ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನಿಸಿದ ಸರ್ಕಾರ; ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನಿಸಿದ ಸರ್ಕಾರ;  ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ
ಪ್ರಾತಿನಿಧಿಕ ಚಿತ್ರ

ಸರ್ಕಾರಿ ಪ್ರಥಮ ದರ್ಜೆಯ ಕಾಲೇಜುಗಳಲ್ಲಿ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಈ ಕುರಿತು ಇಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

TV9kannada Web Team

| Edited By: preethi shettigar

Jan 17, 2022 | 8:34 PM

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಅರ್ಜಿ ಆಹ್ವಾನಿಸಿದೆ. 2021-22ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ (guest lecturers) ನೇಮಕಕ್ಕೆ ಸರ್ಕಾರ ಮುಂದಾಗಿದ್ದು, ಅರ್ಹರು ಅರ್ಜಿಸಲ್ಲಿಸಲು ಜನವರಿ 31 ಕೊನೆಯ ದಿನಾಂಕವಾಗಿದೆ. ಸರ್ಕಾರಿ ಪ್ರಥಮ ದರ್ಜೆಯ ಕಾಲೇಜುಗಳಲ್ಲಿ (First grade college) ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಈ ಕುರಿತು ಇಂದು ಕಾಲೇಜು ಶಿಕ್ಷಣ ಇಲಾಖೆ ( college education department) ಸುತ್ತೋಲೆ ಹೊರಡಿಸಿದೆ.

ಬೆಂಗಳೂರು:ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ

ಕರ್ನಾಟಕ ಸರ್ಕಾರವು ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇಡೀ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಿದ್ದು, ಯುಜಿಸಿ ನಿಯಮ ಅನುಸರಿಸಿ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಈವರೆಗೆ ₹ 13,000 ವೇತನ ಪಡೆಯುತ್ತಿದ್ದವರು ಮುಂದಿನ ದಿನಗಳಲ್ಲಿ ₹ 32,000 ಪಡೆಯಲಿದ್ದಾರೆ. ₹ 11,000 ವೇತನ ಪಡೆಯುತ್ತಿದ್ದವರು ₹ 28,000 ಪಡೆಯಲಿದ್ದಾರೆ. ಪ್ರತಿ ತಿಂಗಳ 10ನೇ ತಾರೀಖಿನೊಳಗೆ ವೇತನ ಪಾವತಿಗೆ ವ್ಯವಸ್ಥೆ ರೂಪಿಸಲಾಗುವುದು ಎಂದು ಸರ್ಕಾರವು ಭರವಸೆ ನೀಡಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕಳೆದ ಒಂದು ತಿಂಗಳಿನಿಂದ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರು. ಹೋರಾಟದ ನಂತರ ಎಚ್ಚೆತ್ತ ಸರ್ಕಾರವು ಉಪನ್ಯಾಸಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲು ಮುಂದಾಗಿತ್ತು.

ಸಂಕ್ರಾಂತಿ ಕೊಡುಗೆ ಎಂದ ಬಸವರಾಜ ಬೊಮ್ಮಾಯಿ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ನಿರ್ಧಾರವು ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ನೀಡಿರುವ ಸಂಕ್ರಾಂತಿ ಕೊಡುಗೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಉಪನ್ಯಾಸಕರ ಬೇಡಿಕೆಯ ಶಿಫಾರಸುಗಳಿಗೆ ಸಮ್ಮತಿ ಸೂಚಿಸುವ ಕಡತವನ್ನು ಮುಖ್ಯಮಂತ್ರಿ ಜ.14 ವಿಲೇವಾರಿ ಮಾಡಿದರು. ಇವು ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆಯಾಗಿದ್ದವು. ಈ ಸಂಬಂಧ ರಚಿಸಲಾಗಿದ್ದ ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಅನುಕೂಲ ಆಗಲಿದೆ. ಕರ್ನಾಟಕ ಸರ್ಕಾರದ ವತಿಯಿಂದ ಎಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಶುಭಾಶಯಗಳನ್ನು ಕೋರುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Salary Hike: ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ

ರಾಜ್ಯದಲ್ಲಿ ನೂತನ ಸ್ಟಾರ್ಟ್ ಅಪ್ ಪಾಲಿಸಿ ತಂದಿದ್ದೇವೆ: ಸಚಿವ ಡಾ.ಅಶ್ವತ್ಥ್ ನಾರಾಯಣ

Follow us on

Related Stories

Most Read Stories

Click on your DTH Provider to Add TV9 Kannada