ವಿಧಾನಸೌಧ ವೀಕ್ಷಣೆಗೂ ಶುಲ್ಕ: ರಾಷ್ಟ್ರಪತಿ-ಸಂಸತ್ ಭವನ ಮಾದರಿಯಲ್ಲಿ ಟೂರ್ ಗೈಡ್ ವ್ಯವಸ್ಥೆ
ರಾಷ್ಟ್ರಪತಿ ಭವನ ಮತ್ತು ಸಂಸತ್ ಭವನದ ಮಾದರಿಯಲ್ಲಿ ವಿಧಾನಸೌಧದಲ್ಲಿ ಟೂರ್ ಗೈಡ್ ಆರಂಭವಾಗಿದೆ. ಸಾರ್ವಜನಿಕ ರಜಾದಿನಗಳಲ್ಲಿ ಮಾತ್ರ ಪ್ರವಾಸಿಗರಿಗೆ ವಿಧಾನಸೌಧ ನೋಡಲು ಅವಕಾಶ ನೀಡಲಾಗುತ್ತದೆ. ಆನ್‌ಲೈನ್ ಟಿಕೆಟ್ ಬುಕಿಂಗ್ ಸೌಲಭ್ಯ, ಸುಸಜ್ಜಿತ ವೈದ್ಯಕೀಯ ತಂಡ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವಾಸಿಗರು ನಿಯಮಗಳನ್ನು ಪಾಲಿಸಿ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಸರ್ಕಾರ ಹೇಳಿದೆ.
ಬೆಂಗಳೂರು, ಏಪ್ರಿಲ್ 08: ರಾಷ್ಟ್ರಪತಿ ಭವನ (Rashtrapati Bhavan) ಮತ್ತು ಸಂಸತ್ ಭವನದ (Sansat Bhavan) ಮಾದರಿಯಲ್ಲಿ ವಿಧಾನಸೌಧ (Vidhansoudha) ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿಗೆ ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆಗೆ ಟೂರ್ ಗೈಡ್ ಏರ್ಪಡಿಸಲಾಗಿದೆ. ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಟೂರ್ ಗೈಡ್ ವ್ಯವಸ್ಥೆ ಇರುತ್ತದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ಶುಲ್ಕ ಪಾವತಿಸಿ ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲಾಗಿದೆ.
ಏನಿದು ಟೂರ್ ಗೈಡ್? ವಿಶೇಷತೆ ಏನು?
ವಿಧಾನಸೌಧ ಕಟ್ಟಡಕ್ಕೆ ಪ್ರಸ್ತುತ ಶಾಶ್ವತ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗಿದೆ. ಇದರಿಂದ, ಕಟ್ಟಡದ ಸೌಂದರ್ಯವು ಹೆಚ್ಚಾಗಿದ್ದು, ಪ್ರವಾಸಿಗರು ವಿಧಾನಸೌಧವನ್ನು ವೀಕ್ಷಿಸಲು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ವಿಧಾನಸೌಧ ಕಟ್ಟಡ ವೀಕ್ಷಿಸಲು “Guided Tour” ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ವಿದೇಶಿ ಮತ್ತು ದೇಶಿಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ.
ಸಾರ್ವತ್ರಿಕ ರಜಾ ದಿನಗಳಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲಾಗಿದೆ.
ವಿಧಾನಸೌಧ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರನ್ನು ತಲಾ 30 ರಂತೆ ತಂಡಗಳನ್ನಾಗಿ ವಿಭಜಿಸಿ, ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತದೆ. ಹಾಗೂ ಈ ಪ್ರತಿ ತಂಡಗಳ ಮೇಲ್ವಿಚಾರಣೆ ಮಾಡಲು ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಅಧಿಕಾರಿಗಳು (Tourist Officer) ಇರುತ್ತಾರೆ. ಹಾಗೂ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಇವರನ್ನು ಉಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸಲಾಗುತ್ತದೆ.
Guided Tour ಗೆ ಅನುವಾಗುವಂತೆ ಪ್ರವಾಸಿಗರು Online ಮುಖಾಂತರ ticket ಪಡೆಯಲು ಪ್ರವಾಸೋದ್ಯಮ ಇಲಾಖೆ ತಂತ್ರಾಂಶ ಅಭಿವೃದ್ಧಿ ಪಡಿಸುತ್ತಿದೆ.
ಪ್ರವಾಸಿಗರಿಗೆ ನಿಗದಿಪಡಿಸುವ ಪ್ರವೇಶ ದರವು ಜನಸ್ನೇಹಿಯಾಗಿದೆ. ಹಾಗೂ ವಸೂಲಿ ಮಾಡುವ ಪ್ರವೇಶ ಶುಲ್ಕದಲ್ಲಿ ನಿರ್ದಿಷ್ಟ ಶುಲ್ಕ ಪ್ರವಾಸೋದ್ಯಮ ಇಲಾಖೆಗೆ ಸೇರಲಿದೆ.
ಉಪ ಪೊಲೀಸ್ ಆಯುಕ್ತರು, ವಿಧಾನಸೌಧ ಭದ್ರತೆ ಇವರು ಭದ್ರತೆಗೆ ಸಂಬಂಧಿಸಿದಂತೆ ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಪ್ರವಾಸಿಗರ ಅಧಿಕೃತ ಗುರುತಿನ ಚೀಟಿಯನ್ನು ಪರಿಶೀಲಿಸಿ, ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.
ವಿಧಾನಸೌಧ ಕಟ್ಟಡ/ ಉದ್ಯಾನವನಗಳು/ಪ್ರತಿಮೆಗಳಿಗೆ ಯಾವುದೇ ದಕ್ಕೆ ಉಂಟಾಗದಂತೆ ಎಚ್ಚರಿಕ ವಹಿಸಬೇಕು. ಹಾಗೂ ಈ ಕುರಿತು ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗುತ್ತದೆ.
ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ಪರಿವೀಕ್ಷಣೆಯ ಕುರಿತು ರೂಟ್ ಮ್ಯಾಪ್ (Root Map/Lay out map) ವ್ಯವಸ್ಥೆ ಇದೆ.
ಪರಿವೀಕ್ಷಣೆಯ ಸಂದರ್ಭದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಸುಸಜ್ಜಿತ ವೈದ್ಯಕೀಯ ತಂಡದೊಂದಿಗೆ ಆಂಬ್ಯುಲೆನ್ಸ್ ಸೌಲಭ್ಯವನ್ನು ಕಲ್ಪಿಸಲು ಆರೋಗ್ಯ ಇಲಾಖೆ ಮುಂದಾಗಿದೆ.
ಅಗ್ನಿ ಅವಘಡ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಗ್ನಿ ಶಾಮಕ ಇಲಾಖೆಯರು ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸಿದ್ಧವಾಗಿರುತ್ತದೆ.
ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ವಿಧಾನಸೌಧದ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಸರ್ಕಾರ ಮನವಿ ಮಾಡಿದೆ.
ಗಂಡನ ಕೊಲೆಯನ್ನು ವಿಡಿಯೋ ಕಾಲ್ನಲ್ಲಿ ನೋಡಿ ಆನಂದಪಟ್ಟ ಹೆಂಡ್ತಿ!
ಬೆಂಗಳೂರು: ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ
ಅತ್ಯಾಚಾರವೆಸಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಂದು ಮತ್ತೆ ಬಾಲಕಿಯ ಅಪಹರಿಸಿದ
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
Published On - 4:36 pm, Tue, 8 April 25
ಕಿರಣ್ ಹನಿಯಡ್ಕ
TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.