AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮನೆ ಕಟ್ಟುವವರಿಗೆ ಜಿಬಿಎ ಬಂಪರ್ ಗಿಫ್ಟ್! ಸೆಟ್ ಬ್ಯಾಕ್ ಉಲ್ಲಂಘನೆ ಮಿತಿ ವಿಸ್ತರಣೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರವು (ಜಿಬಿಎ) ಕಟ್ಟಡ ಉಪವಿಧಿಗಳನ್ನು ತಿದ್ದುಪಡಿ ಮಾಡಿದೆ. ಸೆಟ್ ಬ್ಯಾಕ್ ಉಲ್ಲಂಘನೆ ವಿನಾಯಿತಿ ಮಿತಿಯನ್ನು ಶೇಕಡ 5ರಿಂದ ಶೇಕಡ 15ಕ್ಕೆ ಏರಿಸಲಾಗಿದೆ. ಇದು ಬೆಂಗಳೂರಿನಲ್ಲಿ ಮನೆ ಕಟ್ಟುವವರಿಗೆ ದೊಡ್ಡ ಪರಿಹಾರ ನೀಡಲಿದೆ. ಹಾಗಾದರೆ ಸೆಟ್ ಬ್ಯಾಕ್ ಉಲ್ಲಂಘನೆ ಎಂದರೇನು? ಇದರ ವಿನಾಯಿತಿ ಮಿತಿ ವಿಸ್ತರಣೆಯಿಂದ ಮನೆ ಕಟ್ಟುವವರಿಗೆ, ಕಟ್ಟಿದವರಿಗೆ ಪ್ರಯೋಜನವೇನು? ಇಲ್ಲಿದೆ ಮಾಹಿತಿ.

ಬೆಂಗಳೂರು: ಮನೆ ಕಟ್ಟುವವರಿಗೆ ಜಿಬಿಎ ಬಂಪರ್ ಗಿಫ್ಟ್! ಸೆಟ್ ಬ್ಯಾಕ್ ಉಲ್ಲಂಘನೆ ಮಿತಿ ವಿಸ್ತರಣೆ
ಸಾಂದರ್ಭಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on:Apr 04, 2026 | 7:57 AM

Share

ಬೆಂಗಳೂರು, ಏಪ್ರಿಲ್ 4: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿನ ಕಟ್ಟಡ ಉಪವಿಧಿಗಳ ಕುರಿತು ಮಹತ್ವದ ಕರಡು ಅಧಿಸೂಚನೆ ಪ್ರಕಟಗೊಂಡಿದೆ. ಇದರೊಂದಿಗೆ ಬೆಂಗಳೂರಿನಲ್ಲಿ (Bangalore) ಮನೆ ಕಟ್ಟುವವರಿಗೆ ಸರ್ಕಾರದಿಂದ ಅತಿ ದೊಡ್ಡ ಪರಿಹಾರ ಒದಗಿಸಿದಂತಾಗಿದೆ. ಹೊಸ ಪ್ರಸ್ತಾವನೆಯಲ್ಲಿ ಸೆಟ್ ಬ್ಯಾಕ್ ಉಲ್ಲಂಘನೆ ವಿನಾಯಿತಿ ಮಿತಿಯನ್ನು ಶೇಕಡ 5ರಿಂದ ಶೇಕಡ 15ಕ್ಕೆ ಏರಿಸಲು ನಿರ್ಧರಿಸಲಾಗಿದೆ. ಈ ಹಿಂದೆ, ಕಟ್ಟಡ ನಿರ್ಮಾಣದಲ್ಲಿ ಶೇಕಡ 5ರಷ್ಟು ಮಾತ್ರ ಸೆಟ್ ಬ್ಯಾಕ್ ಉಲ್ಲಂಘನೆಗಳನ್ನು ಸಕ್ರಮಗೊಳಿಸಲು ಅವಕಾಶವಿತ್ತು. ಹೆಚ್ಚಿನ ಕಟ್ಟಡಗಳು ಈ ಮಿತಿಯನ್ನು ಮೀರಿ ನಿರ್ಮಾಣಗೊಂಡಿದ್ದರಿಂದ ಸಮಸ್ಯೆ ಉಂಟಾಗಿತ್ತು. ಇದನ್ನು ಮನಗಂಡು, ಸರ್ಕಾರವು 2003ರ ಉಪವಿಧಿ ಆರಕ್ಕೆ ತಿದ್ದುಪಡಿ ತರಲು ನಿರ್ಧರಿಸಿದೆ.

ಈ ಹೊಸ ನಿಯಮ ಜಾರಿಗೆ ಬಂದರೆ, ಶೇಕಡ 15ರಷ್ಟು ಜಾಗವನ್ನು ಒತ್ತುವರಿ ಮಾಡಿ ಮನೆ ಕಟ್ಟಿದರೂ, ನಿಗದಿತ ದಂಡವನ್ನು ಪಾವತಿಸಿ ಅದನ್ನು ಸಕ್ರಮ ಮಾಡಿಕೊಳ್ಳಲು ಅವಕಾಶ ಲಭಿಸಲಿದೆ. ಸಾರ್ವಜನಿಕರು ಈ ಕರಡು ಅಧಿಸೂಚನೆ ಕುರಿತು ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ನೀಡಲು ಆಹ್ವಾನಿಸಲಾಗಿದೆ.

ಸೆಟ್ ಬ್ಯಾಕ್ ಉಲ್ಲಂಘನೆ ಎಂದರೇನು?

ಸೆಟ್ ಬ್ಯಾಕ್ ಉಲ್ಲಂಘನೆ ಎಂದರೇನು ಎಂಬುದನ್ನು ಸರಳವಾಗಿ ಹೇಳುವುದಾದರೆ, ನಿಮ್ಮ ಜಾಗದಲ್ಲಿ ಮನೆ ಕಟ್ಟುವಾಗ ಕಟ್ಟಡದ ಸುತ್ತಲೂ ನಿರ್ದಿಷ್ಟ ಪ್ರಮಾಣದ ಖಾಲಿ ಜಾಗವನ್ನು ಬಿಡಬೇಕು ಎಂಬುದು ನಿಯಮ. ಉದಾಹರಣೆಗೆ, 30×40 ಅಳತೆಯ ನಿವೇಶನದಲ್ಲಿ ಮನೆ ಕಟ್ಟುವಾಗ ರಸ್ತೆಯ ಕಡೆಗೆ ಅಥವಾ ಅಕ್ಕಪಕ್ಕದ ಮನೆಗಳ ಗೋಡೆಗಳಿಗೆ ತಾಗದಂತೆ ಮೂರು ಅಥವಾ ನಾಲ್ಕು ಅಡಿಗಳಷ್ಟು ಜಾಗವನ್ನು ಖಾಲಿ ಬಿಡಬೇಕು. ಹಳೆಯ ನಿಯಮದ ಪ್ರಕಾರ, ಈ ರೀತಿ ಬಿಡಬೇಕಾದ ಜಾಗದಲ್ಲಿ ಶೇಕಡ 5ರಷ್ಟು ಮಾತ್ರ ವ್ಯತ್ಯಾಸ (ಉಲ್ಲಂಘನೆ) ಆಗಲು ಅವಕಾಶವಿತ್ತು. ಅದಕ್ಕಿಂತ ಹೆಚ್ಚು ಜಾಗವನ್ನು ಒತ್ತುವರಿ ಮಾಡಿ ಕಟ್ಟಿದರೆ ಅದು ಅಕ್ರಮ ಕಟ್ಟಡವೆಂದು ಪರಿಗಣಿಸಲ್ಪಟ್ಟು ಪಾಲಿಕೆಯು ದಂಡ ವಿಧಿಸುತ್ತಿತ್ತು ಅಥವಾ ಅದನ್ನು ತೆರವುಗೊಳಿಸುತ್ತಿತ್ತು. ಈಗಿನ ಹೊಸ ಪ್ರಸ್ತಾವನೆಯು ಈ ಮಿತಿಯನ್ನು ಶೇಕಡ 15ಕ್ಕೆ ಏರಿಸಿರುವುದರಿಂದ, ಸಣ್ಣ ಪ್ರಮಾಣದ ಉಲ್ಲಂಘನೆಗಳಿಗೆ ಕಾನೂನುಬದ್ಧ ಪರಿಹಾರ ಸಿಗಲಿದೆ.

Gba

ಕಟ್ಟಡ ಉಪವಿಧಿಗಳ ತಿದ್ದುಪಡಿಯ ಜೊತೆಗೆ, ಹೊಸದಾಗಿ ಅಸ್ತಿತ್ವಕ್ಕೆ ಬಂದ ಜಿಬಿಎ ಮತ್ತು ಅದರ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಹೊಸ ಲೋಗೋಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರತಿ ಪಾಲಿಕೆಗೂ ಒಂದೊಂದು ವಿಶಿಷ್ಟ ಬಣ್ಣದ ಥೀಮ್ ನೀಡಲಾಗಿದೆ. ಜಿಬಿಎ ಲಾಂಛನದಲ್ಲಿ ಬೆಂಗಳೂರಿನ ಗಡಿಗೋಪುರದ ಚಿತ್ರದ ಜೊತೆಗೆ ಕೆಂಪೇಗೌಡರ ಚಿತ್ರವನ್ನು ಸೇರಿಸಲಾಗಿದೆ. ಬೆಂಗಳೂರು ಕೇಂದ್ರ ಪಾಲಿಕೆಯ ಲೋಗೋಗೆ ನೀಲಿ ಬಣ್ಣ, ಬೆಂಗಳೂರು ಉತ್ತರ ಪಾಲಿಕೆಯ ಲೋಗೋಗೆ ಗುಲಾಬಿ ಬಣ್ಣ, ಬೆಂಗಳೂರು ದಕ್ಷಿಣ ಪಾಲಿಕೆಯ ಲೋಗೋಗೆ ತಿಳಿ ಹಸಿರು ಬಣ್ಣ, ಬೆಂಗಳೂರು ಪೂರ್ವ ಪಾಲಿಕೆಯ ಲೋಗೋಗೆ ನವಿಲು ಹಸಿರು ಬಣ್ಣ, ಹಾಗೂ ಬೆಂಗಳೂರು ಪಶ್ಚಿಮ ಪಾಲಿಕೆಯ ಲೋಗೋಗೆ ಕಂದು ಬಣ್ಣದ ಥೀಮ್ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಹೊಸ ಫ್ಲೈಓವರ್ ನಿರ್ಮಾಣಕ್ಕೆ ಮುಂದಾದ ಜಿಬಿಎ: ಎಲ್ಲಿಂದ ಎಲ್ಲಿಗೆ ಸಂಪರ್ಕ?

ಪ್ರತಿಯೊಂದು ಲೋಗೋದಲ್ಲಿಯೂ ಕೆಂಪೇಗೌಡ ಗೋಪುರ ಸಾಮಾನ್ಯ ಅಂಶವಾಗಿದ್ದು, ಅವುಗಳನ್ನು ವಿಭಿನ್ನ ಬಣ್ಣಗಳಲ್ಲಿ ರಚಿಸಿರುವುದು ವಿಶೇಷ. ಈ ಮೂಲಕ ಜಿಬಿಎ ತನ್ನ ಕಾರ್ಯಾಚರಣೆಗಳನ್ನು ಹೊಸದಾಗಿ ಗುರುತಿಸಿಕೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:44 am, Sat, 4 April 26

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ