AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​​ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್; ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ

ಸಿಲಿಕಾನ್ ಸಿಟಿ‌ ಮಂದಿ ಟ್ರಾಫಿಕ್ ಸಾಗರ ದಾಟಲು ನಿತ್ಯ ಪರದಾಡ್ತಿದ್ದಾರೆ. ಅದರಲ್ಲೂ ಸಿಲ್ಕ್ ಬೋರ್ಡ್ ಅಂದರೆ ಭಯ ಶುರುವಾಗುತ್ತೆ.‌ ಆ ಜಾಮ್‌ನಲ್ಲಿ ಒಮ್ಮೆ ತಗ್ಲಾಕೊಂಡ್ರೆ ಅಲ್ಲಿಗೆ ಅವರ ಕಥೆ ಮುಗಿತು ಅಂತಾನೆ ಅರ್ಥ. ಆದರೆ ವಾಹನ ಸವಾರರು ನಿಟ್ಟುಸಿರುವ ಬಿಡುವ ಸುದ್ದಿಯೊಂದಿದೆ. ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧವಾಗಿದ್ದು ಶೀಘ್ರದಲ್ಲಿ ಉದ್ಘಾಟನೆಯ ಸುಳಿವು ಸಿಕ್ಕಿದೆ.

ಟ್ರಾಫಿಕ್​​ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್; ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ
ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ
ಕಿರಣ್​ ಸೂರ್ಯ
| Edited By: |

Updated on: Jun 17, 2024 | 7:58 AM

Share

ಬೆಂಗಳೂರು, ಜೂನ್.17: ವಾಹನ ಸವಾರರ ದುಃಸ್ವಪ್ನವಾಗಿದ್ದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್​ನ (Central Silk Board Junction) ಜಾಮ್​​​ ಶೀಘ್ರದಲ್ಲಿಯೇ ಕೊನೆಯಾಗುವ ದಿನ ಹತ್ತಿರವಾಗುತ್ತಿದೆ. ರಾಗಿಗುಡ್ಡ-ಸೆಂಟ್ರಲ್ ಸಿಲ್ಕ್ ಬೋರ್ಡ್ ವರಗೆ ನಿರ್ಮಾಣವಾಗ್ತಿದ್ದ 3.3 ಕಿಮೀ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ (Double Decker Flyover) ಕಾಮಗಾರಿ ಕಂಪ್ಲಿಟ್ ಆಗಿದ್ದು, ಶೀಘ್ರದಲ್ಲಿಯೇ ಉದ್ಘಾಟನೆಗೆ ಸಜ್ಜಾಗ್ತಿದೆ.

ಅಂತಿಮ ತಪಾಸಣೆ ಬಾಕಿಯಿದ್ದು ಅದು ಮುಗಿಯುತ್ತಿದ್ದಂತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಈ ಡಬಲ್​​ ಡೆಕ್ಕರ್​ ಫ್ಲೈಓವರ್​ನಲ್ಲಿ ಮೆಟ್ರೋ ರೈಲು ಹಾಗೂ ವಾಹನ ಸಂಚರಿಸುತ್ತೆ. ಕೆಳರಸ್ತೆಯಿಂದ ಡಬ್ಬಲ್‌ ಡೆಕ್ಕರ್‌ನ ಮೊದಲ ಫ್ಲೈಓವರ್‌ 8 ಮೀ. ಎತ್ತರದಲ್ಲಿದ್ದರೆ, ಮೆಟ್ರೋ ವಯಡಕ್ಟ್‌ 16 ಮೀ. ಎತ್ತರದಲ್ಲಿದೆ. ಸಂಚಾರ ದಟ್ಟಣೆ ನಿವಾರಣೆ ದೃಷ್ಟಿಯಿಂದ ರಾಗಿಗುಡ್ಡದಿಂದ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ವರೆಗೆ ಸಿಗ್ನಲ್‌ ಮುಕ್ತವಾಗಿಸಲಾಗಿದೆ. ಎಚ್‌ಎಸ್‌ಆರ್‌ ಲೇಔಟ್‌ ಹಾಗೂ ಹೊಸೂರು ಲೇಔಟನ್ನು ಇದರಿಂದ ಅಡ್ಡಿಯಿಲ್ಲದೆ ತಲುಪಬಹುದು.

ಇದನ್ನೂ ಓದಿ: ಬೆಂಗಳೂರು ಜನತೆಗೆ ಮತ್ತೊಂದು ದರ ಏರಿಕೆ ಬಿಸಿ, ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ

ಇದರ ಜೊತೆಗೆ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಅನ್ನು ಸಂಪೂರ್ಣ ಸಿಗ್ನಲ್ ಮುಕ್ತಗೊಳಿಸುವ ಬಿಎಂಆರ್‌ಸಿಎಲ್‌ನಿಂದ ಬರೋಬ್ಬರಿ ಐದು ರ್ಯಾಂಪ್‌ಗಳ ನಿರ್ಮಾಣ ಮಾಡ್ತಿದೆ. ಒಂದು ರ್ಯಾಂಪ್ ರಾಗಿಗುಡ್ಡದಿಂದ ಡಬಲ್ ಡೆಕ್ಕರ್ ಫ್ಲೈ ಒವರ್ ಮೇಲೆ ಬರುವ ವಾಹನ ಸವಾರಿಗೆ ಸಿಲ್ಕ್ ಬೊರ್ಡ್ ನಲ್ಲಿ ಸಿಗ್ನಲ್‌ನಲ್ಲಿ ನಿಲ್ಲದೆ ಎಚ್‌ಎಸ್‌ಆರ್ ಲೇಔಟ್ ಮತ್ತು ಹೊಸೂರು ರಸ್ತೆಗೆ ತಲುಪಲು ಸಹಕಾರಿಯಾಗುತ್ತದೆ. ಮತ್ತೊಂದು ರ‍್ಯಾಂಪ್‌ ಬಿಟಿಎಂ ಲೇಔಟ್‌ನಿಂದ ಬರುವವರು ಔಟರ್ ರಿಂಗ್ ರೋಡ್ ಮತ್ತು ಹೊಸೂರು ರಸ್ತೆ ಪ್ರವೇಶಿಸಲು ಬಳಸಬಹುದು. ಇನ್ನೊಂದು ರ್ಯಾಂಪ್ ರಾಗಿಗುಡ್ಡದಿಂದ ಬರೋರು ಕೆ.ಆರ್. ಪುರಂ ಕಡೆಗೆ ಹೋಗಲು ನೆರವಾಗುತ್ತೆ.‌ ಈ ಬಗ್ಗೆ ವಾಹನ ಸವಾರ ರಾಮಚಂದ್ರ ರಾವ್ ಸಂತಸ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಸಿಲ್ಕ್ ಬೋರ್ಡ್ ಸಿಗ್ನಲ್ ಮುಕ್ತ ಮಾಡುವ ಕೆಲಸಕ್ಕೆ ವಾಹನ ಸವಾರರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಒಮ್ಮೆ ಓಪನ್ ಆದ್ರೆ ಸಾಕು ಅಂತ ಕಾಯ್ದಿದ್ದಾರೆ. ಆದಷ್ಟು ಬೇಗ ಓಪನ್ ಆಗಲಿ ಎನ್ನುವುದೇ ನಮ್ಮ ಆಶಯ ಕೂಡ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ