ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಅನುದಾನ ದುರ್ಬಳಕೆ ಆರೋಪ: ತನಿಖಾ ಸಮಿತಿ ರಚಿಸಿದ ಸರ್ಕಾರ

| Updated By: ಗಂಗಾಧರ​ ಬ. ಸಾಬೋಜಿ

Updated on: Sep 20, 2023 | 9:13 PM

ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆ ಯಲ್ಲಿ ಅನುದಾನ ದುರ್ಬಳಕೆ, ಭ್ರಷ್ಟಾಚಾರ, ಖಾಸಗಿ ಆಸ್ಪತ್ರೆ ಜೊತೆ ಕೈಜೋಡಿಸಿ ಆರ್ಥಿಕ ನಷ್ಟ ಆರೋಪ ಕೇಳಿಬಂದ ಹಿನ್ನೆಲೆ ಖಜಾನೆ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಅನುದಾನ ದುರ್ಬಳಕೆ ಆರೋಪ: ತನಿಖಾ ಸಮಿತಿ ರಚಿಸಿದ ಸರ್ಕಾರ
ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆ
Follow us on

ಬೆಂಗಳೂರು, ಸೆಪ್ಟೆಂಬರ್​ 20: ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆ (Kidwai Hospital) ಯಲ್ಲಿ ಅನುದಾನ ದುರ್ಬಳಕೆ, ಭ್ರಷ್ಟಾಚಾರ, ಖಾಸಗಿ ಆಸ್ಪತ್ರೆ ಜೊತೆ ಕೈಜೋಡಿಸಿ ಆರ್ಥಿಕ ನಷ್ಟ ಆರೋಪ ಕೇಳಿಬಂದ ಹಿನ್ನೆಲೆ ಖಜಾನೆ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ತನಿಖಾ ಸಮಿತಿ ರಚಿಸಿರು ಸರ್ಕಾರ, ಆರೋಪ, ದೂರುಗಳ ಬಗ್ಗೆ ಪರಿಶೀಲಿಸಿ 15 ದಿನಗಳಲ್ಲಿ ವರದಿ ನೀಡುವಂತೆ ಸಮಿತಿಗೆ ಸೂಚನೆ ನೀಡಲಾಗಿದೆ.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಒದಗಿಸುತ್ತಿರುವ ಸೇವೆಗಳಿಗೆ ರೋಗಿಗಳಿಂದ ಹೆಚ್ಚಿನ ಶುಲ್ಕ, ಅನುದಾನದ ದುರ್ಬಳಕೆ, ಭ್ರಷ್ಟಾಚಾರ, ಸಂಸ್ಥೆಯ ಸಿಬ್ಬಂದಿಗಳು ಖಾಸಗಿ ಸಂಸ್ಥೆಗಳೊಂದಿಗೆ ಕೈಜೋಡಿಸಿ ಸಂಸ್ಥೆಗೆ ಆರ್ಥಿಕ ನಷ್ಟ ಉಂಟು ಮಾಡುತ್ತಿರುವುದು, ರೋಗಿಗಳಿಗೆ ಕಳಪೆ ಮಟ್ಟದ ಚಿಕಿತ್ಸೆ,  ಔಷಧಗಳ ಕೊರತೆ, ಹೀಗೆ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರಕದ ಹಾಗೂ ಕೆ.ಟಿ.ಪಿ.ಪಿ ನಿಯಮಗಳನ್ನು ಉಲ್ಲಂಘಿಸಿ ನಿಗದಿತ ಸಂಸ್ಥೆಗೆ ಹೆಚ್ಚಿನ ಲಾಭ ಬರುವಂತೆ ಟೆಂಡರ್ ನೀಡಿರುವುದು, ಸೇವೆ/ಖರೀದಿಗಳಲ್ಲಿ ಹಾಗೂ ಔಷಧಗಳ ಖರೀದಿಯಲ್ಲಿ ಪಾರದರ್ಶಕತೆ ಇಲ್ಲದೆ ಅಕ್ರಮಗಳು ನಡೆದಿವೆ ಎನ್ನಲಾದ ಬಗ್ಗೆ ನಿರಂತರವಾಗಿ ಹಲವು ದೂರುಗಳು ಕೇಳಬಂದಿವೆ.

ಇದನ್ನೂ ಓದಿ: ಕಿದ್ವಾಯಿ ಆಸ್ಪತ್ರೆಯಲ್ಲಿ ಒಂದಲ್ಲಾ ಎರಡಲ್ಲಾ ಸಮಸ್ಯೆ: ಅಧಿಕಾರಿಗಳ‌ ನಿರ್ಲಕ್ಷಕ್ಕೆ ಅಸುನೀಗುತ್ತಿವೆ ಬಡ ಜೀವಗಳು

ಅದೇ ರೀತಿ, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಒದಗಿಸಲಾಗುತ್ತಿರುವ ಪೆಟ್ ಸ್ಕ್ಯಾನ್ ಸೇವೆಗೆ ಸಂಬಂಧಿಸಿದ ಟೆಂಡರ್​ ಪಾರದರ್ಶಕವಾಗಿ ನಡೆಯದೇ ಇರುವ ಬಗ್ಗೆ ಹಾಗೂ ಬೋನ್ ಮಾರೋ ಟ್ರಾನ್ಸ್ ಪ್ಲಾಂಟೇಷನ್ ಚಿಕಿತ್ಸೆಯ ಅವ್ಯವಸ್ಥೆಯ ಕುರಿತು ವಿವಿಧ ಪತ್ರಿಕೆಗಳಲ್ಲಿ ವರದಿಯಾಗಿರುವುದು ಸಹ ಸರ್ಕಾರದ ಗಮನಕ್ಕೆ ಬಂದಿದೆ. ಹಾಗಾಗಿ ಈ ಎಲ್ಲಾ ದೂರುಗಳ ಬಗ್ಗೆ ಪರಿಶೀಲಿಸಿ, ವರದಿಯನ್ನು ನೀಡುವ ಸಲುವಾಗಿ ಖಜಾನೆ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ.

ಜನರ ಜೀವದ ಜೊತೆ ಚೆಲ್ಲಾಟ

ಆಸ್ಪತ್ರೆ ಆಡಳಿತ ಮಂಡಳಿ ಸಣ್ಣ ಪುಟ್ಟ ಸ್ಕಾನಿಂಗ್​ಗಳಿಗೂ ದುಬಾರಿ ಹಣ ಪಡೆದುಕೊಳ್ಳಲಾಗುತ್ತಿದೆ. ಹೆಸರಿಗೆ ಮಾತ್ರ ರಕ್ತ ನಿಧಿ, ಆದರೆ ಬ್ಲಡ್ ಬೇಕು ಅಂದರೆ ಹೊರಗೆ ಹೋಗಿ ತೆಗೆದುಕೊಳ್ಳಬೇಕಾಗಿದೆ. ಅಲ್ಲದೇ ಈ ಹಿಂದೆ ಪೆಟ್ ಸ್ಕಾನಿಂಗ್​ಗೆ 7200 ರೂಪಾಯಿ ನಿಗದಿ ಮಾಡಲಾಗಿತ್ತು. ಆದರೆ ಈಗ 9 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಯಾಕೆ ಅಂತ ಕೇಳಿದರೆ ಸಿಬ್ಬಂದಿಗಳು ಕುಂಟು ನೆಪ ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.