ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪೊಲೀಸ್ ಇಲಾಖೆ ಜನ ಸ್ನೇಹಿಯಾಗಿ ಕೆಲಸ ಮಾಡಬೇಕು. ಅಪರಾಧ ನಡೆಯುವುದನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: preethi shettigar

Updated on:Aug 10, 2021 | 12:52 PM

ಬೆಂಗಳೂರು: ಪೊಲೀಸ್ ಇಲಾಖೆ ವ್ಯವಸ್ಥೆ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಅಲ್ಲದೆ ಪೊಲೀಸ್ (Police) ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಿದ್ದೇನೆ. ಹೊಸ ಸರ್ಕಾರದಲ್ಲಿ ಹೇಗೆ ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. ದಕ್ಷತೆ, ಪ್ರಾಮಾಣಿಕತೆ ಇನ್ನೂ ಹೆಚ್ಚಾಗಬೇಕೆಂದು ಸೂಚಿಸಿದ್ದೇವೆ. ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿಕೆ ನೀಡಿದ್ದಾರೆ.

ಪೊಲೀಸ್ ಇಲಾಖೆ ಜನ ಸ್ನೇಹಿಯಾಗಿ ಕೆಲಸ ಮಾಡಬೇಕು. ಅಪರಾಧ ನಡೆಯುವುದನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು. ಅಲ್ಲದೇ ಈಗ ಕೊವಿಡ್ ಹೆಚ್ಚಾಗುತ್ತಿರುವ ಸಮಯ. ಹೀಗಾಗಿ ಕೊವಿಡ್ ನಿರ್ವಹಣೆ ಸಂದರ್ಭದಲ್ಲಿನ ಸವಾಲಿನ ಬಗ್ಗೆ ಹೇಳಿದ್ದೇನೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪೊಲೀಸ್ ಕಲ್ಯಾಣ ಕಾರ್ಯಕ್ರಮ ಮಾಡಬೇಕು. ಇದರ ಜತೆಗೆ ಮೂಲ ಸೌಕರ್ಯ ಅಭಿವೃದ್ಧಿಗೆ ಯೋಜನೆ ಏನೆನಿದೆ ಅದನ್ನು ಮುಂದುವರಿಸುವ ಭರವಸೆಯನ್ನು ಕೂಡ ನೀಡಿದ್ದೇನೆ. ಅಲ್ಲದೆ ಗೃಹ ಇಲಾಖೆ ಹೇಗಿರಬೇಕು ಎಂಬ ಬಗ್ಗೆ ಈಗಾಗಲೇ ಗೃಹ ಸಚಿವರು ಕೂಡ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ಹಾಕದಂತೆ ಸಿಎಂ ಸೂಚನೆ ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲು, ತುರಾಯಿ ಬೇಡ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಅಲ್ಲದೇ ಈ ಕುರಿತು ಅಧಿಕೃತ ಅದೇಶ ಹೊರಡಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಚಿತ್ರೀಕರಣ ವೇಳೆ ನಿಯಮಗಳನ್ನು ಪಾಲಿಸುತ್ತಿಲ್ಲ, ಕಠಿಣ ನಿಯಮಗಳನ್ನು ಜಾರಿ ಮಾಡಿ ಶೀಘ್ರದಲ್ಲೇ ಆದೇಶ; ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು ದಸರಾ ಆಚರಣೆ, ಕೊವಿಡ್ 3ನೇ ಅಲೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯ ವಿವರ ಇಲ್ಲಿದೆ

Published On - 12:43 pm, Tue, 10 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ