ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಚಿಕಿತ್ಸೆ ನೀಡಿದ್ದು, ಇಂದು ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ. ಇನ್ನು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗೆಹ್ಲೋಟ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್ 30: ತೀವ್ರ ಜ್ವರ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (thawar chand gehlot) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ವೈರಲ್ ಫೀವರ್ ಹಿನ್ನೆಲೆ ಎರಡು ದಿನಗಳ ಹಿಂದೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸಿಎಂ ಸಿದ್ದರಾಮಯ್ಯ (Siddaramaiah) ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.
ರಾಜ್ಯಪಾಲರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗುವಂತೆ ಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್
ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗುವಂತೆ ಹಾರೈಸಿದೆ. pic.twitter.com/oQlSIcMqEm
— Siddaramaiah (@siddaramaiah) October 30, 2025
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇತ್ತೀಚೆಗೆ ಮಧ್ಯಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಸರಣಿ ಕಾರ್ಯಕ್ರಮಗಳಲ್ಲಿ ಭಾಗಹಿಸಿದ್ದರು. ಹೀಗಾಗಿ ಆಯಾಸದಿಂದಾಗಿ ತೀವ್ರ ಜ್ವರ ಬಂದಿರಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: ದೇವೇಗೌಡ ಆಸ್ಪತ್ರೆಗೆ ದಾಖಲು: ತಂದೆಯನ್ನು ನೋಡಲು ದಿಲ್ಲಿಯಿಂದ ದೌಡಾಯಿಸಿದ ಕುಮಾರಸ್ವಾಮಿ
ಮೊದಲಿಗೆ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ರಾಜ್ಯಪಾಲರು ದಾಖಲಾಗಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆ ಹಿನ್ನೆಲೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:01 pm, Thu, 30 October 25



