ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ

ಕೊಲ್ಕತ್ತಾದ ಟಿಟಾಗರ್​​ದಿಂದ ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ 6ನೇ ಹೊಸ ಮೆಟ್ರೋ ರೈಲು ಡಿಸೆಂಬರ್​ 23ರಿಂದ ತನ್ನ ಸಂಚಾರ ಆರಂಭಿಸಲಿದೆ. ಆ ಮೂಲಕ ಬಿಎಂಆರ್​ಸಿಎಲ್​ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​​ ನ್ಯೂಸ್​​ ಕೊಟ್ಟಿದೆ. ಇನ್ಮುಂದೆ ರೈಲಿಗಾಗಿ ಹೆಚ್ಚು ಹೊತ್ತು ಕಾಯುವ ಅವಶ್ಯಕತೆ ಇಲ್ಲ.

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ
ಯೆಲ್ಲೋ ಲೈನ್ ಮೆಟ್ರೋ
Edited By:

Updated on: Dec 22, 2025 | 8:15 PM

ಬೆಂಗಳೂರು, ಡಿಸೆಂಬರ್​ 22: ನಾಳೆಯಿಂದ ಅಂದರೆ ಡಿಸೆಂಬರ್ 23ರಿಂದ 6ನೇ ಹೊಸ ಮೆಟ್ರೋ (Namma Metro) ರೈಲು ಟ್ರ್ಯಾಕಿಗಿಳಿಯಲಿದೆ. ಆ ಮೂಲಕ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗುಡ್​ ನ್ಯೂಸ್ ನೀಡಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಆರನೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಹಾಗಾಗಿ ಹೆಚ್ಚು ಹೊತ್ತು ರೈಲಿಗಾಗಿ ಕಾಯುವಿಕೆಗೆ ಬ್ರೇಕ್​​ ಬೀಳಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್ (BMRCL)​​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಬಿಎಂಆರ್​ಸಿಎಲ್​​ ಮಾಧ್ಯಮ ಪ್ರಕಟಣೆ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹಳದಿ ಮಾರ್ಗದಲ್ಲಿ 6ನೇ ಮೆಟ್ರೋ ರೈಲನ್ನು ಡಿಸೆಂಬರ್ 23ರಿಂದ (ಮಂಗಳವಾರ) ಪ್ರಯಾಣಿಕರ ಸೇವೆಗೆ ಪ್ರಾರಂಭಿಸಲಾಗುತ್ತಿದೆ. ಈ ರೈಲಿನ ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಜನದಟ್ಟನೆಯ ಅವಧಿಯಲ್ಲಿ ಮೆಟ್ರೋ ಸೇವೆಗಳು ಪ್ರಸ್ತುತ ಇರುವ 15 ನಿಮಿಷಗಳ ಅಂತರದ ಬದಲು 13 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿವೆ. ಭಾನುವಾರದಂದು ಪೀಕ್ ಅವಧಿಯ ಸೇವಾ ಅವಧಿ 15 ನಿಮಿಷ ಇರಲಿದೆ.

ನಮ್ಮ ಮೆಟ್ರೋ ಟ್ವೀಟ್​​​

ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ನಿಲ್ದಾಣಗಳ ಎರಡೂ ಟರ್ಮಿನಲ್‌ಗಳಿಂದ ಮೊದಲ ಹಾಗೂ ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಮೆಟ್ರೋ ಸೇವೆಗಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಎಂಆರ್​ಸಿಎಲ್​​ ಕೋರಿದೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ

ಇತ್ತೀಚೆಗೆ ನವೆಂಬರ್ 18 ರಂದು ಕೊಲ್ಕತ್ತಾದ ಟಿಟಾಗರ್​​ನಿಂದ ಹೊರಟು ಆರನೇ ಡ್ರೈವರ್ ಲೆಸ್ ಮೆಟ್ರೋ ರೈಲು ಸೆಟ್​​ ಡಿಸೆಂಬರ್​ 3ರಂದು ಸಂಜೆ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಬಂದು ತಲುಪಿತ್ತು. ಈ ಹೊಸ ರೈಲು ಸೇರ್ಪಡೆಯಿಂದ ರೈಲುಗಳ ನಡುವಿನ ಓಡಾಟದ ಸಮಯದಲ್ಲಿ ಇಳಿಕೆಯಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:12 pm, Mon, 22 December 25