AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಕಾಸ್ತ್ರ ಹಿಡಿದು ಹಲ್ಲೆಗೆ ಸಿದ್ದವಿದ್ದ ದುಷ್ಕರ್ಮಿಗಳು, ಸಿನಿಮೀಯ ರೀತಿಯಲ್ಲಿ ಜೀವ ಉಳಿಸಿಕೊಂಡ ರೌಡಿಶೀಟರ್ ಜೆಸಿಬಿ ನಾರಾಯಣ

ಬೆಂಗಳೂರಿನ ಹುಳಿಮಾವು ಡಿಎಲ್ಎಫ್ ರಸ್ತೆಯಲ್ಲಿ ಜೆಸಿಬಿ ನಾರಾಯಣ ಬರುವ ಮಾಹಿತಿ ಅರಿತ ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಜೆಸಿಬಿ ನಾರಾಯಣನ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ಕಾಯುತ್ತಿದ್ದರು. ಜೆಸಿಬಿ ನಾರಾಯಣನ ಕಾರು ಬರುತ್ತಿದ್ದಂತೆ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಾರೆ.

ಮಾರಕಾಸ್ತ್ರ ಹಿಡಿದು ಹಲ್ಲೆಗೆ ಸಿದ್ದವಿದ್ದ ದುಷ್ಕರ್ಮಿಗಳು, ಸಿನಿಮೀಯ ರೀತಿಯಲ್ಲಿ ಜೀವ ಉಳಿಸಿಕೊಂಡ ರೌಡಿಶೀಟರ್ ಜೆಸಿಬಿ ನಾರಾಯಣ
ರೌಡಿಶೀಟರ್ ಜೆಸಿಬಿ ನಾರಾಯಣ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 08, 2021 | 9:36 AM

Share

ಬೆಂಗಳೂರು: ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ನಟೋರಿಯಸ್ ರೌಡಿಶೀಟರ್ ಜೆಸಿಬಿ ನಾರಾಯಣನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಯತ್ನಿಸಿದ್ದು ಕೂದಲೆಳೆ ಅಂತರದಲ್ಲಿ ರೌಡಿಶೀಟರ್ ಜೆಸಿಬಿ ನಾರಾಯಣ ಪಾರಾದ ಘಟನೆ ನಡೆದಿದೆ.

ಬೆಂಗಳೂರಿನ ಹುಳಿಮಾವು ಡಿಎಲ್ಎಫ್ ರಸ್ತೆಯಲ್ಲಿ ಜೆಸಿಬಿ ನಾರಾಯಣ ಬರುವ ಮಾಹಿತಿ ಅರಿತ ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಜೆಸಿಬಿ ನಾರಾಯಣನ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ಕಾಯುತ್ತಿದ್ದರು. ಜೆಸಿಬಿ ನಾರಾಯಣನ ಕಾರು ಬರುತ್ತಿದ್ದಂತೆ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಜೆಸಿಬಿ ನಾರಾಯಣ ಅಪಾಯದ ಮುನ್ಸೂಚನೆ ಅರಿತು ಕೂಡಲೇ ಸಿನಿಮೀಯ ರೀತಿಯಲ್ಲಿ ಕಾರು ರಿವರ್ಸ್ ತೆಗೆದುಕೊಂಡು ಎಸ್ಪೇಪ್ ಆಗಿದ್ದಾನೆ. ಕೂದಲೆಳೆ ಅಂತರದಲ್ಲಿ ಜೀವ ಉಳಿದಿದೆ. ನಾಲ್ಕೈದು ಜನ ದುಷ್ಕರ್ಮಿಗಳ ಚಲನವಲನ, ದುಷ್ಕರ್ಮಿಗಳು ಮಾರಕಾಸ್ತ್ರ ಹಿಡಿದು ಅಟ್ಯಾಕ್‌ಗೆ ಯತ್ನಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಹಾಕಿದ್ದ ಸ್ಕೆಚ್ ಮಿಸ್ ಆಕ್ತಿದ್ದಂತೆ ದುಷ್ಕರ್ಮಿಗಳ ಗ್ಯಾಂಗ್ ಸ್ಥಳದಿಂದ ಕಾಲ್ಕಿತ್ತಿದೆ. ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿ ಕ್ಯಾಮರಾ ದೃಶ್ಯವಾಳಿ ಹಾಗೂ ದೂರನ್ನ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಶುರು ಮಾಡಿದ್ದಾರೆ.

ಇದನ್ನೂ ಓದಿ: ಆ್ಯಕ್ಸಿಡೆಂಟ್​ ಬಳಿಕ ಥಿಯೇಟರ್​ನಲ್ಲಿ ಸೋತು ಓಟಿಟಿಯಲ್ಲಿ ದಾಖಲೆ ಮಾಡಿದ ಸಾಯಿ ಧರಮ್​ ತೇಜ್​ ಚಿತ್ರ ‘ರಿಪಬ್ಲಿಕ್​’

Published On - 9:23 am, Wed, 8 December 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?