AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇತುವೆ ಮೇಲೆ ನಿಂತಿದ್ದ ಈಚರ್​ ವಾಹನಕ್ಕೆ ಗೂಡ್ಸ್ ವ್ಯಾನ್ ಡಿಕ್ಕಿ: ಮೂವರು ದಾರುಣ ಸಾವು

ಸಿಲಿಕಾನ್​​ ಸಿಟಿ ಬೆಂಗಳೂರಲ್ಲಿ ಮಧ್ಯರಾತ್ರಿ ನಡೆದ ಭೀಕರ ಅಪಘಾತಕ್ಕೆ ಮೂವರು ಬಲಿಯಾಗಿದ್ದಾರೆ. ಓಲ್ಡ್ ಮದ್ರಾಸ್ ರಸ್ತೆಯ ಮೇಡಹಳ್ಳಿ ಬ್ರಿಡ್ಜ್ ಮೇಲೆ ಈಚರ್ ವಾಹನಕ್ಕೆ ಹಿಂದೆಯಿಂದ ಗೂಡ್ಸ್ ವ್ಯಾನ್ ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದವರು ಉಸಿರು ಚೆಲ್ಲಿದ್ದಾರೆ. ಕೆ.ಆರ್. ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಸೇತುವೆ ಮೇಲೆ ನಿಂತಿದ್ದ ಈಚರ್​ ವಾಹನಕ್ಕೆ ಗೂಡ್ಸ್ ವ್ಯಾನ್ ಡಿಕ್ಕಿ: ಮೂವರು ದಾರುಣ ಸಾವು
ಈಚರ್​ ವಾಹನಕ್ಕೆ ಗೂಡ್ಸ್ ಆಟೋ ಡಿಕ್ಕಿImage Credit source: Tv9 Kannada
ಪ್ರದೀಪ್​ ಚಿಕ್ಕಾಟಿ
| Edited By: |

Updated on:Mar 22, 2026 | 11:30 AM

Share

ಬೆಂಗಳೂರು/ಹುಬ್ಬಳ್ಳಿ, ಮಾರ್ಚ್​​ 22: ನಿಂತಿದ್ದ ಈಚರ್​ ವಾಹನಕ್ಕೆ ಗೂಡ್ಸ್ ವ್ಯಾನ್​ ಡಿಕ್ಕಿಯಾಗಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆ.ಆರ್​​.ಪುರಂ ಸಂಚಾರ ಠಾಣಾ ವ್ಯಾಪ್ತಿಯ ಮೇಡಹಳ್ಳಿ ಮೇಲ್ಸೇತುವೆ ಮೇಲೆ ನಡೆದಿದೆ. ಅಪಘಾತದ ತೀವ್ರತೆಗೆ ಗೂಡ್ಸ್ ವಾಹನಲ್ಲಿದ್ದ ಮಣಿಕಂಠ, ಸುರೇಶ್, ಶ್ರೀನಿವಾಸ್ ಪ್ರಾಣ ಕಳೆದುಕೊಂಡಿದ್ದಾರೆ. ಮೃತರು ವೈಟ್ ಫೀಲ್ಡ್ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.

ಕೋಲಾರದಿಂದ ಬೆಂಗಳೂರಿಗೆ ಆಲೂಗಡ್ಡೆ ತುಂಬಿಸಿಕೊಂಡು ಬರ್ತಿದ್ದ ಕ್ಯಾಂಟರ್ ಮೇಡಹಳ್ಳಿ ಮೇಲ್ಸೇತುವೆ ಮೇಲೆ ಕೆಟ್ಟು ನಿಂತಿತ್ತು. ರಸ್ತೆ ಬದಿ ಕ್ಯಾಂಟರ್ ನಿಲ್ಲಿಸಿ ಚಾಲಕ ಟೈರ್ ಚೇಂಜ್ ಮಾಡುತ್ತಿದ್ದ. ಇದೇ ವೇಳೆ ನಿಂತಿದ್ದ ಕ್ಯಾಂಟರ್​​​ಗೆ ಹಿಂದೆಯಿಂದ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಮೃತರ ಪೈಕಿ ಸುರೇಶ್​​ ಟಾಟಾ ಏಸ್ ಚಾಲಕನಾಗಿದ್ದು, ಕಳೆದ 10 ವರ್ಷಗಳಿಂದ ಡ್ರೈವಿಂಗ್ ವೃತ್ತಿಯಲ್ಲಿದ್ದ. ಟಾಟಾ ಏಸ್​​ ವಾಹನ ರಾಜು ಎಂಬವರಿಗೆ ಸೇರಿದ್ದಾಗಿದ್ದು, ಪ್ರತಿದಿನ ಹೊಸಕೋಟೆ ಕಡೆಯಿಂದ ಬೆಂಗಳೂರು ಕಡೆಗೆ ಹೆಚ್ಚಾಗಿ ತರಕಾರಿ ಲೋಡ್ ಮಾಡಿಕೊಂಡು ಬರುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಡಿಸಿಪಿ ನೇಮಗೌಡ ಮತ್ತು ಕೆ.ಆರ್.ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಕೆ.ಆರ್.ಪುರಂ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಸಿನಿಮಾ ಸ್ಟೈಲ್​​ನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್; ರಾಜಾರೋಷವಾಗಿ ರಸ್ತೆ ಮಧ್ಯೆ ಶೋಕಿ

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು: ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಪ್ರಕರಣ ಸಂಬಂಧ ಬಾಲಕನ ಸಾವಿಗೆ ಕಾರಣರಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾನಗರ ಠಾಣೆಯ ಪೊಲೀಸರಿಂದ ನಾಗರಾಜ್ ಬಂಧನವಾಗಿದ್ದು, ಅಪ್ರಾಪ್ತ ಮಗನ ಕೈಯಲ್ಲಿ ಕಾರು ಕೊಟ್ಟು ತಂದೆಯೀಗ ಕಂಬಿ ಎಣಿಸುವಂತಾಗಿದೆ. ಆ್ಯಕ್ಷನ್​​ ರೀಲ್ಸ್‌ ವೇಳೆ ಆಡಿ ಕಾರು ಡಿಕ್ಕಿಯಾಗಿ ಸ್ಕೂಟಿಯಲ್ಲಿದ್ದ 5 ವರ್ಷದ ನಮಿಷ್ ಸಂಗಳದ ಮೃತಪಟ್ಟಿದ್ದ. ಹುಬ್ಬಳ್ಳಿ ನಗರದ ಶೇಜವಾಡ್ಕರ್ ಪ್ಲಾಟ್‌‌ನಲ್ಲಿ ಘಟನೆ ನಡೆದಿತ್ತು. ವಶಕ್ಕೆ ಪಡೆದಿದ್ದ ಬಾಲಕನನ್ನು ಬಾಲಮಂದಿರಕ್ಕೆ ಪೊಲೀಸರು ಕಳಿಸಿದ್ದು, ಹುಬ್ಬಳ್ಳಿಯ ವಿದ್ಯಾನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:12 am, Sun, 22 March 26

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ