AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಾಳಿಯೂ ಸುರಕ್ಷಿತವಲ್ಲ: ನಗರದ ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಡಬ್ಲ್ಯುಎಚ್​ಒ ಮಿತಿಗಿಂತ ದುಪ್ಪಟ್ಟು

ಬೆಂಗಳೂರಿನಲ್ಲಿ ಮಾರಾಟವಾಗುವ ತಿಂಡಿ, ತಿನಿಸುಗಳಲ್ಲಿ ಕಲಬೆರಕೆಯಾಗುತ್ತಿರುವುದರ ವಿರುದ್ಧ ಆಹಾರ ಮತ್ತು ಸುರಕ್ಷತಾ ಇಲಾಖೆ ಹೋರಾಟ ನಡೆಸುತ್ತಿದೆ. ಆದರೆ, ಇದೀಗ ನಗರದಲ್ಲಿ ಜನ ಉಸಿರಾಡುವ ಗಾಳಿಯೂ ಮಾರಕ ಎಂಬ ಆಘಾತಕಾರಿ ವರದಿ ಪ್ರಕಟವಾಗಿದೆ. ಬೆಂಗಳೂರಿನ ಗಾಳಿಯಲ್ಲಿರುವ ನೈಟ್ರೋಜನ್ ಡೈಆಕ್ಸೈಡ್ ಪ್ರಮಾಣ ವಿಶ್ವ ಆರೋಗ್ಯ ಸಂಸ್ಥೆ ನಿಗದಿಪಡಿಸಿದ ಮಾನದಂಡಗಳಿಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿತ್ತು ಎಂಬುದು ಗೊತ್ತಾಗಿದೆ.

ಬೆಂಗಳೂರಿನಲ್ಲಿ ಗಾಳಿಯೂ ಸುರಕ್ಷಿತವಲ್ಲ: ನಗರದ ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಡಬ್ಲ್ಯುಎಚ್​ಒ ಮಿತಿಗಿಂತ ದುಪ್ಪಟ್ಟು
ವಾಯು ಮಾಲಿನ್ಯ (ಸಾಂದರ್ಭಿಕ ಚಿತ್ರ)
Ganapathi Sharma
|

Updated on: Dec 06, 2024 | 8:09 AM

Share

ಬೆಂಗಳೂರು, ಡಿಸೆಂಬರ್ 6: ಬೆಂಗಳೂರಿನ ವಾರ್ಷಿಕ ಸರಾಸರಿ ನೈಟ್ರೋಜನ್ ಡೈಆಕ್ಸೈಡ್ (NO2) ಸಾಂದ್ರತೆಯು 2023 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ನಿಗದಿಪಡಿಸಿದ ಮಾನದಂಡಗಳಿಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿತ್ತು ಎಂಬುದು ವರದಿಯೊಂದರಿಂದ ತಿಳಿದುಬಂದಿದೆ. ಸಿಟಿ ರೈಲು ನಿಲ್ದಾಣ (ಮೆಜೆಸ್ಟಿಕ್) ಅತಿಹೆಚ್ಚು ಮಾಲಿನ್ಯ ಹೊಂದಿರುವ ಪ್ರದೇಶವಾಗಿ ಹೊರಹೊಮ್ಮಿತ್ತು ಎಂಬುದನ್ನು ‘ಗ್ರೀನ್‌ಪೀಸ್ ಇಂಡಿಯಾ’ದ ಹೊಸ ವರದಿ ಬಹಿರಂಗಪಡಿಸಿದೆ.

‘ಬಿಯಾಂಡ್ ನಾರ್ತ್’ ಎಂಬ ಹೆಸರಿನಲ್ಲಿ ಪ್ರಕಟವಾಗಿರುವ ವರದಿಯಲ್ಲಿ ಜೈಪುರ, ಪುಣೆ, ಮುಂಬೈ, ಕೋಲ್ಕತ್ತಾ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈ ನಗರಗಳಲ್ಲಿನ ನೈಟ್ರೋಜನ್ ಡೈಆಕ್ಸೈಡ್ ಸಾಂದ್ರತೆಯನ್ನು ಉಲ್ಲೇಖಿಸಲಾಗಿದೆ.

ನೈಟ್ರೋಜನ್ ಡೈಆಕ್ಸೈಡ್ ಉಸಿರಾಟಕ್ಕೆ ಸಂಬಂಧಿಸಿದ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ದಕ್ಷಿಣ ಭಾರತದ ನಗರಗಳಲ್ಲಿ ಹೇಗಿದೆ ಗಾಳಿಯ ಗುಣಮಟ್ಟ?

ಕಂಟಿನ್ಯೂಸ್ ಆಂಬಿಯೆಂಟ್ ಏರ್ ಕ್ವಾಲಿಟಿ ಮಾನಿಟರಿಂಗ್ (CAAQM) ನೆಟ್‌ವರ್ಕ್‌ನ ಡೇಟಾವನ್ನು ಆಧರಿಸಿದ ಸಂಶೋಧನೆಗಳಿಂದ ಈ ವರದಿ ಸಿದ್ಧಪಡಿಸಲಾಗಿದೆ. ಚೆನ್ನೈನ ನೈಟ್ರೋಜನ್ ಡೈಆಕ್ಸೈಡ್ ಮಟ್ಟ 2023 ರಲ್ಲಿ 314 ದಿನಗಳವರೆಗೆ ಪ್ರತಿ ಘನ ಮೀಟರ್‌ಗೆ 10 ಮೈಕ್ರೊಗ್ರಾಂನಷ್ಟಿತ್ತು. ಇದು ವಿಶ್ವ ಆರೋಗ್ಯ ಸಂಸ್ಥೆಯ ವಾರ್ಷಿಕ ಸುರಕ್ಷಿತ ಮಿತಿಗಿಂತ ಶೇ 86ರಷ್ಟು ಹೆಚ್ಚಿತ್ತು ಎಂದು ವರದಿ ತಿಳಿಸಿದೆ. ಪುಣೆ ಮತ್ತು ಹೈದರಾಬಾದ್​ನಲ್ಲಿ ಕ್ರಮವಾಗಿ 312 ಮತ್ತು 307 ದಿನಗಳ ವರೆಗೆ ಪ್ರತಿ ಘನ ಮೀಟರ್‌ಗೆ 10 ಮೈಕ್ರೊಗ್ರಾಂನಷ್ಟು ಪತ್ತೆಯಾಗಿತ್ತು.

ಬೆಂಗಳೂರಿನಲ್ಲಿ 295 ದಿನಗಳಲ್ಲಿ ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಮಿತಿಗಿಂತ ಹೆಚ್ಚಿತ್ತು. ಜೈಪುರ (277 ದಿನಗಳು), ಮುಂಬೈ (256 ದಿನಗಳು), ಮತ್ತು ಕೋಲ್ಕತ್ತಾ (133 ದಿನಗಳು) ನಂತರದ ಸ್ಥಾನಗಳಲ್ಲಿವೆ.

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅತಿಹೆಚ್ಚು ವಾಯುಮಾಲಿನ್ಯ

ಬೆಂಗಳೂರಿನಲ್ಲಿ, ಸಿಟಿ ರೈಲ್ವೇ ನಿಲ್ದಾಣದಲ್ಲಿ 2023 ರಲ್ಲಿ 295 ದಿನಗಳ ಕಾಲ ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡವನ್ನೂ ಮೀರಿದ ಪ್ರಮಾಣದಲ್ಲಿ ನೈಟ್ರೋಜನ್ ಡೈಆಕ್ಸೈಡ್ ಪತ್ತೆಯಾಗಿತ್ತು. ಹೊಂಬೇಗೌಡ ನಗರ (125 ದಿನಗಳು), ಬಾಪೂಜಿ ನಗರ (120 ದಿನಗಳು), ಮತ್ತು ಪೀಣ್ಯ (119 ದಿನಗಳು) ಇತರ ಹೆಚ್ಚು ನೈಟ್ರೋಜನ್ ಡೈಆಕ್ಸೈಡ್ ಪತ್ತೆಯಾದ ಪ್ರದೇಶಗಳಾಗಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮಾರಾಟವಾಗುತ್ತಿದೆ ಕಳಪೆ ಉಪ್ಪು: ಗೋಬಿ, ಕಾಟನ್ ಕ್ಯಾಂಡಿ ಆಯ್ತು ಈಗ ಉಪ್ಪಿನ ಸರದಿ

ನಗರದಲ್ಲಿನ 13 ಮಾನಿಟರಿಂಗ್ ಸ್ಟೇಷನ್‌ಗಳ ಪೈಕಿ ಎಂಟರಲ್ಲಿ ವಾರ್ಷಿಕ ಸರಾಸರಿ ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಪ್ರತಿ ಘನ ಮೀಟರ್‌ಗೆ 20 ಮೈಕ್ರೋಗ್ರಾಂಗಳಿಗಿಂತಲೂ ಹೆಚ್ಚು ಪತ್ತೆಯಾಗಿದೆ. ಶಿವಪುರ ನಿಲ್ದಾಣದಲ್ಲಿ ಪ್ರತಿ ಘನ ಮೀಟರ್‌ಗೆ 15 ಮೈಕ್ರೋಗ್ರಾಂಗಳಷ್ಟು ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಕಂಡುಬಂದರೆ, ಉಳಿದ ನಾಲ್ಕು ನಿಲ್ದಾಣಗಳಲ್ಲಿ ಪ್ರತಿ ಘನ ಮೀಟರ್‌ಗೆ 10 ರಿಂದ 13 ಮೈಕ್ರೋಗ್ರಾಂಗಳಷ್ಟು ನೈಟ್ರೋಜನ್ ಡೈಆಕ್ಸೈಡ್ ಮಟ್ಟ ಪತ್ತೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!