AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಾರಿಗೆ ಸಂಸ್ಥೆಯಿಂದ ಗುಡ್​ ನ್ಯೂಸ್​: ಜುಲೈ 15 ರವರೆಗೆ ಸಾಮಾನ್ಯ ಸೇವೆಯಲ್ಲಿ ಪ್ರಯಾಣಿಸಲು ಅವಕಾಶ

ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ಜುಲೈ 15 ರವರೆಗೆ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಾರಿಗೆ ಸಂಸ್ಥೆಯಿಂದ ಗುಡ್​ ನ್ಯೂಸ್​: ಜುಲೈ 15 ರವರೆಗೆ ಸಾಮಾನ್ಯ ಸೇವೆಯಲ್ಲಿ ಪ್ರಯಾಣಿಸಲು ಅವಕಾಶ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 30, 2023 | 10:47 PM

Share

ಬೆಂಗಳೂರು: ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (bmtc) ಸಿಹಿ ಸುದ್ದಿ ನೀಡಿದೆ. ಜುಲೈ 15 ರವರೆಗೆ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. 2022-23 ವಿದ್ಯಾರ್ಥಿ ಪಾಸ್ ಅಥವಾ 2023-24 ಶಾಲಾ/ಕಾಲೇಜು ಶುಲ್ಕ ರಶೀದಿ/ ಗುರುತಿನ ಚೀಟಿಯನ್ನು ತೋರಿಸುವ ಮೂಲಕ ಎಲ್ಲಾ ಸಾಮಾನ್ಯ ಸೇವೆಯಲ್ಲಿ 15-07-2023 ರವರೆಗೆ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ಪ್ರಕಟಣೆಯಲ್ಲಿ ಏನಿದೆ?

ರಾಜ್ಯ ಸರ್ಕಾರದ ನಿರ್ದೇಶನದಂತೆ ವಿದ್ಯಾಸಂಸ್ಥೆಗಳು 2023-24 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿರುತ್ತವೆ. ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಕೆಳಕಂಡಂತೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: SSLC Exams: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ BMTC ಬಸ್​ನಲ್ಲೂ ಉಚಿತ ಪ್ರಯಾಣ

1 ರಿಂದ 12 ನೇ ತರಗತಿವರೆಗೆ ಪದವಿ, ವೃತ್ತಿಪರ, ಸ್ನಾತಕೋತ್ತರ ಪದವಿ, ಸಂಜೆ ಕಾಲೇಜು, ಪಿ.ಹೆಚ್​​ಡಿ ವಿದ್ಯಾರ್ಥಿಗಳು 2022-23 ನೇ ಸಾಲಿನ ವಿದ್ಯಾರ್ಥಿ ಪಾಸು ಅಥವಾ 2023-24 ನೇ ಸಾಲಿನ ಶಾಲಾ, ಕಾಲೇಜಿನ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ಜುಲೈ 15ರವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆ ಹಬ್ಬ, ಮನೆ ಮನೆಗಳಿಂದ ಸೀರೆ, ಉಡುಗೊರೆ ನೀಡಿದ ಜನರು

ಇತ್ತೀಚಿಗೆ ಬಿಎಂಟಿಸಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪ್ರಯಾಣದ ಅವಕಾಶ ಕಲ್ಪಿಸಿತ್ತು. ಬಸ್​ಗಳಲ್ಲಿ ಪರೀಕ್ಷಾ ಹಾಲ್ ಟಿಕೆಟ್ ತೋರಿಸುವ ಮೂಲಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿತ್ತು. ಬೇಡಿಕೆಯ ಆಧಾರದ ಮೇಲೆ ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸುತ್ತದೆ ಎಂದು ಸಂಸ್ಥೆ ಹೇಳಿತ್ತು. ಅಲ್ಲದೆ ಪರೀಕ್ಷಾ ಕೇಂದ್ರಗಳ ಬಳಿ ಕೋರಿಕೆಯ ನಿಲುಗಡೆಗಳನ್ನು ಸಹ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.