ನಿನ್ನೆ ರೋಹಿಣಿ ಸಿಂಧೂರಿ, ಇಂದು ಡಿ ರೂಪಾಗೆ ಸ್ಥಳ ನಿಯೋಜನೆ: 7 ತಿಂಗಳ ಬಳಿಕ ನೇಮಕ: ಸರ್ಕಾರ ಆದೇಶ

7 ತಿಂಗಳ ಬಳಿಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜೊತೆಗೆ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್​ಗೆ ಸರ್ಕಾರ ಹುದ್ದೆ ನಿಯೋಜನೆ ಮಾಡಲಾಗಿದೆ. ರೂಪಾ ಮೌದ್ಗಿಲ್​ರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಮತ್ತು ಕರ್ನಾಟಕ ಗೆಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕರನ್ನಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯನ್ನು ನೇಮಕ ಮಾಡಲಾಗಿದೆ.

ನಿನ್ನೆ ರೋಹಿಣಿ ಸಿಂಧೂರಿ, ಇಂದು ಡಿ ರೂಪಾಗೆ ಸ್ಥಳ ನಿಯೋಜನೆ: 7 ತಿಂಗಳ ಬಳಿಕ ನೇಮಕ: ಸರ್ಕಾರ ಆದೇಶ
ಐಪಿಎಸ್ ಅಧಿಕಾರಿ ಡಿ.ರೂಪಾ, ಐಎಎಸ್ ರೋಹಿಣಿ ಸಿಂಧೂರಿ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Sep 14, 2023 | 6:46 PM

ಬೆಂಗಳೂರು, ಸೆಪ್ಟೆಂಬರ್​ 13: 7 ತಿಂಗಳ ಬಳಿಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಜೊತೆಗೆ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್​ಗೆ (Roopa Divakar Moudgil) ಸರ್ಕಾರ ಹುದ್ದೆ ನಿಯೋಜನೆ ಮಾಡಲಾಗಿದೆ. ರೂಪಾ ಮೌದ್ಗಿಲ್​ರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಮತ್ತು ಕರ್ನಾಟಕ ಗೆಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕರನ್ನಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅನ್ನು ನೇಮಕ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ ನಡುವಿನ ಹಿಂದಿನ ಜಗಳದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ವರ್ಗಾವಣೆ ಪರ್ವ ಮತ್ತೆ ಶುರು ಮಾಡಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ರೋಹಿಣಿ ಸಿಂಧೂರಿ ಈಗ ಹೊಸ ನೇಮಕಾತಿ ಪಡೆದ ಅಧಿಕಾರಿಗಳಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ: 99 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ: ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ

ಏಳು ತಿಂಗಳ ನಂತರ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರಿಗೆ ಸರ್ಕಾರಿ ಜವಾಬ್ದಾರಿಗಳನ್ನು ನೀಡಲಾಗಿದೆ. ಡಿ.ರೂಪಾ ಅವರನ್ನು ಆಂತರಿಕ ಭದ್ರತಾ ವಿಭಾಗದ ಇನ್ಸ್ಪೆಕ್ಟರ್ ಜನರಲ್ ಆಗಿ ನೇಮಿಸಲಾಗಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವೆ ಈ ಹಿಂದೆ ಜಗಳ ನಡೆದಿತ್ತು. ಐಎಎಸ್ ಅಧಿಕಾರಿ ಮಣಿವಣ್ಣನ್ ಮತ್ತು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರೊಂದಿಗೆ ಸಿಂಧೂರಿ ಇರುವ ಚಿತ್ರಗಳನ್ನು ರೂಪಾ ಹಂಚಿಕೊಂಡಿದ್ದರು.

ಇಬ್ಬರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

  • ಸುರಾಲ್ಕರ್ ವಿಕಾಸ್ ಕಿಶೋರ್-ಬಿಬಿಎಂಪಿ ರಾಜರಾಜೇಶ್ವರಿ ನಗರ ವಲಯ ಆಯುಕ್ತ
  • ಶ್ರೀರೂಪಾ-ಇಡಿ, ಕೆಎಸ್‌ಎಂಸಿ
  • ​ಪ್ರದೀಪ್.ಪಿ-ನಿರ್ದೇಶಕ, ಆರ್‌ಡಿಪಿಆರ್ (ಸೋಷಿಯಲ್ ಆಡಿಟ್)
  • ಲತಾಕುಮಾರಿ.ಕೆ.ಎಸ್-ಕೆಪಿಎಸ್‌ಸಿ ಕಾರ್ಯದರ್ಶಿ
  • ಸಿ.ಎನ್.ಶ್ರೀಧರ-ಜವಳಿ ಇಲಾಖೆ ಆಯುಕ್ತ
  • ಸಂಗಪ್ಪ-ಕಿಯೋನಿಕ್ಸ್ ಎಂಡಿ

ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ

  • ಕುಲದೀಪ್ ಕುಮಾರ್ ಜೈನ್-ಡಿಸಿಪಿ, ಬೆಂಗಳೂರು ಪೂರ್ವ ಸಂಚಾರ ವಿಭಾಗ
  • ಎಸ್.ಪಿ.ದೇವರಾಜು-ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗ

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ವರ್ಗಾವಣೆ ಪರ್ವ ನಡೆಯುತ್ತಿದ್ದು, ಕಳೆದ ಜೂನ್​ನಲ್ಲಿ 11 ಐಎಎಸ್​ ಅಧಿಕಾರಿಗಳನ್ನು ಹಾಗೂ ಜುಲೈ 1 ರಂದು 14 ಐಎಫ್​ಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಅದೇ ರೀತಿಯಾಗಿ ಇತ್ತೀಚೆಗೆ ಬರೊಬ್ಬರಿ 10 ಜನ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:51 pm, Wed, 13 September 23

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ