ಜುಲೈ 26ರಿಂದ ರಾಜ್ಯಾದ್ಯಂತ ಪದವಿ ಕಾಲೇಜುಗಳು ಪುನರಾರಂಭ; ಮಾರ್ಗಸೂಚಿಗಳು ಹೀಗಿವೆ

ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಆರ್ಟಿಪಿಸಿಆರ್ (RTPCR) ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಯಾವುದೇ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ.

ಜುಲೈ 26ರಿಂದ ರಾಜ್ಯಾದ್ಯಂತ ಪದವಿ ಕಾಲೇಜುಗಳು ಪುನರಾರಂಭ; ಮಾರ್ಗಸೂಚಿಗಳು ಹೀಗಿವೆ
ಸಾಂಕೇತಿಕ ಚಿತ್ರ
Follow us
| Updated By: sandhya thejappa

Updated on:Jul 25, 2021 | 11:53 AM

ಬೆಂಗಳೂರು: ಜುಲೈ 26 ಅಂದರೆ ನಾಳೆಯಿಂದ ರಾಜ್ಯಾದ್ಯಂತ ಪದವಿ ಕಾಲೇಜುಗಳು ಆರಂಭವಾಗುತಿದ್ದು, ಲಸಿಕೆ ಪಡೆದ ವಿದ್ಯಾರ್ಥಿಗಳಷ್ಟೇ ಕಾಲೇಜಿಗೆ ಬರಲು ಅವಕಾಶವಿರುತ್ತದೆ. ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಆರ್ಟಿಪಿಸಿಆರ್ (RTPCR) ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಯಾವುದೇ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ. ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರದಿದ್ದರೂ ಪ್ರಾಧ್ಯಾಪಕರು ಮಾತ್ರ ಕಡ್ಡಾಯವಾಗಿ ಹಾಜರಾಗಬೇಕು.

ಸುಮಾರು ಮೂರು ತಿಂಗಳ ಬಳಿಕ ಕಾಲೇಜುಗಳನ್ನು ತೆರೆಯಲಾಗುತ್ತಿದೆ. ಕಾಲೇಜುಗಳನ್ನ ಕಡ್ಡಾಯವಾಗಿ ತೆರೆಯಲು ವಿವಿಗಳು ಸೂಚನೆ ನೀಡಿವೆ. ಈಗಾಗಲೇ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದ್ದು, ಶೀಘ್ರದಲ್ಲೇ ಬಾಕಿ ಉಳಿದ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಕೊವಿಡ್ ಮಾರ್ಗಸೂಚಿ ಅನುಸರಿಸಿ ನಾಳೆಯಿಂದ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಭೌತಿಕ ತರಗತಿ ಶುರು ಮಾಡಲಾಗುವುದು.

ಪದವಿ ಕಾಲೇಜುಗಳ ಪ್ರಾರಂಭಕ್ಕೆ ಮಾರ್ಗಸೂಚಿಗಳೇನು? * ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. * ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಪ್ರವೇಶ ಇಲ್ಲ. * ಸ್ವ ಇಚ್ಛೆಯಿಂದ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು. * ಕಾಲೇಜು ಪ್ರಾರಂಭವಾದರೂ ಆನ್​ಲೈನ್​ ತರಗತಿಗಳು ಎಂದಿನಂತೆ ನಡೆಯಲಿದೆ. * ಅಧ್ಯಾಪಕರ ವರ್ಗ ಮತ್ತು ಸಿಬ್ಬಂದಿ ವರ್ಗ ಕಡ್ಡಾಯವಾಗಿ ಒಂದು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. * ಪ್ರತಿ ಕಾಲೇಜಿನಲ್ಲೂ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿಯನ್ನು ಪಾಲಿಸಬೇಕು. * ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ನಿತ್ಯ ಥರ್ಮಲ್ ಸ್ಕ್ಯಾನಿಂಗ್ ನಡೆಸಬೇಕು. * ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಕಾಲೇಜು, ಕ್ಯಾಂಪಸ್​ನಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. * ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಾಲೇಜು ಆಡಳಿತ ಮಂಡಳಿ ಕ್ರಮವಹಿಸಬೇಕು. * ಕಾಲೇಜು, ವಿವಿ ಆವರಣದಲ್ಲಿ ಆರೋಗ್ಯ ಸಹಾಯವಾಣಿ ಪ್ರಾರಂಭ ಮಾಡಬೇಕು. * ಕಾಲೇಜು, ವಿವಿಗಳಲ್ಲಿ ಈಜುಕೊಳಗಳ ಪ್ರಾರಂಭಕ್ಕೆ ನಿಷೇಧ. * ಗ್ರಂಥಾಲಯಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮವಹಿಸಬೇಕು. * ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು.

ಇದನ್ನೂ ಓದಿ

ರಾಜ್ಯಾದ್ಯಂತ ನಾಳೆಯಿಂದಲೇ ಚಿತ್ರಮಂದಿರಗಳು ಓಪನ್, ಜುಲೈ 26ರಿಂದ ಪದವಿ ಕಾಲೇಜು ತೆರೆಯಲು ಅವಕಾಶ

Degree College Reopen: ಪದವಿ ಕಾಲೇಜು ಆರಂಭಕ್ಕೆ ಯುಜಿಸಿ ಮಾರ್ಗಸೂಚಿ; ಸೆಪ್ಟೆಂಬರ್ 30ರ ಒಳಗೆ ದಾಖಲಾತಿ, ಅಕ್ಟೋಬರ್ 1ರಿಂದ ತರಗತಿ

(Graduate colleges begin July 26 and Only students who are vaccinated are allowed to attend college)

Published On - 11:52 am, Sun, 25 July 21

ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ