ಬೆಂಗಳೂರು, ಸೆಪ್ಟೆಂಬರ್ 13: 7 ತಿಂಗಳ ಬಳಿಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಜೊತೆಗೆ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ಗೆ (Roopa Divakar Moudgil) ಸರ್ಕಾರ ಹುದ್ದೆ ನಿಯೋಜನೆ ಮಾಡಲಾಗಿದೆ. ರೂಪಾ ಮೌದ್ಗಿಲ್ರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಮತ್ತು ಕರ್ನಾಟಕ ಗೆಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕರನ್ನಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅನ್ನು ನೇಮಕ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ ನಡುವಿನ ಹಿಂದಿನ ಜಗಳದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ವರ್ಗಾವಣೆ ಪರ್ವ ಮತ್ತೆ ಶುರು ಮಾಡಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ರೋಹಿಣಿ ಸಿಂಧೂರಿ ಈಗ ಹೊಸ ನೇಮಕಾತಿ ಪಡೆದ ಅಧಿಕಾರಿಗಳಲ್ಲಿ ಒಬ್ಬರಾಗಿದ್ದಾರೆ.
ಇದನ್ನೂ ಓದಿ: 99 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ: ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ
ಏಳು ತಿಂಗಳ ನಂತರ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರಿಗೆ ಸರ್ಕಾರಿ ಜವಾಬ್ದಾರಿಗಳನ್ನು ನೀಡಲಾಗಿದೆ. ಡಿ.ರೂಪಾ ಅವರನ್ನು ಆಂತರಿಕ ಭದ್ರತಾ ವಿಭಾಗದ ಇನ್ಸ್ಪೆಕ್ಟರ್ ಜನರಲ್ ಆಗಿ ನೇಮಿಸಲಾಗಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವೆ ಈ ಹಿಂದೆ ಜಗಳ ನಡೆದಿತ್ತು. ಐಎಎಸ್ ಅಧಿಕಾರಿ ಮಣಿವಣ್ಣನ್ ಮತ್ತು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರೊಂದಿಗೆ ಸಿಂಧೂರಿ ಇರುವ ಚಿತ್ರಗಳನ್ನು ರೂಪಾ ಹಂಚಿಕೊಂಡಿದ್ದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ವರ್ಗಾವಣೆ ಪರ್ವ ನಡೆಯುತ್ತಿದ್ದು, ಕಳೆದ ಜೂನ್ನಲ್ಲಿ 11 ಐಎಎಸ್ ಅಧಿಕಾರಿಗಳನ್ನು ಹಾಗೂ ಜುಲೈ 1 ರಂದು 14 ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಅದೇ ರೀತಿಯಾಗಿ ಇತ್ತೀಚೆಗೆ ಬರೊಬ್ಬರಿ 10 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:51 pm, Wed, 13 September 23