ಇಂದಿರಾ ಕ್ಯಾಂಟೀನ್‌ ಪುನಾರಂಭಕ್ಕೆ ಸರ್ಕಾರ ಸೂಚನೆ: ಮತ್ತೆ ತೆರೆಯಲಿದೆ ಬಡಜನರ ಸ್ಟಾರ್ ಹೋಟೆಲ್ ಬಾಗಿಲು

ಬಡವರು, ನಿರ್ಗತಿಕರು, ಹಸಿದವರ ಪಾಲಿಗೆ ಅನ್ನಕೇಂದ್ರವಾಗಿದ್ದ ಇಂದಿರಾ ಕ್ಯಾಂಟೀನ್​ ಮರು ಆರಂಭಕ್ಕೆ ಇದೀಗ ಸರ್ಕಾರ ಸೂಚಿಸಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್‌ ಪುನಾರಂಭಕ್ಕೆ ಸರ್ಕಾರ ಸೂಚನೆ: ಮತ್ತೆ ತೆರೆಯಲಿದೆ ಬಡಜನರ ಸ್ಟಾರ್ ಹೋಟೆಲ್ ಬಾಗಿಲು
ಇಂದಿರಾ ಕ್ಯಾಟೀನ್​
Follow us
|

Updated on: May 24, 2023 | 1:01 PM

ಬೆಂಗಳೂರು: ಬಡವರು, ನಿರ್ಗತಿಕರು, ಹಸಿದವರ ಪಾಲಿಗೆ ಅನ್ನಕೇಂದ್ರವಾಗಿದ್ದ ಇಂದಿರಾ ಕ್ಯಾಂಟೀನ್(Indira canteen)​ ಮರು ಆರಂಭಕ್ಕೆ ಇದೀಗ ಸರ್ಕಾರ ಸೂಚಿಸಿದೆ ಎಂದು ಬಿಬಿಎಂಪಿ(BBMP) ವಿಶೇಷ ಆಯುಕ್ತ ಜಯರಾಂ ರಾಯ್‌ಪುರ(Jayaram Raipura) ಹೇಳಿದ್ದಾರೆ. ಇನ್ನು ಕೆಲವು ಕಡೆ ಕ್ಯಾಂಟೀನ್‌ನಲ್ಲಿ ಡಿಮಾಂಡ್ ಕಡಿಮೆ ಆಗಿತ್ತು. ಈ ಕಾರಣಕ್ಕೆ ಇರುವ ಕ್ಯಾಂಟೀನ್‌ಗಳ ಪೈಕಿ 10 ಮೊಬೈಲ್ ಕ್ಯಾಂಟೀನ್ ಕ್ಲೋಸ್ ಮಾಡಲಾಗಿತ್ತು. ಇದೀಗ 243 ಸ್ಥಳಗಳಲ್ಲೂ ಕ್ಯಾಂಟೀನ್ ಆರಂಭಿಸ್ತೇವೆ. ಈಗಾಗಲೇ ಇಂದಿರಾ ಕ್ಯಾಂಟೀನ್ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಕ್ಯಾಂಟೀನ್​ ಅಡುಗೆ ಕೋಣೆ ವಸ್ತುಗಳನ್ನು ರೀಪ್ಲೇಸ್ ಮಾಡಬೇಕಿದೆ. ಉಪಾಹಾರ ಬೆಲೆ 5 ರಿಂದ 10 ರೂಪಾಯಿಗೆ ಏರಿಕೆ ಮಾಡಲಾಗುತ್ತೆ. ರಾತ್ರಿ ಊಟಕ್ಕೆ ಬೇಡಿಕೆ ಕಡಿಮೆ, ಅದು ಹಾಗೆಯೇ ಮುಂದುವರಿದಿದೆ. ಜೊತೆಗೆ ಇನ್ನು ಹಣ ಪಾವತಿಯಾಗಿಲ್ಲ ಅನ್ನೋ ದೂರು ಕೇಳಿಬಂದಿದೆ. ನಾವು ಮಾರ್ಷಲ್ಸ್‌ ನೀಡುವ ಆಧಾರದ ಮೇಲೆ ಮೊತ್ತ ಪಾವತಿ ಮಾಡಿದ್ದೇವೆ. 1 ತಿಂಗಳಲ್ಲಿ‌ ಟೆಂಡರ್, ಗುತ್ತಿಗೆದಾರರಿಗೆ ಹಳೇ ಪೇಮೆಂಟ್ ಆಗಲಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಹೇಳಿದರು.

2013 ರಲ್ಲಿ ಸಿದ್ದರಾಮಯ್ಯ ಮೊದಲ ಬಾರಿಗೆ ಸಿಎಂ ಆದಾಗ ಕೊಟ್ಟ 168 ಭರವಸೆಗಳಲ್ಲಿ ಅತೀ ಹೆಚ್ಚು ಮಹತ್ವ ಪಡೆದುಕೊಂಡಿದ್ದು, ಬಡವರು, ನಿರ್ಗತಿಕರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್ ನಿರೀಕ್ಷೆಯಂತೆ ಎಲ್ಲ ವರ್ಗದ ಜನರ ಹಸಿವು ನೀಗಿಸಿತ್ತು. ಆ ನಂತರ ಸಮ್ಮಿಶ್ರ ಸರ್ಕಾರದಲ್ಲಿ ಈ ಯೋಜನೆ ಮುಂದುವರೆಸಲಾಗಿತ್ತಾದ್ರೂ, ಬಿಜೆಪಿ ಆಡಳಿತದಲ್ಲಿ ಕೆಲವು ಕಡೆಗಳಲ್ಲಿ ಬಂದ್ ಮಾಡಿಸಲಾಗಿತ್ತು. ಸದ್ಯ ಸಿದ್ದರಾಮಯ್ಯ ಘೋಷಿಸಿದ್ದ ಯೋಜನೆ ಮತ್ತೆ ಮುನ್ನೆಲೆಗೆ ಬಂದಿದ್ದು, 5ರೂಗೆ ಉಪಹಾರ, 10 ರೂ ಗೆ ಊಟ, ಎಂತಹ ಬಡವರಾದ್ರೂ ಸಹ ಇಷ್ಟು ಹಣದಲ್ಲಿ ಮೂರು ಹೊತ್ತು ಹೊಟ್ಟೆ ತುಂಬಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ:Mysuru News: ಸಿದ್ದರಾಮಯ್ಯಗೆ ಸಿಎಂ ಪಟ್ಟ; ಮೈಸೂರು ಇಂದಿರಾ ಕ್ಯಾಂಟೀನಲ್ಲಿ ಭರ್ಜರಿ ಹೋಳಿಗೆ ಊಟ

ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ರಾಜ್ಯದ ಇಂದಿರಾ ಕ್ಯಾಂಟೀನ್‌ನಲ್ಲಿ ಹೋಳಿಗೆ ಊಟ

ಬಾಗಲಕೋಟೆ: ಅದು ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಬಡವರು, ನಿರ್ಗತಿಕರು ಸೇರಿ ಎಲ್ಲರ ಹಸಿವು ನೀಗಿಸಿದ್ದ, ಜೊತೆಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಮೈಲೇಜ್ ಕೊಟ್ಟಿದ್ದ ಇಂದಿರಾ ಕ್ಯಾಂಟೀನ್ ಮತ್ತೆ ಇದೀಗ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿದ್ದಕ್ಕೆ ಸ್ಪೇಷಲ್ ಸಿಹಿ ಊಟ ಬಡಿಸಲಾಗಿತ್ತು. ಘಮಘಮಿಸುವ ಹೋಳಿಗೆ, ಸಾಲಾಗಿ ನಿಂತು ಊಟ ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು. ಸುಚಿ-ರುಚಿಯಾಗಿ ಅಡುಗೆ ತಯಾರಿಸಿ, ಜನತೆಗೆ ಬಡಿಸೋಕೆ ಸಿದ್ದತೆ ನಡೆಸಿರುವ ಬಾಣಸಿಗರು. ಅಂದ ಹಾಗೆ ಈ ದೃಶ್ಯಗಳು ಕಂಡುಬಂದಿದ್ದು ಬಾಗಲಕೋಟೆ ನಗರದ ಇಂದಿರಾ ಕ್ಯಾಂಟೀನ್‌ನಲ್ಲಿ. ಹೌದು, ರಾಜ್ಯದದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಹಿನ್ನೆಲೆ ರಾಜ್ಯದ ಹಲವು ಕಡೆ ಇಂದಿರಾ ಕ್ಯಾಂಟೀನ್‌ನಲ್ಲಿ ನಿತ್ಯದ ಊಟದ ಬದಲು ಸ್ಪೇಷಲ್ ಆಗಿ ಹೋಳಿಗೆ ಕೊಡಲಾಗಿತ್ತು. ಬೆಳಿಗ್ಗೆ ಉಪಹಾರಕ್ಕೆ 5 ರೂ ಗೆ ಮೂರು ಇಡ್ಲಿ, ಮಧ್ಯಾಹ್ನ ಊಟಕ್ಕೆ ಅನ್ನ ಸಾಂಬಾರ್​ ಜೊತೆಗೆ ಮೊಸರನ್ನ ಕೊಡಲಾಗುತ್ತೆ. ಆದರೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಅಲ್ಲದೇ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ. ಹಾಗಾಗಿ, ಇಂದಿರಾ ಕ್ಯಾಂಟೀನ್‌ನಲ್ಲಿ ಹೋಳಿಗೆ ನೀಡಿ ಬರುವ ಜನತೆಗೆ ಸಿಹಿ ಊಟ ಕೊಟ್ಟಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!