AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಕೈ ಬಲಪಡಿಸುವ ಬದ್ಧತೆ ಸರ್ಕಾರಕ್ಕಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಮಾದಕ ವಸ್ತು ನಿಯಂತ್ರಣಕ್ಕೆ ಪೊಲೀಸರು ದಿಟ್ಟ ಹೆಜ್ಜೆ ಇಡಬೇಕು. ಪೊಲೀಸರ ಕೈ ಬಲಪಡಿಸುವ ಬದ್ಧತೆ ಸರ್ಕಾರಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪೊಲೀಸರ ಕೈ ಬಲಪಡಿಸುವ ಬದ್ಧತೆ ಸರ್ಕಾರಕ್ಕಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ
TV9 Web
| Edited By: |

Updated on:Aug 14, 2021 | 9:11 AM

Share

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಗಿದೆ. ನಾವು ಈ ಹಾದಿಯ ಸಿಂಹಾವಲೋಕನ ಮಾಡಬೇಕಿದೆ. ಬ್ರಿಷರು ನಾವು ಹೋದಮೇಲೆ ಈ ದೇಶ ನಾಶವಾಗಲಿದೆ ಎಂದಿದ್ದರು. ಆದರೆ ಈ ದೇಶವನ್ನು ಜಗತ್ತು ನೋಡುವ ಹಾಗೆ ಕಟ್ಟಿದ್ದೇವೆ. 75 ವರ್ಷದ ಹಿಂದೆ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆದಿತ್ತು. ಪಂಜಾಬ್‌ನ ಅಮೃತ್‌ಸರದಲ್ಲಿ ರಕ್ತದ ಕಲೆ ಇನ್ನೂ ಇದೆ. ಅವರ ಬಲಿದಾನ ವ್ಯರ್ಥ ಆಗಲು ಬಿಡಬಾರದು. ನಮ್ಮ ದೇಶವನ್ನು ಸದೃಢವಾಗಿ ಕಟ್ಟಬೇಕಿದೆ. ಪೊಲೀಸರು ದೈಹಿಕವಾಗಿ ಸದೃಢರಾಗಿರಬೇಕು. ಇದೇ ಇವತ್ತಿನ ಹೋರಾಟದ ಹಿಂದಿನ ತತ್ವ ಮತ್ತು ಸಿದ್ಧಾಂತ. ಈ ನಿಟ್ಟಿನಲ್ಲಿ ಮಾಧಕ ವಸ್ತು ನಿಯಂತ್ರಣಕ್ಕೆ ಪೊಲೀಸರು ದಿಟ್ಟ ಹೆಜ್ಜೆ ಇಡಬೇಕು. ಪೊಲೀಸರ ಕೈ ಬಲಪಡಿಸುವ ಬದ್ಧತೆ ಸರ್ಕಾರಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬಳಿಕ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿಕೆ ನೀಡಿದ್ದು, ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ ಮುಗಿದಿದೆ. ಪೊಲೀಸರು 24 ಗಂಟೆ ಒಳಗೆ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ವೀಕೆಂಡ್ ಲಾಕ್​ಡೌನ್​ ಜಾರಿ ಬೆಂಗಳೂರಿನಲ್ಲಿ ವೀಕೆಂಡ್ ಲಾಕ್​ಡೌನ್​ ಜಾರಿ ವಿಚಾರವಾಗಿ ಆರೋಗ್ಯ ಸಚಿವರ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬಳಿಕ ಅಕ್ರಮವಾಗಿ ಭಾರತದಲ್ಲಿ ವಿದೇಶಿಗರು ನೆಲೆಸಿರುವ ವಿಚಾರವಾಗಿ ಮಾತನಾಡಿದ ಅವರು ವೀಸಾ ಅವಧಿ ಮುಗಿದ ಬಳಿಕವೂ ವಿದೇಶಿಗರು ಇದ್ದಾರೆ. ಅವರನ್ನು ವಾಪಸ್ ಕಳಿಸಲು ಕೆಲ ಕಾನೂನು ತೊಡಕಿದೆ. ಸಂಬಂಧ ಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಝೀರೋ ಟ್ರಾಫಿಕ್ ಬೇಡ ಎಂದಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಝೀರೋ ಟ್ರಾಫಿಕ್ ಬಳಸಿದರು!

ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

Published On - 9:05 am, Sat, 14 August 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್