AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು 2 ಗಂಟೆಯೊಳಗೆ ಸರ್ಕಾರದ ನಿರ್ಧಾರ, ಆನಂತರ ನಮ್ಮ ನಿರ್ಧಾರ- ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಘೋಷಣೆ

ಇನ್ನು 2 ಗಂಟೆಯೊಳಗೆ ಸರ್ಕಾರ ತಮ್ಮ ನಿರ್ಧಾರ ತಿಳಿಸಲಿದೆ. ಸರ್ಕಾರದ ಮಟ್ಟದಲ್ಲೂ ನಿರಂತರವಾಗಿ ಚರ್ಚೆ ನಡೆಯುತ್ತಿದೆ. ಸಕಾರಾತ್ಮಕವಾಗಿ ಸ್ಪಂದನೆ ಸಿಗದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತೇವೆ. -ಷಡಕ್ಷರಿ

ಇನ್ನು 2 ಗಂಟೆಯೊಳಗೆ ಸರ್ಕಾರದ ನಿರ್ಧಾರ, ಆನಂತರ ನಮ್ಮ ನಿರ್ಧಾರ- ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಘೋಷಣೆ
ಸಿ.ಎಸ್.ಷಡಕ್ಷರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ
TV9 Web
| Updated By: ಆಯೇಷಾ ಬಾನು|

Updated on:Mar 01, 2023 | 10:13 AM

Share

ಬೆಂಗಳೂರು: 7ನೇ ವೇತನ ಜಾರಿ ಮಾಡಬೇಕು, ಹೊಸ ಪಿಂಚಣಿ ಸ್ಕೀಮ್ ರದ್ದು ಮಾಡಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ಸರ್ಕಾರಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಸರ್ಕಾರ ವಿರುದ್ಧ ಸಮರ ಸಾರಿದ್ದಾರೆ. ಹೀಗಾಗಿ ಆಡಳಿತದ ಕೇಂದ್ರ ಸ್ಥಾನವಾಗಿರೋ ವಿಧಾನಸೌಧದ ಕಚೇರಿಗಳು, ಎಂಎಸ್‌ ಬಿಲ್ಡಿಂಗ್‌ನ ಕಚೇರಿಗಳು, ಪ್ರಮುಖ ಇಲಾಖೆಗಳ ಕಚೇರಿಗಳು ಬಂದ್ ಆಗಿವೆ ಇಡೀ ರಾಜ್ಯದಲ್ಲಿ ಬಂದ್ ಎಫೆಕ್ಟ್ ಭಾರೀ ಮಟ್ಟದಲ್ಲಿ ತಟ್ಟಲು ಶುರುವಾಗಿದೆ. ಮತ್ತೊಂದೆಡೆ ಮುಷ್ಕರಕ್ಕೆ ಸಂಬಂಧಿಸಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಆದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಸಿಎಂ ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ.

ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ನಮ್ಮ ನಿರ್ಣಯವನ್ನ ಸಿಎಂಗೆ ಹೇಳಿದ್ದೇವೆ. ಸರ್ಕಾರದ ನಿಲುವಿನ ಮೇಲೆ ನಮ್ಮ ನಿರ್ಧಾರವಾಗಲಿದೆ. ಇನ್ನು 2 ಗಂಟೆಯೊಳಗೆ ಸರ್ಕಾರ ತಮ್ಮ ನಿರ್ಧಾರ ತಿಳಿಸಲಿದೆ. ಸರ್ಕಾರದ ಮಟ್ಟದಲ್ಲೂ ನಿರಂತರವಾಗಿ ಚರ್ಚೆ ನಡೆಯುತ್ತಿದೆ. ಸಕಾರಾತ್ಮಕವಾಗಿ ಸ್ಪಂದನೆ ಸಿಗದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತೇವೆ. ನಾನು ಸರ್ಕಾರಿ ನೌಕರರ ಪರವಾಗಿ ನಿಲ್ಲುತ್ತೇನೆ ಎಂದು ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದರು.

ಇದನ್ನೂ ಓದಿ: ಸರ್ಕಾರಿ ನೌಕರರ ಮುಷ್ಕರ: ಒಪಿಡಿ ಬಂದ್, ಚಿಕಿತ್ಸೆ ಸಿಗದೆ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಟ

ಇಂದು ಯಾವುದೇ ನಿರ್ಧಾರ ಬಂದರೂ ಕೂಡ ಮುಷ್ಕರ ಇರುತ್ತದೆ

ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಮುಂದುವರಿಯುತ್ತದೆ. ಇಂದು ಯಾವುದೇ ನಿರ್ಧಾರ ಬಂದರೂ ಕೂಡ ಮುಷ್ಕರ ಇರುತ್ತದೆ. ಮುಷ್ಕರಕ್ಕೆ ಕರೆ ನೀಡಿದ ಕಾರಣ ಯಾರೂ ಕಚೇರಿಗಳಿಗೆ ಹಾಜರಾಗಿಲ್ಲ ಎಂದು BBMP ಅಧಿಕಾರಿಗಳು, ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ತಿಳಿಸಿದ್ದಾರೆ.

ಸರ್ಕಾರಿ ನೌಕರರ ಮುಷ್ಕರಕ್ಕೆ ಪೊಲೀಸರ ಅನುಮತಿ ಇಲ್ಲ

ಇನ್ನು ಮತ್ತೊಂದೆಡೆ ಸರ್ಕಾರಿ ನೌಕರರ ಮುಷ್ಕರಕ್ಕೆ ಪೊಲೀಸರ ಪರ್ಮಿಷನ್ ಇಲ್ಲ. ಎಲ್ಲೆಡೆ ಅಲರ್ಟ್ ಆಗಿದ್ದಾರೆ. ಇಂದಿನಿಂದ ನಡೆಯುವ ಸರ್ಕಾರಿ ನೌಕರರ ಮುಷ್ಕರಕ್ಕೆ ಪೊಲೀಸರು ಅನುಮತಿ ನೀಡಿಲ್ಲ. ಸರ್ಕಾರಿ ನೌಕರರ ಸಂಘ ಕೂಡ ಈವರೆಗೆ ಪೊಲೀಸರ ಅನುಮತಿ ಕೇಳಿಲ್ಲ. ಸರ್ಕಾರಿ ನೌಕಕರಿಗೆ ಶಕ್ತಿಸೌಧ ಸೇರಿ ಸುತ್ತಮುತ್ತ ಪ್ರತಿಭಟನೆಗೆ ಅವಕಾಶ ಇಲ್ಲ. ಒಂದು ವೇಳೆ ಸರ್ಕಾರಿ ನೌಕರರು ವಿಧಾನಸೌದ, ವಿಕಾಸಸೌಧ, ಎಂಎಸ್ ಬಿಲ್ಡಿಂಗ್ ಸುತ್ತಮುತ್ತ ಪ್ರತಿಭಟನೆ ನಡೆಸಿದರೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಕಚೇರಿಗಳ ಬಳಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಶಕ್ತಿಸೌಧ ಸುತ್ತಮುತ್ತ ನಿಗಾ ಇಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:07 am, Wed, 1 March 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ