ವೇತನ ಹೆಚ್ಚಳಕ್ಕಾಗಿ ಬುಧವಾರ ಸರ್ಕಾರಿ ನೌಕರರ ಮುಷ್ಕರ: ಆದರೆ ಕಾವೇರಿ ನೀರು, ವಿದ್ಯುತ್ ಪೂರೈಕೆಗೆ ಯಾವುದೆ ಬಾಧೆಯಿಲ್ಲ!
7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ನಾಳೆ ಸರ್ಕಾರಿ ನೌಕರರು ಮುಷ್ಕರಕ್ಕೆ ನಿರ್ಧರಿಸಿದ್ದು ಜಲಮಂಡಳಿ ಮತ್ತು ವಿದ್ಯುತ್ ಸರಬರಾಜು ಕಂಪನಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಲಾಗಿದೆ.

ಬೆಂಗಳೂರು: 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ನಾಳೆ (ಮಾರ್ಚ್ 01) 10 ಲಕ್ಷ ಸರ್ಕಾರಿ ನೌಕರರು ರಾಜ್ಯಾದ್ಯಂತ ಅನಿರ್ಧಿಷ್ಟವಧಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. BBMP, ಬಿಡಿಎ ಸೇರಿದಂತೆ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈಗಾಗಲೇ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮುಷ್ಕರಕ್ಕೆ ವೇದಿಕೆ ಸಿದ್ಧವಾಗಿದೆ. ಆದ್ರೆ ಜಲಮಂಡಳಿ ಮತ್ತು ಕೆಪಿಟಿಸಿಎಲ್ ಎಂದಿನಂತೆ ಕಾರ್ಯ ನಿರ್ವಹಿಸಲಿದೆ.
ಜಲಮಂಡಳಿ ಸೇವೆ ಎಂದಿನಂತೆ ಇರಲಿದೆ
ನಾಳೆ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆ ಬೆಂಗಳೂರಿನಲ್ಲಿ ಕಾವೇರಿ ನೀರಿನ ಸಮಸ್ಯೆ ಎದುರಾಗಬಹುದು ಎಂಬ ಆತಂಕ ಹೆಚ್ಚಾಗಿತ್ತು. ಸದ್ಯ ಜಲಮಂಡಳಿ ಮುಖ್ಯ ಇಂಜಿನಿಯರ್ ಸುರೇಶ್ ಆತಂಕ ದೂರ ಮಾಡಿದ್ದಾರೆ. ಬೆಂಗಳೂರು ನಗರದಲ್ಲಿ ಜಲಮಂಡಳಿ ಸೇವೆ ಎಂದಿನಂತೆ ಇರಲಿದೆ ಎಂದು ಟಿವಿ9ಗೆ BWSSB ಮುಖ್ಯ ಇಂಜಿನಿಯರ್ ಸುರೇಶ್ ಮಾಹಿತಿ ನೀಡಿದ್ದಾರೆ. ಜಲಮಂಡಳಿ ಅಗತ್ಯ ಸೇವಾ ಅಡಿ ವ್ಯಾಪ್ತಿಯಲ್ಲಿ ಬರುತ್ತೆ. ಹೀಗಾಗಿ ಎಂದಿನಂತೆ ನೌಕರರು ಕರ್ತವ್ಯಕ್ಕೆ ಹಾಜರಾಗಲು ನಿರ್ಧಾರ ಮಾಡಿದ್ದಾರೆ. ಸರ್ಕಾರಿ ನೌಕರರ ಹೋರಾಟಕ್ಕೆ ಬೆಂಗಳೂರು ಜಲಮಂಡಳಿ ನೌಕರರ ಸಂಘದಿಂದ ನೈತಿಕ ಬೆಂಬಲವಿದೆ. ಎಲ್ಲಾ ನೌಕರರು ಸಾಮೂಹಿಕವಾಗಿ ಕರ್ತವ್ಯಕ್ಕೆ ಹಾಜರಾಗಲು ತೀರ್ಮಾನ ಮಾಡಿದ್ದಾರೆ. ಪಂಪಿಂಗ್ ಸ್ಟೇಷನ್ ಗಳಲ್ಲಿ ಎಂದಿನಂತೆ ನೌಕರರು ಕಾರ್ಯ ನಿರ್ವಹಿಸುತ್ತಾರೆ. ಎಲ್ಲಾ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಜಲಮಂಡಳಿ ಮೌಖಿಕ ಸೂಚನೆ ನೀಡಿದೆ. ಹೀಗಾಗಿ ಬೆಂಗಳೂರಿನಲ್ಲಿ ನಾಳೆ ಜಲಮಂಡಳಿ ಸೇವೆ ಎಂದಿನಂತೆ ಇರಲಿದೆ ಎಂದರು.
ಇದನ್ನೂ ಓದಿ: ಮಾರ್ಚ್ 1ರಿಂದ ರಾಜ್ಯ ಸರ್ಕಾರಿ ನೌಕರರ ಪ್ರತಿಭಟನೆ, ಯಾವೆಲ್ಲಾ ಸೇವೆಗಳಲ್ಲಿ ವ್ಯತ್ಯಯ? ಇಲ್ಲಿದೆ ಪಟ್ಟಿ
ವಿದ್ಯುತ್ ಪೂರೈಕೆಯಲ್ಲೂ ಯಾವುದೇ ವ್ಯತ್ಯಯ ಇಲ್ಲ
ಇನ್ನು ಮತ್ತೊಂದೆಡೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ. ಎಂದಿನಂತೆ ವಿದ್ಯುತ್ ಪೂರೈಕೆ ಮಾಡಲು ವಿದ್ಯುತ್ ಸರಬರಾಜು ಕಂಪನಿಗಳು ನಿರ್ಧಾರ ಮಾಡಿದ್ದಾವೆ. ಬೆಸ್ಕಾಂ, ಕೆಪಿಟಿಸಿಎಲ್ ಸಿಬ್ಬಂದಿ ನಾಳೆ ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ. ನಾಳೆ ಎಂದಿನಂತೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಟಿವಿ9ಗೆ ಕೆಪಿಟಿಸಿಎಲ್ ನೌಕರರ ಸಂಘದ ಕಾರ್ಯದರ್ಶಿ ಬಲರಾಮ್ ಮಾಹಿತಿ ನೀಡಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:59 am, Tue, 28 February 23




