2020-21ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ; ಹೆಚ್ಚುವರಿ ಫೀಸ್ ಹಣ ವಾಪಸ್ ನೀಡಲು ಆದೇಶಿಸಿದ ಸರ್ಕಾರ

ಶುಲ್ಕ ಕಡಿಮೆ ಮಾಡುವಂತೆ ಪೋಷಕ ಸಂಘಟನೆಗಳು ಈ ಹಿಂದೆ ಪ್ರತಿಭಟನೆ ಕೂಡ ನಡೆಸಿದ್ದರು. ಸದ್ಯ ಹೈಕೋರ್ಟ್ ಆದೇಶದಂತೆ ಸರ್ಕಾರ ಅಧಿಕೃತವಾಗಿ 2020-21ನೇ ಸಾಲಿನ ಶುಲ್ಕ ಆದೇಶ ಪ್ರಕಟ ಮಾಡಿದೆ. ಆ ಮೂಲಕ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆಯಲು ಆದೇಶಿಸಿದೆ.

2020-21ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ; ಹೆಚ್ಚುವರಿ ಫೀಸ್ ಹಣ ವಾಪಸ್ ನೀಡಲು ಆದೇಶಿಸಿದ ಸರ್ಕಾರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Nov 13, 2021 | 9:21 AM

ಬೆಂಗಳೂರು: 2020-21 ನೇ ಸಾಲಿನಲ್ಲಿ ಖಾಸಗಿ ಶಾಲೆಗಳು (private school) ಪೂರ್ಣ ಶುಲ್ಕ ಪಡೆದಿದ್ದರೆ, ಹೆಚ್ಚುವರಿ ಶುಲ್ಕವನ್ನು ವಾಪಸ್ ಮಾಡುವಂತೆ ಸರ್ಕಾರ (State Government) ಖಾಸಗಿ ಶಾಲೆಗಳಿಗೆ ಆದೇಶ ನೀಡಿದೆ. ಈ ಹಿಂದೆ 2020-21 ನೇ ಸಾಲಿನ ಶೇಕಡಾ 30 ರಷ್ಟು ಶುಲ್ಕ(Fees) ಕಡಿತ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿದ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿತ್ತು. ಸದ್ಯ ಹೈಕೋರ್ಟ್ ಈ ಬಗ್ಗೆ ತೀರ್ಪು ನೀಡಿದ್ದು, ಶುಲ್ಕ ಪರಿಷ್ಕರಿಸಿ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆದುಕೊಳ್ಳುವಂತೆ ಆದೇಶಿಸಿದೆ.

ಶುಲ್ಕ ಕಡಿಮೆ ಮಾಡುವಂತೆ ಪೋಷಕ ಸಂಘಟನೆಗಳು ಈ ಹಿಂದೆ ಪ್ರತಿಭಟನೆ ಕೂಡ ನಡೆಸಿದ್ದರು. ಸದ್ಯ ಹೈಕೋರ್ಟ್ ಆದೇಶದಂತೆ ಸರ್ಕಾರ ಅಧಿಕೃತವಾಗಿ 2020-21ನೇ ಸಾಲಿನ ಶುಲ್ಕ ಆದೇಶ ಪ್ರಕಟ ಮಾಡಿದೆ. ಆ ಮೂಲಕ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆಯಲು ಆದೇಶಿಸಿದೆ.

ಈ ಹಿಂದೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶ 2020-21 ನೇ ಸಾಲಿಗೆ ಅನ್ವಯ ಆಗುವಂತೆ ಆದೇಶ ಹೊರಡಿಸಲಾಗಿತ್ತು. ಬೋಧನಾ ಶುಲ್ಕದಲ್ಲಿ 70 % ಶುಲ್ಕ ಮಾತ್ರ ಈ ವರ್ಷ ಶಾಲೆಗಳು ಪಡೆಯಬೇಕು. ಬೋಧನಾ ಶುಲ್ಕ ಬಿಟ್ಟು ಉಳಿದ ಶುಲ್ಕ ಪಡೆಯುವ ಹಾಗಿಲ್ಲ. ರಾಜ್ಯದಲ್ಲಿ ಎಲ್ಲಾ ಪಠ್ಯಕ್ರಮಗಳ ಶಾಲೆಗಳಿಗೆ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶಿಸಿತ್ತು.

ಈಗಾಗಲೇ ಪೋಷಕರು ಪೂರ್ತಿ ಶುಲ್ಕ ಪಾವತಿ ಮಾಡಿದರೆ, ಹೆಚ್ಚುವರಿ ಶುಲ್ಕ ವಾಪಸ್ ಕೊಡಬೇಕು ಅಥವಾ ಮುಂದಿನ ವರ್ಷಕ್ಕೆ ಅದನ್ನು ಸರಿದೂಗಿಸಿಕೊಳ್ಳಬೇಕು‌ ಎಂದು ರಾಜ್ಯ ಸರ್ಕಾರ ಶಾಲೆಗಳಿಗೆ ಷರತ್ತು ಹಾಕಿತ್ತು. 2020-21 ನೇ ಸಾಲಿಗೆ ಮತ್ತಷ್ಟು ಶುಲ್ಕ ಕಡಿಮೆ ಮಾಡಲು ಶಾಲೆಗಳು ಒಪ್ಪಿದರೆ ಅದಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಪೋಷಕರಿಗೆ ಶುಲ್ಕ ಪಾವತಿ ಮಾಡಲು ಎರಡು ಕಂತು ನೀಡಬೇಕು ಎಂದು ರಾಜ್ಯ ಸರ್ಕಾರದಿಂದ ಷರತ್ತು ವಿಧಿಸಿ ಆದೇಶ ಹೊರಡಿಸಲಾಗಿತ್ತು.

ಇದನ್ನೂ ಓದಿ: ಇಂದು ಖಾಸಗಿ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ.. ಶೇ.30ರಷ್ಟು ಶಾಲಾ ಶುಲ್ಕ ಕಡಿತ ವಿರೋಧಿಸಿ ಹೋರಾಟ

ಖಾಸಗಿ ಶಾಲಾ ಶುಲ್ಕ ಶೇ. 30ರಷ್ಟು ಕಡಿತ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

Published On - 9:15 am, Sat, 13 November 21

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ