6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ
6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯ ಸರ್ಕಾರ (Karnataka Governmnet) ಇತ್ತೀಚೆಗೆ 53 ಐಪಿಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಿಸುವುದರ ಜೊತೆಗೆ ಬಡ್ತಿ ನೀಡಿತ್ತು. ಇದೀಗ 6 ಐಪಿಎಸ್ ಅಧಿಕಾರಿಗಳನ್ನು (IPS officers) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಕೊಂಡ ಅಧಿಕಾರಿಗಳ ಪಟ್ಟಿ ಹೀಗಿದೆ.
- ವೈ.ಎಸ್.ರವಿಕುಮಾರ್, ಡಿಐಜಿಪಿ, ನಿರ್ದೇಶಕ, ಮಾನವ ಹಕ್ಕುಗಳ ಜಾರಿ ನಿರ್ದೇಶನಾಲಯ
- ದಿವ್ಯಾ ವಿ.ಗೋಪಿನಾಥ್, ನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು
- ಆರ್.ಚೇತನ್, ಕಲಬುರಗಿ ನಗರ ಪೊಲೀಸ್ ಕಮಿಷನರ್
- ಹನುಮಂತರಾಯ, ಪೊಲೀಸ್ ವರಿಷ್ಠಾಧಿಕಾರಿ, ಗುಪ್ತದಳ ಹಾವೇರಿ
- ಎಂ.ನಾರಾಯಣ, ಪೊಲೀಸ್ ವರಿಷ್ಠಾಧಿಕಾರಿ, ಕೋಲಾರ
- ಡಾ. ಶಿವಕುಮಾರ್, ಪೊಲೀಸ್ ವರಿಷ್ಠಾಧಿಕಾರಿ, ಹಾವೇರಿ
ಈ ಹಿಂದೆ 4 ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಳೆದ ಕೆಲವು ತಿಂಗಳಿಂದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಸರಣಿ ವರ್ಗಾವಣೆಯನ್ನು ಮಾಡಿತ್ತು. ಈ ಹಿಂದೆ ನೂರಾರು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು, ಕೆಲವು ಡಿಜಿಪಿಗಳನ್ನು ವರ್ಷಗಾವಣೆ ಮಾಡಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿತ್ತು.
ಇದನ್ನೂ ಓದಿ: 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ
42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ
ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಸರಣಿ ವರ್ಗಾವಣೆ ಮಾಡಿತ್ತು. ಈ ಮಧ್ಯೆಯೇ 42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ಸಹ ನೀಡಿದೆ. ಜೊತೆಗೆ 5 ಐಎಎಸ್ ಅಧಿಕಾರಿಗಳಿಗೆ ಹುದ್ದೆಯಲ್ಲಿ ಮುಂದುವರಿಸಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:33 pm, Thu, 12 January 23