ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರ (contractual employees) ವೇತನ ಶೇಕಡಾ 15ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪಿ.ಎನ್.ಶ್ರೀನಿವಾಸಾಚಾರಿ ಸಮಿತಿ ಶಿಫಾರಸಿನನ್ವಯ ಏಪ್ರಿಲ್ 1ರಿಂದ ಜಾರಿಯಾಗುವಂತೆ ವೇತನ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುತ್ತಿರುವ 25 ಸಾವಿರಕ್ಕೂ ಹೆಚ್ಚು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರಿಗೆ ಶೀಘ್ರದಲ್ಲೇ ಶೇ. 15 ರಷ್ಟು ವೇತನ ಹೆಚ್ಚಳದ ಆದೇಶ ಹೊರಬೀಳಲಿದೆ. ಜೊತೆಗೆ ಇನ್ನು ಎರಡು ತಿಂಗಳಲ್ಲಿ ಅವರಿಗೆ ಕನಿಷ್ಠ ವೇತನ ಜಾರಿಗೊಳಿಸುವ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಇತ್ತೀಚೆಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದರು.
ನೌಕರರಿಗೆ ಕನಿಷ್ಠ ವೇತನ ನೀಡುವ ಪ್ರಕ್ರಿಯೆಯನ್ನೂ ಸರ್ಕಾರ ನಡೆಸಿದೆ. ಎಚ್ಎಚ್ಎಂ ಯೋಜನೆ ಕ್ರೇಂದ್ರ ಹಾಗೂ ರಾಜ್ಯ ಸರ್ಕಾರದ ಶೇ 50 ಅನುಪಾತದ ಅನುದಾನದಲ್ಲಿ ನಡೆಯುತ್ತಿರುವ ಯೋಜನೆಯಾಗಿದೆ. ಇಂತಹ ಯೋಜನೆಗಳು ಅಗತ್ಯ ಇರುವವರೆಗೆ ನಡೆಯುತ್ತದೆ. ಹಾಗಾಗಿ ಈ ನೌಕರರನ್ನು ಕಾಯಂ ಮಾಡಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: Narendra Modi: ಬೆಂಗಳೂರಿಗೆ ಮೋದಿ ಭೇಟಿ ಬೆನ್ನಲ್ಲೆ ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಭರ್ತಿಗಾಗಿ 11,307 ಸಂಖ್ಯಾತಿರಿಕ್ತ ಹುದ್ದೆಗಳನ್ನು ಸೃಜಿಸಿ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. I.P.D ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಹೇಳಿದ್ದರು. ಇದಕ್ಕೂ ಮುನ್ನ ಬೆಂಗಳೂರಿನ ಆರ್. ಟಿ ನಗರದ ಸಿಎಂ ನಿವಾಸದ ಮುಂದೆ ಪೌರಕಾರ್ಮಿಕರು ಪ್ರತಿಭಟನೆ ಮಾಡಿದ್ದರು.
ಇದನ್ನೂ ಓದಿ: ದೇಶದಾದ್ಯಂತ ಸರ್ಕಾರಿ ನೌಕರರ ಪ್ರತಿಭಟನೆ; ಮುಷ್ಕರಕ್ಕೆ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದಿಂದ ಬೆಂಬಲ
ಬೆಂಗಳೂರಿನಲ್ಲಿ 26 ಸಾವಿರ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ 8 ಸಾವಿರ ಕಾರ್ಮಿಕರನ್ನು ಖಾಯಂ ಮಾಡುವ ಅವಕಾಶವಿದೆ. ಆದರೆ ಸರ್ಕಾರ 1 ಸಾವಿರ ಪೌರಕಾರ್ಮಿಕರನ್ನ ಖಾಯಂ ಮಾಡಲಾಗಿದೆ. ಉಳಿದ 7 ಸಾವಿರ ಪೌರಕಾರ್ಮಿಕರ ಖಾಯಮಾತಿಗೆ ಒತ್ತಾಯ ಮಾಡಿದರು.
ಈ ಹಿಂದ ವಿವಿಧ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ರಾಜ್ಯದಲ್ಲಿ ಹಲವು ಕಡೆ ಪ್ರತಿಭಟನೆ ಮಾಡಿದ್ದರು. ಬೆಂಗಳೂರಿನಲ್ಲಿ ಫ್ರೀಡಂಪಾರ್ಕ್ನಲ್ಲಿ ಕೂಡ ಅಹೋರಾತ್ರಿಯೂ ಧರಣಿ ನಡೆಸಿದ್ದು, ಲಿಖಿತ ರೂಪದ ಆದೇಶ ಪ್ರತಿ ಬಂದ ಬಳಿಕ ಧರಣಿ ಕೈಬಿಡುತ್ತೇವೆಂದು ಪ್ರತಿಭಟನಕಾರರು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನೂ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:12 pm, Sat, 4 March 23