ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳಿಂದ 8 ದಿನಗಳಲ್ಲಿ 3 ಕೋಟಿ ಮೌಲ್ಯದ ವಸ್ತುಗಳು ವಶ

|

Updated on: Sep 02, 2024 | 8:40 AM

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕೇವಲ 8 ದಿನಗಳಲ್ಲಿ 3 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ, ವಿದೇಶದಿಂದ ಅಕ್ರಮವಾಗಿ ಸಾಗಿಸಲು ಯತ್ನಿಸಿದ 31 ಪ್ರಯಾಣಿಕರಿಂದ 3 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ.

ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳಿಂದ 8 ದಿನಗಳಲ್ಲಿ 3 ಕೋಟಿ ಮೌಲ್ಯದ ವಸ್ತುಗಳು ವಶ
ಬೆಂಗಳೂರು ವಿಮಾನ ನಿಲ್ದಾಣ
Follow us on

ಬೆಂಗಳೂರು, ಸೆಪ್ಟೆಂಬರ್.02: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ಸ್ ಅಧಿಕಾರಿಗಳು ಕೇವಲ 8 ದಿನಗಳಲ್ಲಿ 3 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕಳ್ಳಸಾಗಣೆ ಮಾಡಲು ಯತ್ನಿಸಿದ 31 ಪ್ರಯಾಣಿಕರಿಂದ ಸಿಗರೇಟ್ ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಆಗಸ್ಟ್ 23 ಮತ್ತು 30 ರ ನಡುವೆ, ಥಾಯ್ಲೆಂಡ್, ಮಲೇಷ್ಯಾ, ಸಿಂಗಾಪುರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಬೆಂಗಳೂರಿಗೆ ಆಗಮಿಸಿದ ಸುಮಾರು 31 ಪ್ರಯಾಣಿಕರಿಂದ 3 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಯಾಣಿಕರ ರೂಪದಲ್ಲಿ ವಿದೇಶದಿಂದ ಭಾರೀ ಬೆಲೆ ಬಾಳುವ ವಸ್ತುಗಳನ್ನು ಈ ಆರೋಪಿಗಳು ಕದ್ದುಮುಚ್ಚಿ ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು ಪ್ರಯಾಣಿಕರ ವಿವರ, ಸುಳಿವು ಮತ್ತು ಇತರ ಆಧಾರದ ಮೇಲೆ ಅವರನ್ನು ತಡೆಹಿಡಿಯಲಾತು. ಬಳಿಕ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ ಅಕ್ರಮ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

3.2 ಕೋಟಿ ಮೌಲ್ಯದ 5,13,400 ಸಿಗರೇಟ್‌ಗಳು ಮತ್ತು ಇ-ಸಿಗರೇಟ್‌ಗಳು, 43 ಲ್ಯಾಪ್‌ಟಾಪ್‌ಗಳು ಮತ್ತು 16 ಐಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪೊಲೀಸ್​ ಎಂದು ಸುಳ್ಳು ಹೇಳಿ ಮಹಿಳೆಯನ್ನು ಮದುವೆಯಾಗಿ ವಂಚಿಸಿದ ವ್ಯಕ್ತಿಯ ಬಂಧನ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ

ಇತ್ತೀಚೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಶಂಕಿತ ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಬಂಧಿತನನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಈತ ಹಿಜ್ಬ್-ಉತ್-ಥರೀರ್ ಭಯೋತ್ಪಾದಕ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ಈತ ಭಾರತದಲ್ಲಿ ಇಸ್ಲಾಮಿಕ್ ಕ್ಯಾಲಿಫೇಟ್ ಅನ್ನು ಸ್ಥಾಪಿಸುವ ಗುರಿಯನ್ನು ಹೊಂದಿದ್ದ ಎಂದು ತಿಳಿದುಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ