AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಕ್ಷರವನ್ನೂ ಬಿಡದಂತೆ ನಾಡಗೀತೆ ಹಾಡಲು ಸಮ್ಮತಿ: 2 ನಿಮಿಷ 30 ಸೆಕೆಂಡ್​ನಲ್ಲಿ ಹಾಡಲು ಸರ್ಕಾರ ಒಪ್ಪಿಗೆ

ದಿ.ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ದಾಟಿಯಲ್ಲಿ ನಾಡಗೀತೆಯನ್ನು ಹಾಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಆಲಾಪ, ಪುನರಾವರ್ತನೆ ಇಲ್ಲದಂತೆ, 2 ನಿಮಿಷ 30 ಸೆಕೆಂಡ್​ನಲ್ಲಿ ನಾಡಗೀತೆ ಹಾಡಲು ಸರ್ಕಾರ ಒಪ್ಪಿಗೆ ನೀಡಿದೆ.

ಒಂದಕ್ಷರವನ್ನೂ ಬಿಡದಂತೆ ನಾಡಗೀತೆ ಹಾಡಲು ಸಮ್ಮತಿ: 2 ನಿಮಿಷ 30 ಸೆಕೆಂಡ್​ನಲ್ಲಿ ಹಾಡಲು ಸರ್ಕಾರ ಒಪ್ಪಿಗೆ
ನಾಡಗೀತೆ (ಸಂಗ್ರಹ ಚಿತ್ರ)
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 23, 2022 | 6:55 PM

Share

ಬೆಂಗಳೂರು: ನಾಡಗೀತೆಗೆ ನಿರ್ದಿಷ್ಟ ಸಮಯ ಮತ್ತು ದಾಟಿ ನಿಗದಿ ವಿಚಾರ ಸಂಬಂಧ ಒಂದಕ್ಷರವನ್ನೂ ಬಿಡದಂತೆ, ದಿ.ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ದಾಟಿಯಲ್ಲಿ ನಾಡಗೀತೆಯನ್ನು ಹಾಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಇನ್ನು ಮುಂದೆ ರಾಷ್ಟ್ರಕವಿ ಕುವೆಂಪು ರಚಿಸಿರುವ “ಜಯಭಾರತ ಜನನಿಯ ತನುಜಾತೆ” ನಾಡಗೀತೆಗೆಯನ್ನು ಆಲಾಪ, ಪುನರಾವರ್ತನೆ ಇಲ್ಲದಂತೆ, 2 ನಿಮಿಷ 30 ಸೆಕೆಂಡ್​ನಲ್ಲಿ ನಾಡಗೀತೆ ಹಾಡಲು ಸರ್ಕಾರ ಒಪ್ಪಿಗೆ ನೀಡಿದೆ. S.R.ಲೀಲಾವತಿ ಸಮಿತಿ ಶಿಫಾರಸನ್ನು ಸರ್ಕಾರ ಅಧಿಕೃತಗೊಳಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಲ್ಲಿಸಿದ್ದ ಪ್ರಸ್ತಾಪಕ್ಕೆ ಸಿಎಂ ಒಪ್ಪಿಗೆ ನೀಡಿದರು. 2005 ರಿಂದಲೂ ನಾಡಗೀತೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ ನೆನೆಗುದಿಗೆ ಬಿದ್ದಿತ್ತು. 2006ರಲ್ಲಿ ಸಾಹಿತಿ ವಸಂತ ಕನಕಾಪುರೆ ನೇತೃತ್ವದಲ್ಲಿ ಸರ್ಕಾರ ಸಮಿತಿ ರಚಿಸಿತ್ತು.

ಕನಕಾಪುರೆ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಅಧ್ಯಕ್ಷತೆಯಲ್ಲಿ ಮತ್ತೊಂದು ಸಮಿತಿ ರಚನೆ ಮಾಡಿದ್ದ ಸರ್ಕಾರ, ಬಳಿಕ ಹಿರಿಯ ಸಂಗೀತ ವಿದೂಷಿ ಎಸ್.ಆರ್. ಲೀಲಾವತಿ ಅಧ್ಯಕ್ಷತೆಯಲ್ಲಿ 18 ಸದಸ್ಯರ ಸಮಿತಿಯನ್ನು ಸರ್ಕಾರ ರಚಿಸಿತು. ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ 2 ನಿಮಿಷ 30 ಸೆಕೆಂಡ್ ಗಳಲ್ಲಿ ನಾಡಗೀತೆ ಹಾಡಬೇಕೆಂದು ಲೀಲಾವತಿ ಸಮಿತಿ ಶಿಫಾರಸು ಮಾಡಿತ್ತು.

ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ವಿ. ಸುನೀಲ್ ಕುಮಾರ್ ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವಂತೆ ಹಿರಿಯ ಸಂಗೀತ ವಿದೂಷಿ ಎಸ್.ಆರ್.ಲೀಲಾವತಿ ಅಧ್ಯಕ್ಷತೆಯಲ್ಲಿ ಹದಿನೆಂಟು ಜನರ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಎರಡು ನಿಮಿಷ ಮೂವತ್ತು ಸೆಕೆಂಡ್​ಗಳಲ್ಲಿ ನಾಡಗೀತೆ ಹಾಡಬೇಕೆಂದು ನೀಡಿದ್ದ ಶಿಫಾರಸು ಇದೀಗ ಅಧಿಕೃತಗೊಂಡಿದೆ.

ನಾಡಗೀತೆಗೆ 2 ನಿಮಿಷ 30 ಸೆಕೆಂಡ್​ ಕಾಲಮಿತಿ ನಿಗದಿಯಾಗಿದ್ದು, ಸಮಯ ನಿಗದಿ ಬಗ್ಗೆ ಸಿಎಂ ಬೊಮ್ಮಾಯಿ ಟ್ವೀಟ್​ ಮಾಡಿದ್ದಾರೆ. ರಾಷ್ಟ್ರಕವಿ ಕುವೆಂಪು ವಿರಚಿತ ನಾಡಿನ ಹೆಮ್ಮೆಯ ನಾಡಗೀತೆ “ಜಯಭಾರತ ಜನನಿಯ ತನುಜಾತೆ”ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಿದ್ದೇವೆ. ಸಂಗೀತ ವಿದೂಷಿ ಎಸ್ ಆರ್. ಲೀಲಾವತಿ ಅಧ್ಯಕ್ಷತೆ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ, ಇನ್ನು ಮುಂದೆ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್ ನಲ್ಲಿ ಹಾಡಲಾಗುತ್ತದೆ ಎಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ರಾಜದ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

Published On - 3:53 pm, Fri, 23 September 22