AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agriculture Loan: ರೈತರ ಆಸ್ತಿ ಜಪ್ತಿ ತಡೆಗೆ ಹೊಸ ಕಾನೂನು; ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

CM Basavaraj Bommai: ಈಗಾಗಲೇ ಈ ಸಂಬಂಧ ಬ್ಯಾಂಕುಗಳ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಲಿಖಿತ ಆದೇಶ ಹೊರಬೀಳಲಿದೆ.

Agriculture Loan: ರೈತರ ಆಸ್ತಿ ಜಪ್ತಿ ತಡೆಗೆ ಹೊಸ ಕಾನೂನು; ಸಿಎಂ ಬಸವರಾಜ ಬೊಮ್ಮಾಯಿ ಭರವಸೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರೈತ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Nov 06, 2022 | 8:35 AM

Share

ಬೆಂಗಳೂರು: ರೈತರ ಆಸ್ತಿ ಜಪ್ತಿ ತಡೆಯಲು ವಿಶೇಷ ಕಾನೂನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಭರವಸೆ ನೀಡಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ (Bengaluru Agriculture University) ಆವರಣದಲ್ಲಿ ಪ್ರಗತಿಪರ ಕೃಷಿಕರಿಗೆ ಸಾಧಕ ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡಿದ ಅವರು, ‘ಕೃಷಿ ಕಾರಣಕ್ಕೆ ಪಡೆದುಕೊಂಡ ಸಾಲದ ಮರುಪಾವತಿ ವಿಳಂಬವಾದಾಗ ಅಥವಾ ತಡವಾದಾಗ ರೈತರ ಆಸ್ತಿ, ಚಿನ್ನಾಭರಣ ಹರಾಜು ಹಾಕಲು ಅಥವಾ ಜಪ್ತಿ ಮಾಡಲು ಅವಕಾಶ ಇರದ ರೀತಿಯಲ್ಲಿ ಕಾನೂನು ರೂಪಿಸಲಾಗುವುದು’ ಎಂದು ನುಡಿದರು.

ಈಗಾಗಲೇ ಈ ಸಂಬಂಧ ಬ್ಯಾಂಕುಗಳ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಲಿಖಿತ ಆದೇಶ ಹೊರಬೀಳಲಿದೆ. ಶೀಘ್ರ ಕಾನೂನು ಜಾರಿಗೆ ಬರಲಿದೆ ಎಂದು ಹೇಳಿದರು. ‘ರೈತರು ಸುಸ್ತಿದಾರರಾಗಲು ಹಲವು ಕಾರಣಗಳಿರುತ್ತವೆ. ಅವರಿಗೆ ಸಾಲ ಮರುಪಾವತಿಗೆ ಸಮಯಾವಕಾಶ ನೀಡಬೇಕು. ನಬಾರ್ಡ್‌ ಸಭೆಯಲ್ಲೂ ಈ ಸಂಬಂಧ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ’ ಎಂದು ಹಣಕಾಸು ಇಲಾಖೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇರಿಸಿಕೊಂಡಿರುವ ಬೊಮ್ಮಾಯಿ ಹೇಳಿದರು.

‘ಸಹಕಾರ ಬ್ಯಾಂಕ್‌ಗಳು ರೈತರಿಗೆ ನಿಗದಿಗಿಂತ ಕಡಿಮೆ ಮೊತ್ತದ ಸಾಲ ವಿತರಿಸುತ್ತಿವೆ’ ಎಂಬ ಆರೋಪಗಳ ಕುರಿತು ತಮ್ಮ ಮಾತಿನ ವೇಳೆ ಪ್ರಸ್ತಾಪಿಸಿದ ಅವರು, ‘ಸಹಕಾರ ಬ್ಯಾಂಕ್​ಗಳಿಗೆ ಸಾಲದ ಮೊತ್ತ ಹೆಚ್ಚಿಸಲು ಸೂಚಿಸಿದ್ದೇನೆ. ರೈತರು ಹೊಂದಿರುವ ಜಮೀನು ವಿಸ್ತೀರ್ಣಕ್ಕೆ ಅನುಗುಣವಾಗಿ ಸಾಲ ನೀಡುವಂತೆ ಸೂಚಿಸಿದ್ದೇನೆ. ರೈತರ ಆದಾಯ ಹೆಚ್ಚಾದರೆ ರಾಜ್ಯದ ಆರ್ಥಿಕತೆ ವೃದ್ಧಿಯಾಗುತ್ತದೆ. ರಾಜ್ಯ ಅಭಿವೃದ್ಧಿಗೂ ಸಹಾಯವಾಗುತ್ತದೆ’ ಎಂದರು.

‘ವಿದ್ಯಾನಿಧಿ ಯೋಜನೆಯಿಂದ ರೈತರ ಕುಟುಂಬಕ್ಕೆ ಅನುಕೂಲವಾಗುತ್ತಿದೆ. ಕರ್ನಾಟಕದ 10 ಲಕ್ಷ ರೈತರ ಮಕ್ಕಳಿಗೆ ಈ ಯೋಜನೆಯಡಿ ನೆರವು ವಿತರಿಸಲಾಗಿದೆ‌. ಪ್ರಸ್ತುತ ರಾಜ್ಯದಲ್ಲಿ 6 ಲಕ್ಷ ಕೃಷಿ ಕಾರ್ಮಿಕರ ಮಕ್ಕಳನ್ನು ಗುರುತಿಸಲಾಗಿದೆ. ಅವರಿಗೆ ಶೀಘ್ರವೇ ‘ವಿದ್ಯಾನಿಧಿ’ ವಿದ್ಯಾರ್ಥಿ ವೇತನ ವಿತರಿಸಲಾಗುವುದು. ಈಗಾಗಲೇ ‘ವಿದ್ಯಾನಿಧಿ’ ಸೌಲಭ್ಯವನ್ನು ನೇಕಾರರು, ಮೀನುಗಾರರು, ಟ್ಯಾಕ್ಸಿ ಹಾಗೂ ಆಟೊರಿಕ್ಷಾ ಚಾಲಕರ ಮಕ್ಕಳಿಗೂ ವಿಸ್ತರಿಸಲಾಗಿದೆ. ದುಡಿಯುವ ವರ್ಗಕ್ಕೆ ಸರ್ಕಾರ ಬಲ ತುಂಬುತ್ತಿದೆ’ ಎಂದು ಹೇಳಿದರು.

ಕರ್ನಾಟಕದಲ್ಲಿ ಕೃಷಿ ಕ್ಷೇತ್ರವು ಅರ್ಧಕ್ಕೂ ಹೆಚ್ಚಿನ ಜನರಿಗೆ, ಅಂದರೆ ಸುಮಾರು ಶೇ 60ರಷ್ಟು ಜನರಿಗೆ ಉದ್ಯೋಗ ಒದಗಿಸಿದೆ. ಕೃಷಿ ವಲಯದಲ್ಲಿ ಶೇ 1 ರಷ್ಟು ಬೆಳವಣಿಗೆಯಾದರೂ ಕೈಗಾರಿಕೆ ಹಾಗೂ ಸೇವಾ ವಲಯದಲ್ಲಿ ಉತ್ತಮ ಬೆಳವಣಿಗೆ ಕಂಡುಬರಲಿದೆ. ಜನವರಿ ಮೊದಲ ವಾರದಲ್ಲಿ ರಾಜ್ಯದಲ್ಲಿ ಸಿರಿಧಾನ್ಯ ಮೇಳ ಆಯೋಜಿಸಲಾಗುವುದು ಎಂದು ಭರವಸೆ ನೀಡಿದರು.

Published On - 8:35 am, Sun, 6 November 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?