AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್​ ಬೆಂಗಳೂರು: 5 ಪಾಲಿಕೆಗಳನ್ನು ರಚಿಸಿ ಸರ್ಕಾರ ಆದೇಶ

ಬೆಂಗಳೂರಿನ ಆಡಳಿತ ವಿಕೇಂದ್ರೀಕರಣಕ್ಕಾಗಿ ಕರ್ನಾಟಕ ಸರ್ಕಾರವು ಐದು ಪಾಲಿಕೆಗಳನ್ನು ರಚಿಸಿದೆ . ಬೆಂಗಳೂರು ದಕ್ಷಿಣ, ಉತ್ತರ, ಕೇಂದ್ರ, ಪಶ್ಚಿಮ ಮತ್ತು ಪೂರ್ವ ಮಹಾನಗರ ಪಾಲಿಕೆಗಳನ್ನು ರಚಿಸಲಾಗಿದೆ. ಆಗಸ್ಟ್ 10 ರೊಳಗೆ ಬಿಬಿಎಂಪಿ ಕಚೇರಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಚೇರಿಯಾಗಿ ಪರಿವರ್ತಿಸಲಾಗುವುದು. ಈ ಬದಲಾವಣೆಗಳ ಕುರಿತು ಸಾರ್ವಜನಿಕ ಅಭಿಪ್ರಾಯವನ್ನು ಸರ್ಕಾರ ಕೋರಿದೆ.

ಗ್ರೇಟರ್​ ಬೆಂಗಳೂರು: 5 ಪಾಲಿಕೆಗಳನ್ನು ರಚಿಸಿ ಸರ್ಕಾರ ಆದೇಶ
ವಿಧಾನಸೌಧ
ಶಾಂತಮೂರ್ತಿ
| Updated By: ವಿವೇಕ ಬಿರಾದಾರ|

Updated on:Jul 19, 2025 | 7:33 PM

Share

ಬೆಂಗಳೂರು, ಜುಲೈ 19: ಗ್ರೇಟರ್​ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆಗಳನ್ನು (Bengaluru 5 Corporations) ರಚನೆ ಮಾಡಿ ಕರ್ನಾಟಕ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಸರ್ಕಾರ ಐದೂ ಮಹಾನಗರ ಪಾಲಿಕೆಗಳ ಗಡಿಯನ್ನು ಗುರುತು ಮಾಡಿದೆ. ಬೃಹತ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ಕೇಂದ್ರ ಕಚೇರಿಯನ್ನು ಆಗಸ್ಟ್ 10ರೊಳಗೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರ (GBA) ಕೇಂದ್ರ ಕಚೇರಿಯಾಗಿ ಮಾರ್ಪಾಡು ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಆಗಸ್ಟ್ 11ರಿಂದ ಆರಂಭವಾಗುವ ಮುಂಗಾರು ಅಧಿವೇಶನದಲ್ಲಿ ಐದು ಪಾಲಿಕೆಗಳನ್ನು ರಚನೆ ಮಾಡಿದ ವಿಚಾರವಾಗಿ ಚರ್ಚೆ ನಡೆಸಿ, ಬಿಲ್ ಪಾಸ್​ ಮಾಡಲು ಸರ್ಕಾರ ತಯಾರಿ ನಡೆಸಿದೆ. ಈ ಪಾಲಿಕೆಗಳ ರಚನೆ ಬಗ್ಗೆ ಆಕ್ಷೇಪಣೆ ಇದ್ದರೇ ಸಾರ್ವಜನಿಕರು ಸಲಹೆ ನೀಡುವಂತೆ ಸರ್ಕಾರ ಹೇಳಿದೆ.

5 ಪಾಲಿಕೆಗಳು ಯಾವ್ಯಾವು?

  1. ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ
  2. ಬೆಂಗಳೂರು ಉತ್ತರ ಮಹಾನಗರ ಪಾಲಿಕೆ
  3. ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ
  4. ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ
  5. ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ

ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ-2024ರ ಅಡಿಯಲ್ಲಿ ಸರ್ಕಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಮಾಡಲಾಗಿದೆ. ಈ ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆಗಳನ್ನು ರಚನೆ ಮಾಡಲಾಗಿದೆ.

ಸಮಿತಿ ವರದಿಯಲ್ಲಿ ಏನಿತ್ತು?

ಅಧಿಕಾರ ವಿಕೇಂದ್ರೀಕರಣದ ಸಲುವಾಗಿ ಬಿಬಿಎಂಪಿಯನ್ನು 7ರ ವರೆಗೆ ಎಷ್ಟು ಭಾಗಗಳಾಗಿ ಬೇಕಿದ್ದರೂ ವಿಂಗಡಿಸುವ ಕುರಿತು ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್​ ಪಾಟೀಲ್​ ನೇತೃತ್ವದ ಗ್ರೇಟರ್ ಬೆಂಗಳೂರು ಸಮಿತಿಯು ಶಿಫಾರಸು ಮಾಡಿತ್ತು. ಪಾಲಿಕೆಗಳನ್ನು ರಚನೆ ಮಾಡುವ ಸಂದರ್ಭದಲ್ಲಿ ವಾರ್ಡ್‌ಗಳ ಸಂಖ್ಯೆಯೂ ಹೆಚ್ಚಳ ಮಾಡಬೇಕು. ಪ್ರತಿ ಪಾಲಿಕೆಗೂ 100ರಿಂದ 125 ವಾರ್ಡ್‌ಗಳನ್ನು ರಚನೆ ಮಾಡಬೇಕು ಎಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇದನ್ನೂ ಓದಿ
Image
ರಾಮನಗರದ ಈ ಪ್ರದೇಶಗಳ ಜನರೇ ಗಮನಿಸಿ: ಭೂ ಸ್ವಾಧೀನ ಅಧಿಸೂಚನೆ ಹೊರಡಿಸಿದೆ
Image
ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್
Image
ಗ್ರೇಟರ್ ಬೆಂಗಳೂರು ವಿಧೇಯಕ: ಇದು ಬೆಂಗಳೂರಿನ ಪಾಲಿಗೆ ಮರಣ ಶಾಸನ ಎಂದ ಅಶೋಕ್​
Image
ಅಭಿವೃದ್ಧಿ ದೃಷ್ಟಿಯಿಂದ 5 ಭಾಗಗಳಲ್ಲಿ ಬಿಬಿಎಂಪಿ ವಿಭಜನೆಗೆ ಸರ್ಕಾರ ಚಿಂತನೆ

ಇದನ್ನೂ ಓದಿ: ರಾಮನಗರದ ಈ ಪ್ರದೇಶಗಳ ಜನರೇ ಗಮನಿಸಿ: ಭೂ ಸ್ವಾಧೀನ ಅಧಿಸೂಚನೆ ಹೊರಡಿಸಿದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ

ಬೆಂಗಳೂರು ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿದ್ದು. ಈ ಅಭಿವೃದ್ಧಿಗೆ ಅನುಗುಣವಾಗಿ ಬೆಂಗಳೂರಿನ ಆಡಳಿತವನ್ನು ವಿಕೇಂದ್ರೀಕರಣ ಮಾಡಬೇಕು ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಂಗಡಣೆ ಮಾಡಬೇಕು ಎನ್ನುವು ವಿಚಾರವು ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಲ್ಲೇ ಇದೆ. ಹೀಗಾಗಿ, ಇದೀಗ ಆಡಳಿತದ ದೃಷ್ಟಿಯಿಂದ ಐದು ಪಾಲಿಕೆಗಳನ್ನು ರಚನೆ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 7:32 pm, Sat, 19 July 25