ಡೆಂಗ್ಯೂವನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ಸರ್ಕಾರ: ಸ್ವಚ್ಛತೆ ಕಾಪಾಡದವರಿಗೆ ದಂಡ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 03, 2024 | 2:47 PM

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಪಣತೊಟ್ಟಿದ್ದು, ಈ ಹಿನ್ನಲೆ ಡೆಂಗ್ಯೂ (Dengue) ವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಸರ್ಕಾರ ಘೋಷಿಸಿದೆ. ಜೊತೆಗೆ ಇನ್ನು ಮುಂದೆ ಸ್ವಚ್ಚತೆ ಕಾಪಾಡದವರಿಗೆ ದಂಡ ಬೀಳಲಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಡೆಂಗ್ಯೂವನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ಸರ್ಕಾರ: ಸ್ವಚ್ಛತೆ ಕಾಪಾಡದವರಿಗೆ ದಂಡ
ಡೆಂಗ್ಯೂವನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ಸರ್ಕಾರ
Follow us on

ಬೆಂಗಳೂರು, ಸೆ.03: ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಪಣತೊಟ್ಟಿದ್ದು, ಈ ಹಿನ್ನಲೆ ಡೆಂಗ್ಯೂ (Dengue) ವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಸರ್ಕಾರ(Government) ಘೋಷಿಸಿದೆ. ಇನ್ನು ಮುಂದೆ ನೈರ್ಮಲ್ಯ(ಸ್ವಚ್ಚತೆ) ಕಾಪಾಡದವರಿಗೆ ದಂಡ ಬೀಳಲಿದೆ. ಹೌದು, ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ ತಿದ್ದುಪಡಿ ಮಾಡಿ ಆಗಸ್ಟ್ 31ರ ಕರ್ನಾಟಕ ಗೆಜೆಟ್​​ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಮನೆ, ಖಾಲಿ ಜಾಗ, ಕಟ್ಟಡದ ಬಳಿ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಮಾಲೀಕರಿಗೆ ದಂಡ ವಿಧಿಸಬಹುದಾಗಿದೆ.

ನಿಯಮಗಳು ಹೀಗಿವೆ

  • ಸೊಳ್ಳೆಗಳ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು.
  • ಆಯಾ ಜಾಗದ ಮಾಲೀಕರು ಸೊಳ್ಳೆ ಬಾರದಂತೆ ಕ್ರಮ ವಹಿಸಬೇಕು.
  • ನಿಯಮವನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು.
  • ನಿವೇಶನ ಅಥವಾ ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಆ ರೀತಿ ಕಂಡು ಬಂದರೆ ನೋಟೀಸ್ ನೀಡಬೇಕು.
  • 24 ಗಂಟೆಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ.
  • ಸ್ವತ್ತಿನ ಮಾಲೀಕರು ನಿಗಾ ವಹಿಸಿದೆ ಇದ್ದರೆ, ಸಂಬಂಧ ಪಟ್ಟ ಅಧಿಕಾರಿ ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು.
  • ರಾಸಾಯನಿಕವನ್ನು ಸಿಂಪಡಿಸಬೇಕು. ಇದಕ್ಕೆ ಖರ್ಚಾದ ವೆಚ್ಚವನ್ನು ಸಂಬಂಧ ಪಟ್ಟವರು ನೀಡುವಂತೆ ಕ್ರಮ ವಹಿಸಬೇಕು.
  • ಬಿಬಿಎಂಪಿ ಹಾಗೂ ಮಂಗಳೂರಿನಲ್ಲಿ ತೆರೆದ ಸ್ಥಳದಲಿ ನಿಂತ ನೀರನ್ನ ತೆರವುಗೊಳಿಲು ಆಯಾ ಮಾಲೀಕರೇ ಹೊಣೆ
    ಸೊಳ್ಳೆ ಉತ್ಪತ್ತಿಯಾಗುವ ಸ್ಥಳವನ್ನ ಅಧಿಕಾರಿಗಳು ಪರಿಶೀಲನೆ ನಡೆಸಬೇಕು.

ಇದನ್ನೂ ಓದಿ:ಡೆಂಗ್ಯೂ ಜತೆಗೆ ಬೆಂಗಳೂರಿಗೆ ಜಿಕಾ ವೈರಸ್, ಮಂಕಿಪಾಕ್ಸ್ ಭೀತಿ: ವೈದ್ಯರು ನೀಡಿರುವ ಎಚ್ಚರಿಕೆಗಳೇನು? ಇಲ್ಲಿದೆ ವಿವರ

ಸ್ವಚ್ಛತೆ ಕಾಪಾಡದವರಿಗೆ ಬೀಳಲಿದೆ ದಂಡ

  • ಮನೆಗಳಿಗೆ ಹೊರಾಂಗಣ ಹಾಗೂ ಒಳಾಂಗಣದಲ್ಲಿ ನಿಯಮ ಉಲ್ಲಂಘಿಸಿದರೆ – 400 ರೂಪಾಯಿ ದಂಡ – ನಗರ ಪ್ರದೇಶ
    ಗ್ರಾಮಾಂತರದಲ್ಲಿ ಓಳಾಂಗಣ ಹಾಗೂ ಹೊರಾಂಗಣಕ್ಕೆ 200 ರೂಪಾಯಿ ದಂಡ.
  • ರೆಸ್ಟೋರಂಟ್ , ಹೋಟೆಲ್, ತಿನಿಸುಗಳು, ಲಾಡ್ಜ್, ರೆಸಾರ್ಟ್, ಹೋಂ ಸ್ಟೇ, ಮಾರ್ಕೆಟ್, ಪಾರ್ಕ್, ಮಾಲ್, ಸೂಪರ್ ಮಾರ್ಕೆಟ್ , ತೆಂಗಿನಕಾಯಿ ಮಾರಾಟಗಾರರು, ಕಾರ್ಖಾನೆ, ಕೈಗಾರಿಕೆ, ಥಿಯೇಟರ್, ಶಾಲೆಗಳು, ವಾಣಿಜ್ಯ ಸಂಸ್ಥೆಗಳು, ಕನ್ವೆಷನ್ ಹಾಲ್, ಇವುಗಳಲ್ಲಿ ರೂಲ್ಸ್ ಬ್ರೇಕ್ ಮಾಡಿದ್ರೆ ನಗರ ಪ್ರದೇಶದಲ್ಲಿ 1 ಸಾವಿರ ರೂ ದಂಡ.
  • ಗ್ರಾಮಾಂತರ ಭಾಗದಲ್ಲಿ 500 ರೂಪಾಯಿ ದಂಡ.
  • ತೆರೆದ ಸ್ಥಳಗಳಲ್ಲಿ ರೂಲ್ಸ್ ಬ್ರೇಕ್ ಮಾಡಿದರೆ – ನಗರದ ಪ್ರದೇಶದಲ್ಲಿ 2 ಸಾವಿರ ರೂಪಾಯಿ ದಂಡ,
    ಗ್ರಾಮಾಂತರದಲ್ಲಿ 1 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆ ಕಳೆದ ಆಗಸ್ಟ್​ 26 ರಂದು ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ  ಓವಿ ಟ್ರ್ಯಾಪ್ ಅಳವಡಿಕೆಗೆ ಮುಂದಾಗಿತ್ತು. ಓವಿ ಟ್ರ್ಯಾಪ್ ಅಳವಡಿಕೆಗೆ ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದರು. ಇದೀಗ ಡೆಂಗ್ಯೂವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಸರ್ಕಾರ ಘೋಷಿಸಿ, ಅದರ ನಿಯಂತ್ರಣಕ್ಕೆ ಪಣತೊಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ