ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ನೀಡಿದ್ದು, ಮೊದಲ ಹಂತದಲ್ಲಿ ಬಿಎಂಟಿಸಿ 100 ಹೊಸ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು (ಗುರುವಾರ) ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಚಾಲನೆ ನೀಡಿದರು. ಬಳಿಕ ಮಾತನಾಡಿ, ‘. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ ಬಸ್​ಗಳನ್ನು BMTC ಗೆ ಸೇರ್ಪಡೆಗೊಳಿಸಿದ್ದೇವೆ ಎಂದರು.

ಪ್ರಯಾಣಿಕರಿಗೆ ಗುಡ್​ ನ್ಯೂಸ್​: 100 ಹೊಸ ಬಿಎಂಟಿಸಿ ಬಸ್​ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
100 ಹೊಸ ಬಿಎಂಟಿಸಿ ಬಸ್​ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಕಿರಣ್ ಹನುಮಂತ್​ ಮಾದಾರ್
|

Updated on:Sep 12, 2024 | 1:09 PM

Share

ಬೆಂಗಳೂರು, ಸೆ.12: ಬಸ್​ ಪ್ರಯಾಣಿಕರಿಗೆ ಸರ್ಕಾರ ಗುಡ್​ ನ್ಯೂಸ್​ ನೀಡಿದ್ದು, ಬಿಎಂಟಿಸಿ(BMTC)ಗೆ ಹೊಸದಾಗಿ 840 ಬಸ್​​ಗಳು ಸೇರ್ಪಡೆಯಾಗಲಿವೆ. ಮೊದಲ ಹಂತದಲ್ಲಿ ಬಿಎಂಟಿಸಿ 100 ಹೊಸ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಇಂದು (ಗುರುವಾರ) ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ‘ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ ಎಂದರು.

ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ ಬಸ್​ಗಳನ್ನು BMTC ಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್​ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್​ಗಳನ್ನು ಆರಂಭಿಸುತ್ತಿದ್ದೇವೆ. ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು.

ಇದನ್ನೂ ಓದಿ:ಶಕ್ತಿ ಯೋಜನೆ ಮಧ್ಯೆಯೂ ಬಿಎಂಟಿಸಿಗೆ ಭರ್ಜರಿ ಆದಾಯ, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳ

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ, ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ. ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ. ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ, ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.‌

ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4 ರಿಂದ 5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್​ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದರು.

ಈ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆಕೆಆರ್​ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹೊಸ ಮಾದರಿಯ BS 6 ಬಸ್ ವಿಶೇಷತೆಗಳು*

  •  ಪರಿಸರ ಸ್ನೇಹಿ ಬಸ್
  • ಬಿಎಸ್ 4 ಬಸ್ ಗೆ ಹೋಲಿಸಿದ್ರೆ ಶೇಕಡಾ 90 ರಷ್ಟು ಮಾಲಿನ್ಯ ಮಟ್ಟ ಕಮ್ಮಿ
  • 11 ಮೀಟರ್ ಉದ್ದ, ಹವಾನಿಯಂತ್ರಣರಹಿತ, ಡೀಸೆಲ್ ಚಾಲಿತ ಬಸ್
  • ಪ್ರಯಾಣಿಕರ ಸುರಕ್ಷತೆಗಾಗಿ 3 ಸಿಸಿಟಿವಿ ಅಳವಡಿಕೆ
  • 3 ಎಲ್.ಇ.ಡಿ ಬೋರ್ಡ್
  • ವಾಯ್ಸ್ ಅನೌನ್ಸ್ಮೆಂಟ್ ವ್ಯವಸ್ಥೆ
  • ಮಹಿಳೆಯರ ಸೇಫ್ಟಿಗೆ ತುರ್ತು ಪ್ಯಾನಿಕ್ ಅಲಾರ್ಮ್ ಬಟನ್
  • ಅಗ್ನಿ ಅವಘಡ ತಪ್ಪಿಸಲು FDAS ( fire detection and alarm system)
  • ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರ ನಿಲುಗಡೆಗೆ ಸ್ಟಾಪ್ ಬಟನ್ ಇವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Thu, 12 September 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ