AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 23 ರಿಂದ 25 ರವರೆಗೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ತೀರ್ಮಾನ

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದ್ದು, ಮೂರು ದಿನಗಳ ಕಾಲ 86 ನೇ ಕನ್ನಡ ಸಾಹಿತ್ಯ ಸಮ್ಮೇಳನವ ಆಯೋಜನೆ ಮಾಡಲಾಗಿದೆ. 

ಸೆಪ್ಟೆಂಬರ್ 23 ರಿಂದ 25 ರವರೆಗೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ತೀರ್ಮಾನ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
TV9 Web
| Edited By: |

Updated on:Apr 23, 2022 | 9:56 PM

Share

ಬೆಂಗಳೂರು: ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಅರ್ಥಪೂರ್ಣ ಗೋಷ್ಠಿ ಆಯೋಜಿಸಿ ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು ಹಾಗೂ ಅವು ಅರ್ಥಪೂರ್ಣವಾಗಿರಬೇಕು. ಸಮಿತಿಗಳಲ್ಲಿ ಸಕ್ರಿಯವಾಗಿರುವ ಸ್ಥಳೀಯ ಜನರನ್ನು ತೊಡಗಿಸಿಕೊಳ್ಳಬೇಕು. ಗೋಷ್ಠಿಗಳಲ್ಲಿಯೂ ಸ್ಥಳೀಯರಿಗೆ ಅವಕಾಶ ನೀಡಬೇಕು. ಎಲ್ಲಾ ತಾಲ್ಲೂಕುಗಳ ಸ್ವಯಂಸೇವಕರು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸೂಕ್ತ ವಸತಿ ವ್ಯವಸ್ಥೆ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ವಸತಿ ವ್ಯವಸ್ಥೆಯಾಗಬೇಕು. ಎಲ್ಲಿ, ಎಷ್ಟು ಜನರಿಗೆ ವಸತಿ ವ್ಯವಸ್ಥೆಯಾಗಿದೆ ಎಂಬ ಬಗ್ಗೆ ನಿಖರವಾಗಿ ಯೋಚಿಸಿ. ಹಾಸ್ಟೆಲ್ ಗಳು ಮತ್ತು ಡಾರ್ಮಿಟರಿಗಳನ್ನು ವಸತಿ ಶಾಲೆಗಳನ್ನು ಸದುಪಯೋಗಿಸಿಕೊಳ್ಳಬೇಕು. ಪ್ರಮುಖ ಕಲ್ಯಾಣ ಮಂಟಪಗಳನ್ನು ಗುರುತಿಸಿ ಎಂದು ಸಿಎಂ ಸೂಚಿಸಿದರು. ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿಯೂ ವಸತಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು. ಮಾರ್ಗ ಮಧ್ಯೆಯೂ ಉತ್ತಮ ಹೋಟೆಲ್ ಗಳಿವೆ, ಖಾಸಗಿ ಶಾಲೆಗಳನ್ನು ಸಹ ಬಳಕೆ ಮಾಡಿಕೊಳ್ಳಬಹುದು ಎಂದು ಸೂಚಿಸಿದರು. ತುರ್ತು ಪರಿಸ್ಥಿತಿಗಳಲ್ಲಿ ಬಳಕೆ ಮಾಡಲು ಕುಂಭಮೇಳದಲ್ಲಿ ಆಯೋಜಿಸಿದಂತೆ ಟೆಂಟ್ ಗಳನ್ನು ಉಪಯೋಗಿಸಬಹುದು. ಇವುಗಳ ಬಗ್ಗೆ ಸೂಕ್ತ ನೀಲನಕ್ಷೆ ಸಿದ್ಧಪಡಿಸಲು ತಿಳಿಸಿದರು. ಊಟ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯ ಬಗ್ಗೆಯೂ ಸೂಕ್ತ ಯೋಜನೆಗಳನ್ನು ರೂಪಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಸಿದ್ಧತೆಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಮತ್ತೊಂದು ಸಭೆ ಕರೆದು, ಅಂತಿಮಗೊಳಿಸುವುದು. ಬಜೆಟ್ ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು.

ಪರಿಸರ ಸ್ನೇಹಿ ಸಮ್ಮೇಳನ ಸಮ್ಮೇಳನವನ್ನು ಪರಿಸರಸ್ನೇಹಿಯಾಗಿಸಲು ಫ್ಲೆಕ್ಸ್ ಗಳ ಬಳಕೆಯನ್ನು ನಿಷೇಧಿಸಿ ಜಾಹೀರಾತು ಫಲಕಗಳನ್ನು ಬಳಸುವಂತೆ ಮುಖ್ಯ ಮಂತ್ರಿಗಳು ಸೂಚಿಸಿದರು. ಸಭೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಚಂದ್ರಶೇಖರ್ ಕಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕರಾದ ಅರುಣ್ ಕುಮಾರ್ ಪೂಜಾರ್, ನೆಹರು ಒಲೆಕಾರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಹಾವೇರಿ ಜಿಲ್ಲಾಧಿಕಾರಿ ಡಾ. ಸಂಜಯ ಶೆಟ್ಟೆಣ್ಣವರ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:

ನಮ್ಮ ಮುಸ್ಲಿಂ ಹೆಣ್ಣುಮಕ್ಕಳು ಓದಿ, ಸ್ವಾವಲಂಬಿಗಳಾಗಿ, ಗೌರವಾನ್ವಿತ ಬದುಕು ನಡೆಸಬೇಕು: ಶೋಭಾ ಕರಂದ್ಲಾಜೆ

Virat Kohli: IPL ನಲ್ಲಿ ವಿರಾಟ್ ಕೊಹ್ಲಿ ಎಷ್ಟು ಬಾರಿ ಝೀರೊಗೆ ಔಟಾಗಿದ್ದಾರೆ ಗೊತ್ತಾ?

Published On - 8:50 pm, Sat, 23 April 22

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ