ಬಿಬಿಎಂಪಿ ಗುತ್ತಿಗೆದಾರರಿಗೆ ಹಣ ಬಿಡುಗಡೆ ವಿಚಾರದಲ್ಲಿ ತಾರತಮ್ಯ; ಶಾಸಕ ಮುನಿರತ್ನಗೆ ಶಾಕ್

ಬಿಜೆಪಿ ಶಾಸಕ ಮುನ್ನಿರತ್ನ ಪ್ರತಿನಿಧಿಸುವ ಆರ್​.ಆರ್​. ನಗರ ಕ್ಷೇತ್ರದಲ್ಲಿ ನಡೆದ ಕಾಮಗಾರಿಗಳ ಬಿಲ್ ಕ್ಲಿಯರ್ ಮಾಡದಂತೆ ಸರ್ಕಾರ ಸೂಚನೆ ನೀಡಿದೆ. ಈ ಮೂಲಕ ಬಿಲ್ ಬಿಡುಗಡೆಯಲ್ಲೂ ಶಾಸಕ ಮುನಿರತ್ನ ಹಾಗೂ ಡಿಕೆಶಿ ಬ್ರದರ್ಸ್ ಜಿದ್ದಾಜಿದ್ದಿ ಮುಂದುವರೆದಿದೆ ಎನ್ನಲಾಗುತ್ತಿದೆ. ಬಿಜೆಪಿ - ಜೆಡಿಎಸ್ ಮೈತ್ರಿ ಓಡಾಟದ‌ ಮುಚಂಚೂಣಿಯಲ್ಲಿ ಕಾಣಿಸಿಕೊಂಡಿರುವ ಮುನಿರತ್ನ ಅವರ ಕ್ಷೇತ್ರದ ಬಿಬಿಎಂಪಿ ಗುತ್ತಿಗೆದಾರರಿಗೆ ಬಿಲ್ ಬಿಡುಗಡೆ ಆಗಿಲ್ಲ.

ಬಿಬಿಎಂಪಿ ಗುತ್ತಿಗೆದಾರರಿಗೆ ಹಣ ಬಿಡುಗಡೆ ವಿಚಾರದಲ್ಲಿ ತಾರತಮ್ಯ; ಶಾಸಕ ಮುನಿರತ್ನಗೆ ಶಾಕ್
ಬಿಜೆಪಿ ಶಾಸಕ ಮುನಿರತ್ನ
Follow us
Shivaprasad
| Updated By: ಆಯೇಷಾ ಬಾನು

Updated on: Oct 07, 2023 | 1:19 PM

ಬೆಂಗಳೂರು, ಅ.07: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ 9 ವಾರ್ಡ್​ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಬಿಬಿಎಂಪಿ ಗುತ್ತಿಗೆದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. 2021ರ ಅಕ್ಟೋಬರ್ ತಿಂಗಳ ಕಾಮಗಾರಿ ಬಿಲ್ ಅನ್ನು ಬಿಡುಗಡೆ ಮಾಡಿದೆ.

ಬಿಜೆಪಿ ಶಾಸಕ ಮುನ್ನಿರತ್ನ ಪ್ರತಿನಿಧಿಸುವ ಆರ್​.ಆರ್​. ನಗರ ಕ್ಷೇತ್ರದಲ್ಲಿ ನಡೆದ ಕಾಮಗಾರಿಗಳ ಬಿಲ್ ಕ್ಲಿಯರ್ ಮಾಡದಂತೆ ಸರ್ಕಾರ ಸೂಚನೆ ನೀಡಿದೆ. ಈ ಮೂಲಕ ಬಿಲ್ ಬಿಡುಗಡೆಯಲ್ಲೂ ಶಾಸಕ ಮುನಿರತ್ನ ಹಾಗೂ ಡಿಕೆಶಿ ಬ್ರದರ್ಸ್ ಜಿದ್ದಾಜಿದ್ದಿ ಮುಂದುವರೆದಿದೆ ಎನ್ನಲಾಗುತ್ತಿದೆ. ಬಿಜೆಪಿ – ಜೆಡಿಎಸ್ ಮೈತ್ರಿ ಓಡಾಟದ‌ ಮುಚಂಚೂಣಿಯಲ್ಲಿ ಕಾಣಿಸಿಕೊಂಡಿರುವ ಮುನಿರತ್ನ ಅವರ ಕ್ಷೇತ್ರದ ಬಿಬಿಎಂಪಿ ಗುತ್ತಿಗೆದಾರರಿಗೆ ಬಿಲ್ ಬಿಡುಗಡೆ ಆಗಿಲ್ಲ.

ಬಾಕಿ ಬಿಲ್ ಬಿಡುಗಡೆಗೂ ಮುನ್ನ ಸರ್ಕಾರ ವಿಶೇಷ ತನಿಖಾ ತಂಡ (ಎಸ್​ಐಟಿ) ರಚನೆ ಮಾಡಿತ್ತು. ಎಸ್ಐಟಿ ತನಿಖೆಯಲ್ಲಿ ಆರ್.ಆರ್. ನಗರ ಕ್ಷೇತ್ರದ ಕಾಮಗಾರಿಗಳಲ್ಲಿ ಹಲವು ಲೋಪಗಳು ಕಂಡು ಬಂದಿದೆ ಎನ್ನಲಾಗಿದೆ. ಅಲ್ಲದೆ, ಸಾರ್ವಜನಿಕರಿಂದಲೂ ಆರ್.ಆರ್. ನಗರದ 9 ವಾರ್ಡ್​ಗಳಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ದೂರು ಬಂದಿದೆ. ಹಾಗಾಗಿ, ಆರ್.ಆರ್. ನಗರ ಕ್ಷೇತ್ರದ ಕಾಮಗಾರಿಗೆ ಸರ್ಕಾರ ಹಣ ಬಿಡುಗಡೆ ಮಾಡದಂತೆ ತಡೆ ಹಿಡಿದಿದೆ. ಉಳಿದಂತೆ ಬೇರೆ ಕ್ಷೇತ್ರಗಳಿಗೆ 73.07 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ವಲಯವಾರು ಬಾಕಿ ಮೊತ್ತ ಹಂಚಿಕೆ ಮಾಡಿ ಪಾಲಿಕೆ ಅನುಮೋದಿಸಿದೆ. ಹಂತ ಹಂತವಾಗಿ ಗುತ್ತಿಗೆದಾರರ ಬಿಲ್ ಕ್ಲಿಯರ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಗಾಂಜಾ ಮಾರಾಟ ಆರೋಪ: ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟ

ಇನ್ನು ಜೇಷ್ಠತೆ ಆಧಾರದಲ್ಲಿ ಒಟ್ಟು ಬಿಲ್ ನ ಶೇ. 75 ರಷ್ಟು ಬಿಲ್ ಬಿಡುಗಡೆ ಮಾಡಲಾಗಿದೆ. ದೂರುಗಳು ಮತ್ತು ಎಸ್ ಐಟಿ ತನಿಖೆ ಹೆಸರಲ್ಲಿ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಬಿಲ್ ಗಳಿಗೆ ಬ್ರೇಕ್ ಬಿದ್ದಿದೆ. ಆರ್.ಆರ್. ನಗರ ವಿಭಾಗದಲ್ಲಿ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಗಳಾದ 160, 129, 37, 73, 16, 17, 38, 42, 69ರ ಬಿಲ್ ಗಳಿಗೆ ಬ್ರೇಕ್ ಹಾಕಲಾಗಿದೆ.

ಯಾವ ವಲಯಕ್ಕೆ ಎಷ್ಟು ಬಿಡುಗಡೆ?

  • ಕೇಂದ್ರ  -1.15 ಕೋಟಿ ರೂ.
  • ಪೂರ್ವ -6.57 ಕೋಟಿ ರೂ.
  • ಪಶ್ಚಿಮ -6.32 ಕೋಟಿ ರೂ.
  • ಉತ್ತರ -9.23 ಕೋಟಿ ರೂ.
  • ಆರ್. ಆರ್. ನಗರ – 4.58 ಕೋಟಿ ರೂ.
  • ಬೊಮ್ಮನಹಳ್ಳಿ – 6.57 ಕೋಟಿ ರೂ.
  • ದಾಸರಹಳ್ಳಿ – 3.49 ಕೋಟಿ ರೂ.
  • ಯಲಹಂಕ – 32.71 ಕೋಟಿ ರೂ.
  • ಮಹದೇವಪುರ. – 4.59 ಕೋಟಿ ರೂ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ