Gruha Jyothi Scheme: ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು: ಬೆಸ್ಕಾಂ

ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆ ಪ್ರಯೋಜನ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

Gruha Jyothi Scheme: ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು: ಬೆಸ್ಕಾಂ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 02, 2023 | 9:01 PM

ಬೆಂಗಳೂರು: ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆ (Gruha Jyothi Scheme) ಪ್ರಯೋಜನ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಸೆಪ್ಟೆಂಬರ್​ 30ರೊಳಗೆ ವಿದ್ಯುತ್​ ಬಾಕಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 25ರೊಳಗೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಆಗಸ್ಟ್​​ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.

ಜುಲೈ 25ರಿಂದ ಆಗಸ್ಟ್​​ 25ರೊಳಗೆ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಸೆಪ್ಟೆಂಬರ್ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ. ಯೋಜನೆಗೆ ಅರ್ಹರಾಗಲು ಸರಾಸರಿ 200 ಯೂನಿಟ್ ಮೀರಬಾರದು ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Gruha Jyothi Scheme: ಗೃಹ ಜ್ಯೋತಿ ಯೋಜನೆಗೆ ಹರಿದು ಬಂತು 85 ಲಕ್ಷಕ್ಕೂ ಹೆಚ್ಚು ಅರ್ಜಿಗಳು!

ಪ್ರಕಟಣೆಯಲ್ಲಿ ಏನಿದೆ?

  • ಗ್ರಾಹಕರು ವಿದ್ಯುತ್ ಬಿಲನ ಹಿಂಬಾಕಿ ಉಳಿಸಿಕೊಂಡಿದ್ದರೂ ಅವರಿಗೆ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ. ಹಿಂಬಾಕಿಯನ್ನು ಸೆ.30 ರೊಳಗೆ ಪಾವತಿಸಬೇಕು (ಮೂರು ತಿಂಗಳು ಕಾಲಾವಕಾಶ ಇದೆ).
  • ನೀವು ಜುಲೈ 25 ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ, ಆಗಸ್ಟ್ ತಿಂಗಳ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ ಆಗಸ್ಟ್ 25 ರೊಳಗೆ ನೋಂದಾಯಿಸಿಕೊಂಡಲ್ಲಿ, ಸೆಪ್ಟೆಂಬರ್ ತಿಂಗಳ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ (ಬಿಲಿಂಗ್ ಅವಧಿ ಪ್ರತಿ ತಿಂಗಳ 25 ನೇ ತಾರೀಖಿನಿಂದ ಮುಂದಿನ ತಿಂಗಳ 25 ತಾರೀಖಿನವರೆಗೆ).
  • ಈ ಪ್ರಯೋಜನ ಪಡೆಯಲು ನಿಮ್ಮ ವಿದ್ಯುತ್ ಬಳಕೆಯ ಸರಾಸರಿ 200 ಯೂನಿಟ್​ಮೀರಿರಬಾರದು.
  • ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25 ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್​ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ ಯೋಜನೆಯ ಪ್ರಯೋಜನವನ್ನು ಅವರು ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ. ಯೋಜನೆಯ ನೋಂದಣಿಗೆ ವಿಳಂಬ ಬೇಡ. ಇಂದೇ ನೋಂದಾಯಿಸಿಕೊಳ್ಳಿ ಎಂದು ಬೆಸ್ಕಾಂ ಮನವಿ ಮಾಡಿದೆ.

ಗೃಹಜ್ಯೋತಿ ಯೋಜನೆಗೆ ಈವರೆಗೆ 92,50,157 ಗ್ರಾಹಕರು ನೋಂದಣಿ

ಗೃಹಜ್ಯೋತಿ ಯೋಜನೆಗೆ ಇಂದು 1,01,915 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದು, ಈವರೆಗೆ 92,50,157 ಗ್ರಾಹಕರು ನೋಂದಣಿಸಿಕೊಂಡಿದ್ದಾರೆ. ಜೂ.18ರಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:00 pm, Sun, 2 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ