AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 10 ಐಪಿಎಸ್​​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಇನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸಿಐಡಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹಾಗೂ ಕನಿಕಾ ಸಿಕ್ರಿವಾಲ್ ಅವರನ್ನು ನೇಮಿಸಲಾಗಿದೆ. ಗುಪ್ತಚರ ಇಲಾಖೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ, ಕುಶಾಲ್ ಚೌಕ್ಸೆ ನೇಮಕವಾದರೇ ಇನ್ನುಳಿದಂತೆ ಇಲ್ಲಿದೆ ಮಾಹಿತಿ.

ಬೆಂಗಳೂರು: 10 ಐಪಿಎಸ್​​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on: Sep 02, 2023 | 5:12 PM

Share

ಬೆಂಗಳೂರು, ಸೆ.02: ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಧಿಕಾರಿಗಳ ವರ್ಗಾವಣೆ ಜೋರಾಗಿ ನಡೆಯುತ್ತಿದೆ. ಕಳೆದ ಜೂನ್​ನಲ್ಲಿ 11ಐಎಎಸ್​ ಅಧಿಕಾರಿಗಳನ್ನು ಹಾಗೂ ಜುಲೈ 1 ರಂದು 14 ಐಎಫ್​ಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಇದೀಗ ತನ್ನ ವರ್ಗಾವಣೆಯನ್ನು ಮತ್ತೆ ಮುಂದುವರೆಸಿದ್ದು, ಬರೊಬ್ಬರಿ 10 ಜನ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ (IPS Officers Transfer) ಸರ್ಕಾರ ಆದೇಶ ಹೊರಡಿಸಿದೆ. ಈ ಕೆಳಗಿನಂತಿದೆ ವರ್ಗಾವಣೆಗೊಂಡವರು.

ಇನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸಿಐಡಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹಾಗೂ ಕನಿಕಾ ಸಿಕ್ರಿವಾಲ್ ಅವರನ್ನು ನೇಮಿಸಲಾಗಿದೆ. ಗುಪ್ತಚರ ಇಲಾಖೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ, ಕುಶಾಲ್ ಚೌಕ್ಸೆ. ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಸಿದ್ದಾರ್ಥ್ ಗೋಯಲ್ ನೇಮಕವಾದರ, ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ರೋಹನ್ ಜಗದೀಶ್ ಅವರು ನೇಮಕಗೊಂಡಿದ್ದಾರೆ.

ಇದನ್ನೂ ಓದಿ:ಅಧಿಕಾರಿ ವರ್ಗಾವಣೆ ಬದಲಿಗೆ ಇನ್ನೊಂದು ಇಲಾಖೆ ಹೆಚ್ಚುವರಿ ಹುದ್ದೆ: ಮತ್ತೊಮ್ಮೆ ಧಗಧಗಿಸಲಿದಿಯಾ ವರ್ಗಾವಣೆ ಕಿಚ್ಚು?

ಇನ್ನು ಬೆಂಗಳೂರು ಉಗ್ರರ ನಿಗ್ರಹ ದಳ ಎಸ್​ಪಿಯಾಗಿ ಶಿವಾನ್ಷು ರಜಪೂತ್, ಉಡುಪಿ ಎಎನ್ಎಫ್ ಎಸ್​ಪಿ ಆಗಿ ಜಿತೇಂದ್ರ ಕುಮಾರ್ ದಯಾಮ, ಕೆಎಸ್​ಆರ್​ಪಿ ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ ಎಂ.ಎನ್.ದೀಪನ್ ಹಾಗೂ ಬೆಂಗಳೂರು ವೈರ್​ಲೆಸ್ ವಿಭಾಗದ ಎಸ್​ಪಿಯಾಗಿ ಹೆಚ್.ಎನ್.ಮಿಥುನ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ.

ಇನ್ನು ಜೂನ್​ 6 ರಂದು 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರ ಆದೇಶಿಸಿತ್ತು. ಕಪಿಲ್ ಮೋಹನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಈವರೆಗೆ ಈ ಹುದ್ದೆಯನ್ನು ಹೆಚ್ಚುವರಿಯಾಗಿ ಪಂಕಜ್ ಕುಮಾರ್ ಪಾಂಡೆ ಅವರು ನಿಭಾಯಿಸುತ್ತಿದ್ದರು. ಬಳಿಕ ಈ ಸೇವೆಯಿಂದ ಪಂಕಜ್ ಅವರನ್ನು ಮುಕ್ತಿಗೊಳಿಸಲಾಗಿತ್ತು. ಇದೀಗ ಮತ್ತೆ 10 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ