ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೇ ಕರ್ತವ್ಯಕ್ಕೆ ಹಾಜರಾಗಬೇಕು -ಮುಖ್ಯ ಕಾರ್ಯದರ್ಶಿ ಆದೇಶ

| Updated By: ಸಾಧು ಶ್ರೀನಾಥ್​

Updated on: Jul 25, 2022 | 6:33 PM

ಬೆಳಗ್ಗೆ ಹತ್ತು ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಕಚೇರಿ ಅವಧಿ ಪೂರ್ಣವಾಗುವರೆಗೆ ‌ನಿಗದಿತ ಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು.

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೇ ಕರ್ತವ್ಯಕ್ಕೆ ಹಾಜರಾಗಬೇಕು -ಮುಖ್ಯ ಕಾರ್ಯದರ್ಶಿ ಆದೇಶ
ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೇ ಕರ್ತವ್ಯಕ್ಕೆ ಹಾಜರಾಗಬೇಕು -ಮುಖ್ಯ ಕಾರ್ಯದರ್ಶಿ ಆದೇಶ
Follow us on

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ತಮ್ಮ ತಮ್ಮ ಕಚೇರಿಗಳಿಗೆ ನಿಗದಿತ ಅವಧಿಗೆ ಕಚೇರಿಗೆ ಹಾಜರಾಗಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ (Chief Secretary Vandita Sharma) ಸುತ್ತೋಲೆ ಹೊರಡಿಸಿ, ಆದೇಶ ನೀಡಿದ್ದಾರೆ. ಬೆಳಗ್ಗೆ ಹತ್ತು ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಕಚೇರಿ ಅವಧಿ ಪೂರ್ಣವಾಗುವರೆಗೆ ‌ನಿಗದಿತ ಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು. ಕಚೇರಿ ಅವಧಿಯಲ್ಲಿ ಅನ್ಯ ಕೆಲಸದ ಮೇಲೆ ತೆರಳಿದರೆ ಕಾರಣ ನಮೂದಿಸಿ, ಮೇಲಧಿಕಾರಿಗಳ ಪೂರ್ವಾನುಮತಿ ಪಡೆಯಬೇಕು. ವಿಳಂಬ ಹಾಜರಾತಿ, ಕಚೇರಿ ಅವಧಿಯಲ್ಲಿ ಸ್ವಸ್ಥಾನದಲ್ಲಿ ಇಲ್ಲದ, ಮೇಲಧಿಕಾರಿಗಳ ಅನುಮತಿ ಪಡೆದಿಲ್ಲದ ನೌಕರರ ವಿರುದ್ಧ ಸಕ್ಷಮ‌ ಪ್ರಾಧಿಕಾರದಿಂದ ಶಿಸ್ತು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದಾರೆ.

ಬೆಂಗಳೂರಿನ ಕಲಾಗ್ರಾಮದಲ್ಲಿ ಕನ್ನಡಾಂಬೆಯ ಕಂಚಿನ ಪ್ರತಿಮೆ ನಿರ್ಮಾಣ: ಸಂಕ್ರಾಂತಿಯಿಂದ ಭುವನೇಶ್ವರಿಗೆ ನಿತ್ಯಾರ್ಚನೆ

ಬೆಂಗಳೂರು: ನಗರದ ಕಲಾಗ್ರಾಮದಲ್ಲಿ ಭುವನೇಶ್ವರಿಯ ಕಂಚಿನ ಪ್ರತಿಮೆ ಸ್ಥಾಪನೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಿದೆ. ಜ್ಞಾನಭಾರತಿಯಲ್ಲಿರುವ ಕಲಾಗ್ರಾಮದಲ್ಲಿ ಸುಮಾರು ಅರ್ಧ ಎಕರೆಯಷ್ಟು ಪ್ರದೇಶದಲ್ಲಿ ಭುವನೇಶ್ವರಿಯ‌ ಕಂಚಿನ ಪ್ರತಿಮೆ‌ ನಿರ್ಮಾಣ ಮಾಡಲು ಮುಂದಾಗಿದ್ದು ಪ್ರತಿಮೆ ನಿರ್ಮಾಣಕ್ಕೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ನಿರ್ದೇಶನ ನೀಡಿದ್ದಾರೆ.

ನಾಡ ದೇವಿ ಕನ್ನಡ ಭುವನೇಶ್ವರಿಯ ನಿತ್ಯ ಅರ್ಚನೆಗೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಈಗ ಇನ್ನೊಂದು ವಿನೂತನ ಯೋಜನೆ ರೂಪಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಭುವನೇಶ್ವರಿಯ ಬೃಹತ್ ಕಂಚಿನ ಪ್ರತಿಮೆ ನಿರ್ಮಾಣಕ್ಕೆ‌ ತೀರ್ಮಾನಿಸಿದೆ. ಬೆಂಗಳೂರಿನ ಜ್ಞಾನಭಾರತಿಯಲ್ಲಿರುವ ಕಲಾಗ್ರಾಮದಲ್ಲಿ ಸುಮಾರು ಅರ್ಧ ಎಕರೆಯಷ್ಟು ಪ್ರದೇಶದಲ್ಲಿ ಭುವನೇಶ್ವರಿಯ‌ ಕಂಚಿನ ಪ್ರತಿಮೆ‌ ನಿರ್ಮಾಣಕ್ಕೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ನಿರ್ದೇಶನ ನೀಡಿದ್ದಾರೆ. ತಜ್ಞರು ಅಂಗೀಕರಿಸಿದ ಕನ್ನಡತಾಯಿ ಭುವನೇಶ್ವರಿ ವಿಗ್ರಹವನ್ನೇ ಇಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹ ನಿರ್ಮಾಣದ ಜವಾಬ್ದಾರಿಯನ್ನು ಕರ್ನಾಟಕ ಶಿಲ್ಪಕಲಾ ಅಕಾಡೆಮಿಗೆ ನೀಡಲಾಗಿದೆ.

ಇನ್ನು ಈ ಬಗ್ಗೆ ಕನ್ನಡ-ಸಂಸ್ಕೃತಿ ಮತ್ತು ಇಂಧನ ಸಚಿವ ವಿ.ಸುನಿಲ್ ಕುಮಾರ್ ಮಾತನಾಡಿದ್ದು, ಕನ್ನಡ ತಾಯಿ ಭುವನೇಶ್ವರಿಯ ವಿಗ್ರಹವನ್ನು ಸರಕಾರದ ವತಿಯಿಂದ ಇದುವರೆಗೆ ಎಲ್ಲಿಯೂ ನಿರ್ಮಿಸಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಧಾರ ತೆಗೆದುಕೊಂಡಿದ್ದೇವೆ. ಮೂರು ತಿಂಗಳಲ್ಲಿ ಪ್ರತಿಮೆ‌ ನಿರ್ಮಾಣ ಕಾರ್ಯ ಪೂರ್ಣಗೊಳಿಸುವುದಕ್ಕೆ ಸೂಚನೆ‌ ನೀಡಿದ್ದೇನೆ ಎಂದರು.

Published On - 6:14 pm, Mon, 25 July 22