Gruha Jyothi Scheme: ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಚಾಲನೆಗೆ ದಿನಾಂಕ ಫಿಕ್ಸ್, ಎಲ್ಲಿ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾಗಿ ಮುಖ್ಯಮಂತ್ರಿಯವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

Gruha Jyothi Scheme: ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಚಾಲನೆಗೆ ದಿನಾಂಕ ಫಿಕ್ಸ್, ಎಲ್ಲಿ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ
ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಚಾಲನೆಗೆ ದಿನಾಂಕ ಫಿಕ್ಸ್
Follow us
Rakesh Nayak Manchi
|

Updated on: Jun 08, 2023 | 7:09 PM

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ (Congress Guarantees) ಯೋಜನೆಗಳಲ್ಲಿ ಗೃಹಜ್ಯೋತಿ (Gruha Jyothi Scheme) ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ (Gruha Lakshmi Scheme) ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ. ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್‌ ಮೂಲಕ ಅಥವಾ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ.

ಈ ಬಗ್ಗೆ ಮುಖ್ಯಮಂತ್ರಿಯವರ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಲಾಗಿದೆ. “ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾಗಿ ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

“ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದೇನೆ” ಎಂದು ಸಿಎಂ ಹೇಳಿದ್ದಾಗಿ ಟ್ವೀಟ್ ಮಾಡಲಾಗಿದೆ.

“ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

“ಗೃಹ ಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

“ಗೃಹ ಜ್ಯೋತಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅವಕಾಶವಿದೆ. ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲಾಗುವುದು. ಜೂನ್‌ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್‌ ಮೂಲಕ ಅಥವಾ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್‌ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಒಂದು ವರ್ಷದ ಸರಾಸರಿ ಲಭ್ಯವಾದ ನಂತರ, ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು” ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ಷರತ್ತು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ಪರಿಜ್ಞಾನ ಇರಲಿಲ್ಲವೇ ಎಂದು ಪ್ರಶ್ನಿಸಿದ ಕುಮಾರಸ್ವಾಮಿ

“ಹಳೆ ವಿದ್ಯುತ್‌ ಬಿಲ್‌ ಬಾಕಿ ಪಾವತಿಗೆ ಸೆಪ್ಟೆಂಬರ್‌ 30 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ ಆಧಾರ್‌, ಆರ್. ಆರ್. ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್‌ 17 ಅಥವಾ 18 ರಂದು ಬೆಳಗಾವಿಯಲ್ಲಿ ಚಾಲನೆ ನೀಡುವ ಕುರಿತು ಚರ್ಚಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್‌ 15 ರಿಂದ ಪ್ರಾರಂಭವಾಗಲಿದೆ. ಈ ಯೋಜನೆಗೆ ಆನ್‌ಲೈನ್‌ ನಲ್ಲಿ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಂತೆಯೇ ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಅರ್ಜಿದಾರರು ರೇಷನ್‌ ಕಾರ್ಡ್‌ ಸಂಖ್ಯೆ, ಯಜಮಾನಿಯ ಹಾಗೂ ಪತಿಯ ಆಧಾರ್‌ ಕಾರ್ಡ್‌ ಸಂಖ್ಯೆ, ಆಧಾರ್‌ ಸಂಯೋಜನೆಯಾಗಿರುವ ಬ್ಯಾಂಕ್‌ ಖಾತೆಯ ವಿವರವನ್ನು ಒದಗಿಸಬೇಕು. ಈ ದಾಖಲೆಗಳ ಪ್ರತಿಗಳನ್ನು ಆಫ್‌ಲೈನ್‌ ಅರ್ಜಿಗಳೊಂದಿಗೂ ಸಲ್ಲಿಸಬಹುದು” ಎಂದು ಸಿಎಂ ಆಫ್​ ಕರ್ನಾಟಕ ಟ್ವೀಟ್ ಮಾಡಿದೆ.

“ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್‌ ಖಾತೆಗೆ ನೆರವಿನ ಮೊತ್ತ ಜಮೆ ಆಗಲಿದೆ. ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಶೇ. 85 ಕ್ಕೂ ಹೆಚ್ಚು ಕುಟುಂಬಗಳನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಪಾವತಿದಾರರಲ್ಲದ ಎಪಿಎಲ್‌ ಕಾರ್ಡುದಾರರಿಗೂ ಈ ಸೌಲಭ್ಯ ದೊರೆಯಲಿದೆ” ಎಂದು ಟ್ವೀಟ್ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್