ಕೋರ್ಟ್​ ಮಹತ್ವದ ಆದೇಶ: ಗ್ರೇಟರ್ ಬೆಂಗಳೂರು (ಆಡಳಿತ) ಕಾಯ್ದೆಯಡಿ ಭೂಸ್ವಾಧೀನಕ್ಕೆ ಹಿನ್ನಡೆ

ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು(ಆಡಳಿತ) ಕಾಯ್ದೆಯಡಿ ಭೂಸ್ವಾಧೀನಕ್ಕೆ ಆರಂಭಿಕ ಹಿನ್ನಡೆಯಾಗಿದೆ. 2025ರ ಮೇ 15ರಂದು ಕಾಯ್ದೆ ಜಾರಿಯಾಗುವ ಮುನ್ನವೇ ಮಾರ್ಚ್ 12ರಂದೇ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿತ್ತು. 11 ಸಾವಿರ ಎಕರೆ ಕಾನೂನುಬಾಹಿರ ಭೂಸ್ವಾಧೀನಕ್ಕೆ ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ.

ಕೋರ್ಟ್​ ಮಹತ್ವದ ಆದೇಶ: ಗ್ರೇಟರ್ ಬೆಂಗಳೂರು (ಆಡಳಿತ) ಕಾಯ್ದೆಯಡಿ ಭೂಸ್ವಾಧೀನಕ್ಕೆ ಹಿನ್ನಡೆ
ಹೈಕೋರ್ಟ್
Edited By:

Updated on: Jul 24, 2025 | 6:36 PM

ಬೆಂಗಳೂರು, (ಜುಲೈ 24): ಗ್ರೇಟರ್ ಬೆಂಗಳೂರು(ಆಡಳಿತ) (Greater Bengaluru)ಕಾಯ್ದೆಯಡಿ ಭೂಸ್ವಾಧೀನಕ್ಕೆ ಆರಂಭಿಕ ವಿಘ್ನ ಎದುರಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ (2025) ಅಡಿಯಲ್ಲಿ ಭೂಸ್ವಾಧೀನ ಪ್ರಶ್ನಿಸಿ ರಾಜಗೋಪಾಲ ಗೋಪಾಲಕೃಷ್ಣ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ನೋಟಿಸ್ ಆಧರಿಸಿ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು. ಅರ್ಜಿದಾರರ ಬಿಡದಿ ಜಮೀನಿನ ಸ್ವಾಧೀನಕ್ಕೆ ಅಡ್ಡಿಪಡಿಸದಂತೆ ಆದೇಶ ಹೊರಡಿಸಿದೆ. ಅಲ್ಲದೇ ಈ ಬಗ್ಗೆ ಜುಲೈ 29ರಂದು ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರ (Karnataka Government) , ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿ ನೋಟಿಸ್ ನೀಡಿದೆ.

2025ರ ಮೇ 15ರಂದು ಕಾಯ್ದೆ ಜಾರಿಯಾಗುವ ಮುನ್ನವೇ ಮಾರ್ಚ್ 12ರಂದೇ ರಾಜ್ಯ ಸರ್ಕಾರ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ 11 ಸಾವಿರ ಎಕರೆ ಕಾನೂನುಬಾಹಿರ ಭೂಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ. ಆದ್ರೆ, ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸದೇ ಹಾಗೂ ಪರಿಸರ ಅನುಮತಿ ಪಡೆಯದೇ ಭೂಸ್ವಾಧೀನಕ್ಕೆ ಮುಂದಾಗಿದೆ ಎಂದು ಅರ್ಜಿದಾರರ ಪರ ವಕೀಲ ಸದಾನಂದ್ ಜಿ ಶಾಸ್ತ್ರಿ ವಾದ ಮಂಡಿಸಿದರು. ಈ ವಾದ ಆಲಿಸಿದ ಹೈಕೋರ್ಟ್, ಜುಲೈ 29ರಂದು ಪ್ರತಿಕ್ರಿಯಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಇದನ್ನೂ ಓದಿ: ರಾಮನಗರದ ಈ ಪ್ರದೇಶಗಳ ಜನರೇ ಗಮನಿಸಿ: ಭೂ ಸ್ವಾಧೀನ ಅಧಿಸೂಚನೆ ಹೊರಡಿಸಿದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ

ಗ್ರೇಟರ್ ಬೆಂಗಳೂರಿಗೆ (Greater Bengaluru) ಈಗಾಗಲೇ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಇದು ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಜಟಾಪಟಿಗೂ ಕಾರಣವಾಗಿತ್ತು. ಇನ್ನು ಇತ್ತೀಚೆಗೆ ಗ್ರೇಟರ್ ಬೆಂಗಳೂರು ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿತ್ತು. ಆ ಮೂಲಕ ಮಹಾನಗರವನ್ನ ಐದು ಭಾಗಗಳಾಗಿ ವಿಂಗಡಿಸಲು ಸರ್ಕಾರ ಮುಂದಾಗಿತ್ತು. ಇದೆಲ್ಲದರ ಮಧ್ಯೆ ಇದೀಗ ಬಿಡದಿ ಸಮಗ್ರ ಉಪನಗರ ಯೋಜನೆ ಅನುಷ್ಠಾನಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಹಿನ್ನೆಲೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಕೆ.ಜಿ.ಗೊಲ್ಲರಪಾಳ್ಯ, ಕೆಂಪಯ್ಯನಪಾಳ್ಯ, ಬನ್ನಿಗಿರಿ, ಭೈರಮಂಗಲ, ಕಂಚುಗಾರನಹಳ್ಳಿ, ಮಂಡಲಹಳ್ಳಿ, ವಡೇರಹಳ್ಳಿ ಗ್ರಾಮಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆಗೆ ಪ್ರಾಧಿಕಾರ ಮುಂದಾಗಿದೆ.

ಇದನ್ನೂ ಓದಿ
ಗ್ರೇಟರ್​ ಬೆಂಗಳೂರು: 5 ಪಾಲಿಕೆಗಳನ್ನು ರಚಿಸಿ ಸರ್ಕಾರ ಆದೇಶ
ರಾಮನಗರದ ಈ ಪ್ರದೇಶಗಳ ಜನರೇ ಗಮನಿಸಿ: ಭೂ ಸ್ವಾಧೀನ ಅಧಿಸೂಚನೆ ಹೊರಡಿಸಿದೆ
ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್
ಗ್ರೇಟರ್ ಬೆಂಗಳೂರು ವಿಧೇಯಕ: ಇದು ಬೆಂಗಳೂರಿನ ಪಾಲಿಗೆ ಮರಣ ಶಾಸನ ಎಂದ ಅಶೋಕ್​

ಗ್ರೇಟರ್​ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆಗಳನ್ನು ರಚನೆ ಮಾಡಿ ಈಗಾಗಲೇ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರ ಐದೂ ಮಹಾನಗರ ಪಾಲಿಕೆಗಳ ಗಡಿಯನ್ನು ಗುರುತು ಮಾಡಿದೆ. ಬೃಹತ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ಕೇಂದ್ರ ಕಚೇರಿಯನ್ನು ಆಗಸ್ಟ್ 10ರೊಳಗೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರ (GBA) ಕೇಂದ್ರ ಕಚೇರಿಯಾಗಿ ಮಾರ್ಪಾಡು ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಆಗಸ್ಟ್ 11ರಿಂದ ಆರಂಭವಾಗುವ ಮುಂಗಾರು ಅಧಿವೇಶನದಲ್ಲಿ ಐದು ಪಾಲಿಕೆಗಳನ್ನು ರಚನೆ ಮಾಡಿದ ವಿಚಾರವಾಗಿ ಚರ್ಚೆ ನಡೆಸಿ, ಬಿಲ್ ಪಾಸ್​ ಮಾಡಲು ಸರ್ಕಾರ ತಯಾರಿ ನಡೆಸಿದೆ. ಈ ಪಾಲಿಕೆಗಳ ರಚನೆ ಬಗ್ಗೆ ಆಕ್ಷೇಪಣೆ ಇದ್ದರೇ ಸಾರ್ವಜನಿಕರು ಸಲಹೆ ನೀಡುವಂತೆ ಸರ್ಕಾರ ಹೇಳಿದೆ.

5 ಪಾಲಿಕೆಗಳು ಯಾವ್ಯಾವು?

  1. ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ
  2. ಬೆಂಗಳೂರು ಉತ್ತರ ಮಹಾನಗರ ಪಾಲಿಕೆ
  3. ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ
  4. ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ
  5. ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.