ಕನ್ನಡವನ್ನು ಕುರೂಪಿ ಭಾಷೆ ಎಂದು ತೋರಿಸಿದ್ದಕ್ಕೆ ಕರ್ನಾಟಕ ಹೈಕೋರ್ಟ್ ಕ್ಷಮೆಯಾಚಿಸಿದ ಗೂಗಲ್

ಗೂಗಲ್ ಕ್ಷಮೆಯನ್ನು ಒಪ್ಪಿಕೊಂಡಿರುವ ಹೈಕೋರ್ಟ್​, ಅದರ ವಿರುದ್ಧ ದಾಖಲಾಗಿದ್ದ ಅರ್ಜಿಯನ್ನು ಹಿಂಪಡೆಯಲು ಅರ್ಜಿದಾರರಿಗೆ ಸೂಚಿಸಿತು.

ಕನ್ನಡವನ್ನು ಕುರೂಪಿ ಭಾಷೆ ಎಂದು ತೋರಿಸಿದ್ದಕ್ಕೆ ಕರ್ನಾಟಕ ಹೈಕೋರ್ಟ್ ಕ್ಷಮೆಯಾಚಿಸಿದ ಗೂಗಲ್
ಗೂಗಲ್ ಚಿಹ್ನೆ ಮತ್ತು ಕರ್ನಾಟಕ ಹೈಕೋರ್ಟ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 08, 2021 | 7:06 PM

ಬೆಂಗಳೂರು: ಕನ್ನಡವನ್ನು ‘ಭಾರತದ ಅತ್ಯಂತ ಕುರೂಪಿ ಭಾಷೆ’ (ugliest language in India) ಎಂದು ತೋರಿಸಿದ್ದ ಗೂಗಲ್ ಈ ಸಂಬಂಧ ಬುಧವಾರ ಕರ್ನಾಟಕ ಹೈಕೋರ್ಟ್​ ಎದುರು ಕ್ಷಮೆಯಾಚಿಸಿದೆ. ಗೂಗಲ್ ಕ್ಷಮೆಯನ್ನು ಒಪ್ಪಿಕೊಂಡಿರುವ ಹೈಕೋರ್ಟ್​, ಅದರ ವಿರುದ್ಧ ದಾಖಲಾಗಿದ್ದ ಅರ್ಜಿಯನ್ನು ಹಿಂಪಡೆಯಲು ಅರ್ಜಿದಾರರಿಗೆ ಸೂಚಿಸಿತು.

ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರಿದ್ದ ವಿಭಾಗೀಯ ನ್ಯಾಯಪೀಠವು ಗೂಗಲ್​ಗೆ ಕ್ಷಮೆ ನೀಡಿತು.

ಕನ್ನಡ ಭಾಷೆಯ ಬಗ್ಗೆ ಗೂಗಲ್​ನಲ್ಲಿ ಅವಹೇಳನ ಮಾಡಲಾಗಿದೆ ಎಂದು ದೂರಿದ್ದ ಅರ್ಜಿದಾರರು, ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಪತ್ರಿಕೆಯ ತುಣುಕನ್ನು ಲಗತ್ತಿಸಿದ್ದರು. ಮುಂದಿನ ದಿನಗಳಲ್ಲಿ ಹೀಗೆ ಆಗದಂತೆ ಎಚ್ಚರ ವಹಿಸಲಾಗುವುದು ಎಂಬ ಗೂಗಲ್​ನ ಭರವಸೆಯನ್ನೂ ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಲೀಗಲ್ ಅಟಾರ್ನಿಸ್ ಅಂಡ್ ಬ್ಯಾರಿಯಸ್ಟರ್ಸ್​ ಲಾ ಫರ್ಮ್​ ಮೂಲಕ ಆ್ಯಂಟಿ ಕರಪ್ಷನ್ ಕೌನ್ಸಿಲ್ ಆಫ್ ಇಂಡಿಯಾ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿತ್ತು. ಗೂಗಲ್ ಇದೀಗ ಕ್ಷಮೆಯಾಚಿಸಿರುವುದರಿಂದ ಅರ್ಜಿ ಹಿಂಪಡೆಯುವುದಾಗಿ ಅರ್ಜಿದಾರರ ಪರ ವಕೀಲರು ನ್ಯಾಯಾಲಯದಲ್ಲಿ ಹೇಳಿದರು.

ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗಿರುವ ಬಗ್ಗೆ ಗೂಗಲ್ ಇಂಡಿಯಾ ಜೂನ್ 3ರಂದು ಟ್ವಿಟರ್ ಹ್ಯಾಂಡ್ಲ್​ ಮೂಲಕ ಕ್ಷಮೆಯಾಚಿಸಿದೆ. ಈ ವಿಷಯವನ್ನು ಗಮನಿಸಿದ ನ್ಯಾಯಾಲಯವು ಅರ್ಜಿಯನ್ನು ಹಿಂಪಡೆಯಲು ಅವಕಾಶ ನೀಡಿತು.

‘ಅರ್ಜಿದಾರರ ಮನವಿಯ ಮೇರೆಗೆ ಅರ್ಜಿಯನ್ನು ಹಿಂಪಡೆಯಲು ಅವಕಾಶ ನೀಡಲಾಗಿದೆ’ ಎಂದು ನ್ಯಾಯಮೂರ್ತಿಗಳು ತಿಳಿಸಿದರು. ಭಾರತೀಯ ದಂಡ ಸಂಹಿತೆ (Indian Penal code – IPC) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ (Information Technology Act – IT Act) ಅನ್ವಯ ಗೂಗಲ್ ವಿರುದ್ಧ ಕ್ರಮ ಜರುಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾಗಳಿಗೆ ಸೂಚಿಸಬೇಕು ಎಂದು ಕೋರಿ ಅರ್ಜಿ ದಾಖಲಿಸಲಾಗಿತ್ತು. ಕನ್ನಡವನ್ನು ಅವಹೇಳನ ಮಾಡಿರುವುದರಿಂದ ಮಾನಹಾನಿಯಾಗಿದೆ. ಇದಕ್ಕೆ ದಂಡ ರೂಪದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ₹ 10 ಕೋಟಿ ಪಾವತಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

(Google apologises in Karnataka High Court for showing Kannada as ugliest language)

ಇದನ್ನೂ ಓದಿ: ಗೂಗಲ್​ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಪತ್ರ; ಕೊನೆಗೂ ಮ್ಯಾಪ್​ನಲ್ಲಿ ಸರಿಯಾಯ್ತು ಕರ್ನಾಟಕದ ಊರುಗಳ ಹೆಸರು

ಇದನ್ನೂ ಓದಿ: ಮತ್ತೊಮ್ಮೆ ಸಾಬೀತಾಯ್ತು ಕನ್ನಡಿಗರ ತಾಕತ್ತು; ಅಣ್ಣಾವ್ರ ವಿಚಾರದಲ್ಲಿ ತಪ್ಪು ತಿದ್ದಿಕೊಂಡ ಗೂಗಲ್​

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್