ಬೆಂಗಳೂರು, ಅ.07: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ 9 ವಾರ್ಡ್ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಬಿಬಿಎಂಪಿ ಗುತ್ತಿಗೆದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. 2021ರ ಅಕ್ಟೋಬರ್ ತಿಂಗಳ ಕಾಮಗಾರಿ ಬಿಲ್ ಅನ್ನು ಬಿಡುಗಡೆ ಮಾಡಿದೆ.
ಬಿಜೆಪಿ ಶಾಸಕ ಮುನ್ನಿರತ್ನ ಪ್ರತಿನಿಧಿಸುವ ಆರ್.ಆರ್. ನಗರ ಕ್ಷೇತ್ರದಲ್ಲಿ ನಡೆದ ಕಾಮಗಾರಿಗಳ ಬಿಲ್ ಕ್ಲಿಯರ್ ಮಾಡದಂತೆ ಸರ್ಕಾರ ಸೂಚನೆ ನೀಡಿದೆ. ಈ ಮೂಲಕ ಬಿಲ್ ಬಿಡುಗಡೆಯಲ್ಲೂ ಶಾಸಕ ಮುನಿರತ್ನ ಹಾಗೂ ಡಿಕೆಶಿ ಬ್ರದರ್ಸ್ ಜಿದ್ದಾಜಿದ್ದಿ ಮುಂದುವರೆದಿದೆ ಎನ್ನಲಾಗುತ್ತಿದೆ. ಬಿಜೆಪಿ – ಜೆಡಿಎಸ್ ಮೈತ್ರಿ ಓಡಾಟದ ಮುಚಂಚೂಣಿಯಲ್ಲಿ ಕಾಣಿಸಿಕೊಂಡಿರುವ ಮುನಿರತ್ನ ಅವರ ಕ್ಷೇತ್ರದ ಬಿಬಿಎಂಪಿ ಗುತ್ತಿಗೆದಾರರಿಗೆ ಬಿಲ್ ಬಿಡುಗಡೆ ಆಗಿಲ್ಲ.
ಬಾಕಿ ಬಿಲ್ ಬಿಡುಗಡೆಗೂ ಮುನ್ನ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿತ್ತು. ಎಸ್ಐಟಿ ತನಿಖೆಯಲ್ಲಿ ಆರ್.ಆರ್. ನಗರ ಕ್ಷೇತ್ರದ ಕಾಮಗಾರಿಗಳಲ್ಲಿ ಹಲವು ಲೋಪಗಳು ಕಂಡು ಬಂದಿದೆ ಎನ್ನಲಾಗಿದೆ. ಅಲ್ಲದೆ, ಸಾರ್ವಜನಿಕರಿಂದಲೂ ಆರ್.ಆರ್. ನಗರದ 9 ವಾರ್ಡ್ಗಳಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ದೂರು ಬಂದಿದೆ. ಹಾಗಾಗಿ, ಆರ್.ಆರ್. ನಗರ ಕ್ಷೇತ್ರದ ಕಾಮಗಾರಿಗೆ ಸರ್ಕಾರ ಹಣ ಬಿಡುಗಡೆ ಮಾಡದಂತೆ ತಡೆ ಹಿಡಿದಿದೆ. ಉಳಿದಂತೆ ಬೇರೆ ಕ್ಷೇತ್ರಗಳಿಗೆ 73.07 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ವಲಯವಾರು ಬಾಕಿ ಮೊತ್ತ ಹಂಚಿಕೆ ಮಾಡಿ ಪಾಲಿಕೆ ಅನುಮೋದಿಸಿದೆ. ಹಂತ ಹಂತವಾಗಿ ಗುತ್ತಿಗೆದಾರರ ಬಿಲ್ ಕ್ಲಿಯರ್ ಮಾಡಲಾಗುತ್ತಿದೆ.
ಇದನ್ನೂ ಓದಿ: ಗಾಂಜಾ ಮಾರಾಟ ಆರೋಪ: ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟ
ಇನ್ನು ಜೇಷ್ಠತೆ ಆಧಾರದಲ್ಲಿ ಒಟ್ಟು ಬಿಲ್ ನ ಶೇ. 75 ರಷ್ಟು ಬಿಲ್ ಬಿಡುಗಡೆ ಮಾಡಲಾಗಿದೆ. ದೂರುಗಳು ಮತ್ತು ಎಸ್ ಐಟಿ ತನಿಖೆ ಹೆಸರಲ್ಲಿ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಬಿಲ್ ಗಳಿಗೆ ಬ್ರೇಕ್ ಬಿದ್ದಿದೆ. ಆರ್.ಆರ್. ನಗರ ವಿಭಾಗದಲ್ಲಿ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಗಳಾದ 160, 129, 37, 73, 16, 17, 38, 42, 69ರ ಬಿಲ್ ಗಳಿಗೆ ಬ್ರೇಕ್ ಹಾಕಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ