ಮನೆ ಯಜಮಾನಿಯರಿಗೆ ಗುಡ್ ನ್ಯೂಸ್: ಗೃಹಲಕ್ಷ್ಮಿಗಾಗಿ 4600 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ
ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರವು ಮಹಿಳಾ&ಮಕ್ಕಳ ಕಲ್ಯಾಣ ಇಲಾಖೆಗೆ ಹಣ ಬಿಡುಗಡೆ ಮಾಡಿದೆ. ಮೊದಲ ಕಂತಿನಲ್ಲಿ 4,600 ಕೋಟಿ ರೂ. ಬಿಡುಗಡೆ ಮಾಡಿದೆ. 2023-24ನೇ ಸಾಲಿನಲ್ಲಿ 17,500 ಕೋಟಿ ರೂ. ನಿಗದಿಪಡಿಸಲಾಗಿತ್ತು. ಇದೀಗ ಮೊದಲ ಕಂತಿನ ಹಣ ಬಿಡುಗಡೆ ಮಾಡಿಲಾಗಿದೆ.

ಬೆಂಗಳೂರು, ಸೆ.15: ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ(Gruha Lakshmi Scheme) ರಕ್ಷಾ ಬಂಧನದ ದಿನ ಮೈಸೂರಿನಲ್ಲಿ ರಾಹುಲ್ ಗಾಂಧಿಯವರ(Rahul Gandhi) ನೇತೃತ್ವದಲ್ಲಿ ಅದ್ಧೂರಿ ಚಾಲನೆ ಸಿಕ್ಕಿತ್ತು. ಆ ಬಳಿಕ ಅನೇಕ ಮಹಿಳೆಯರ ಖಾತೆಗೆ 2 ಸಾವಿರ ರೂ ಜಮೆಯಾಗಿತ್ತು. ಆದರೆ ಕೆಲ ಮನೆ ಒಡತಿಯರು ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು ಚಿಂತಿಸುತ್ತಿದ್ದರು. ಸದ್ಯ ಈಗ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಈ ಮೂಲಕ ನಿಮ್ಮ ಖಾತೆಯ ಮಾಹಿತಿ ಎಲ್ಲವೂ ಸರಿಯಾಗಿದ್ದು ನಿಮ್ಮ ಅರ್ಜಿ ಕೂಡ ಸ್ವೀಕಾರವಾಗಿದ್ರೆ ಯಾರಿಗೆ ಈ ತಿಂಗಳ ಹಣ ಬಂದಿಲ್ಲವೂ ಅವರಿಗೆ ಎರಡು ತಿಂಗಳ ಹಣ ಒಟ್ಟಿಗೆ ಬರಲಿದೆ.
ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರವು ಮಹಿಳಾ&ಮಕ್ಕಳ ಕಲ್ಯಾಣ ಇಲಾಖೆಗೆ ಹಣ ಬಿಡುಗಡೆ ಮಾಡಿದೆ. ಮೊದಲ ಕಂತಿನಲ್ಲಿ 4,600 ಕೋಟಿ ರೂ. ಬಿಡುಗಡೆ ಮಾಡಿದೆ. 2023-24ನೇ ಸಾಲಿನಲ್ಲಿ 17,500 ಕೋಟಿ ರೂ. ನಿಗದಿಪಡಿಸಲಾಗಿತ್ತು. ಇದೀಗ ಮೊದಲ ಕಂತಿನ ಹಣ ಬಿಡುಗಡೆ ಮಾಡಿಲಾಗಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳ ಅವಧಿಗೆ 4,600 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಯ ಎಲ್ಲ ಲಾಭಾರ್ಥಿಗಳ ಖಾತೆಗಳಿಗೆ ನಾಲ್ಕೈದು ದಿನಗಳಲ್ಲಿ ಹಣ ಜಮೆಯಾಗುತ್ತದೆ: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ
ಆಗಸ್ಟ್ 30ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಮ್ಮುಖದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಸಚಿವ ಸಂಪುಟದ ಸಚಿವರು, ಶಾಸಕರು ಕೂಡ ಭಾಗಿಯಾಗಿದ್ದರು. ಡಿಜಿಟಲ್ ಬಟನ್ ಒತ್ತಿ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಿದ್ದರು. ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿತರ ಖಾತೆಗೆ ₹2000 ರೂ. ಯನ್ನು ಅಧಿಕೃತವಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ