ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್‌ ಕೇಸ್​: ಸ್ಪೋಟಕ ಮಾಹಿತಿ ಬಹಿರಂಗ

ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡಿ ಅವರಿಂದ ಹಣ ಪಡೆಯುತ್ತಿದ್ದ ಮಾಜಿ ಹೆಡ್ ಕಾನ್‌ಸ್ಟೇಬಲ್, ಆರೋಪಿ ನಿಗಪ್ಪನನ್ನು ಬಂಧಿಸಲಾಗಿದೆ. ಲೋಕಾಯುಕ್ತ ಪೊಲೀಸರ ವಿಚಾರಣೆ ವೇಳೆ ಆರೋಪಿ ನಿಂಗಪ್ಪ ಸ್ಪೋಟಕ ವಿಚಾರಗಳನ್ನು ಬಾಯಿ ಬಿಟ್ಟಿದ್ದಾನೆ. ಈ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ನಿಂಗಪ್ಪನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್‌ ಕೇಸ್​: ಸ್ಪೋಟಕ ಮಾಹಿತಿ ಬಹಿರಂಗ
ಲೋಕಾಯುಕ್ತ
Edited By:

Updated on: Jun 16, 2025 | 9:11 PM

ಬೆಂಗಳೂರು, ಜೂನ್ 16: ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್‌ (Government Officers Blackmail) ಮಾಡಿ ಹಣ ವಸೂಲಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ (Lokayukta Police) ವಿಚಾರಣೆ ವೇಳೆ ಮಾಜಿ ಹೆಡ್​ಕಾನ್​ಸ್ಟೇಬಲ್​, ಆರೋಪಿ ನಿಂಗಪ್ಪ ಸ್ಫೋಟಕ ಮಾಹಿತಿ ಹೇಳಿದ್ದಾನೆ. ಬ್ಲ್ಯಾಕ್‌ಮೇಲ್‌ ಮಾಡಿ ಹಲವು ಅಧಿಕಾರಿಗಳಿಂದ ಪಡೆದ ಹಣವನ್ನು ಬಿಟ್‌ಕಾಯಿನ್‌ನಲ್ಲಿ ಹೂಡಿಕೆ ಮಾಡಿದ್ದಾಗಿ ಹೇಳಿದ್ದಾನೆ. ಆರೋಪಿ ನಿಂಗಪ್ಪ ದಾಳಿ ಮಾಡುವುದಾಗಿ ಹೆದರಿಸಿ ಸರ್ಕಾರಿ ಅಧಿಕಾರಿಗಳಿಗೆ ಹೆದರಿಸಿ, ಅವರಿಂದ ಶೇಷಾದ್ರಿಪುರಂ, ಆನಂದರಾವ್ ವೃತ್ತ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಹಣ ಪಡೆದಿದ್ದರು ಎಂದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ.

ಸಚಿವರ ಆಪ್ತ ಸಹಾಯಕರು ಭಾಗಿ!

ಅಲ್ಲದೆ, ಆರೋಪಿ ನಿಂಗಪ್ಪ ಇಬ್ಬರು ಸಚಿವರ ಆಪ್ತ ಸಹಾಯಕರ ಹೆಸರುಗಳನ್ನು ಸಹಿತ ಲೋಕಾಯುಕ್ತ ಪೊಲೀಸರಿಗೆ ಮುಂದೆ ಹೇಳಿದ್ದಾನೆ. ಈ ಪ್ರಕರಣದಲ್ಲಿ ಸಚಿವರಿಬ್ಬರ ಆಪ್ತ ಸಹಾಯಕರ ಪಾತ್ರ ಏನು ಎಂಬುವುದು ಇನ್ನೂ ಬಹಿರಂಗವಾಗಬೇಕಿದೆ.

ಆರೋಪಿ ನಿಂಗಪ್ಪ ನಾಯ್ಯಾಂಗ ಬಂಧನಕ್ಕೆ

ಪೊಲೀಸ್ ಕಸ್ಟಡಿ ಅವಧಿ ಮಂಗಳವಾರಕ್ಕೆ (ಜೂ.17) ಅಂತ್ಯವಾಗುಲಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಸೋಮವಾರ (ಜೂ.16) ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಲೋಕಾಯುಕ್ತ ನ್ಯಾಯಾಲಯ14 ದಿನಗಳ ಕಾಲ (ಜೂನ್ 30) ನ್ಯಾಯಾಂಗ ಬಂಧನಕ್ಕೆ ನೀಡಿದೆ. ಇದೇ ವೇಳೆ ನಿಂಗಪ್ಪ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದರು. ನ್ಯಾಯಾಲಯ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ.

ಇದನ್ನೂ ಓದಿ
ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್:ಹಲವಡೆ ಲೋಕಾಯುಕ್ತ ದಾಳಿ
ಬೆಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿಯ ಇಬ್ಬರು ಇಂಜಿನಿಯರ್​ಗಳು
ಕಾನೂನು ಮಾಪನ ನಿರೀಕ್ಷಕರ ಬಳಿ 4 ಕೋಟಿ ರೂ. ಆಸ್ತಿ, 9 ಎಕರೆ ಜಮೀನು!
8 ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಕಂತೆ-ಕಂತೆ ಹಣ, ವಜ್ರ-ವೈಡೂರ್ಯ ಪತ್ತೆ

ಇನ್ನು, ಆರೋಪಿ ನಿಂಗಪ್ಪ ಹೇಳಿರುವಂತೆ ಈ ಪ್ರಕರಣದಲ್ಲಿ ಭಾಗಿಯಾಗಿರುವ ಆ ಇಬ್ಬರು ಸಚಿವರ ಆಪ್ತ ಸಹಾಯಕರು ಯಾರು, ಈ ಪ್ರಕರಣದಲ್ಲಿ ಅವರು ಹೇಗೆ ಭಾಗಿಯಾಗಿದ್ದಾರೆ ಮತ್ತು ಸಚಿವರ ಆಪ್ತ ಸಹಾಯಕರ ಹೆಸರುಗಳು ಬಹಿರಂಗವಾಗಬೇಕಿದೆ. ಒಂದು ವೇಳೆ ಸಚಿವರ ಆಪ್ತ ಸಹಾಯಕರು ಈ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಭೀತಾದರೇ ಅಥವಾ ಸಚಿವರ ಹೆಸರುಗಳು ಬಹಿರಂಗಗೊಂಡರೆ ಸರ್ಕಾರಕ್ಕೆ ಮತ್ತಷ್ಟು ಮುಜುಗರ ಉಂಟಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಮರುನಾಮಕರಣಗೊಂಡರೂ ಬದಲಾಗಿಲ್ಲ ರಾಮನಗರದ ಸರ್ಕಾರಿ ಕಚೇರಿಗಳ ನಾಮಫಲಕ

ಯಾರು ಈ ನಿಂಗಪ್ಪ?

ಪೊಲೀಸ್​ ಇಲಾಖೆಯಲ್ಲಿ ಹೆಡ್​​ಕಾನ್ಸ್​​ಟೇಬಲ್​ ಆಗಿದ್ದ ನಿಂಗಪ್ಪ, ಕೆಲ ವರ್ಷಗಳ ಹಿಂದೆ ಸೇವೆಯಿಂದ ವಜಾಗೊಂಡಿದ್ದನು. ಬಳಿಕ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದನು. ಈ ಸಂಬಂಧ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.​

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ