Gruha jyothi scheme: ಫ್ರೀ ವಿದ್ಯುತ್ ಯೋಜನೆ ಬಗ್ಗೆ ಮತ್ತಷ್ಟು ವಿವರಣೆ ನೀಡಿದ ಸಚಿವ  ಕೆಜೆ ಜಾರ್ಜ್​

ಗೃಹಜ್ಯೋತಿ ಯೋಜನೆ ಲಾಭ ಪಡೆಯಲು ಅರ್ಜಿ ಹಾಕಬೇಕು. ಸೇವಾ ಸಿಂಧು ಆ್ಯಪ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಹಾಗೇ ಒಂದು ಪ್ರತ್ಯೇಕ ಆ್ಯಪ್ ಬಿಡುಗಡೆ ‌ಮಾಡುತ್ತೇವೆ. ಸ್ವಂತ ಮನೆ ಇರಲಿ, ಬಾಡಿಗೆ ಮನೆ ಇರಲಿ ಕರಾರುಪತ್ರ ಬೇಕು ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್​ ಹೇಳಿದ್ದಾರೆ.

Gruha jyothi scheme: ಫ್ರೀ ವಿದ್ಯುತ್ ಯೋಜನೆ ಬಗ್ಗೆ ಮತ್ತಷ್ಟು ವಿವರಣೆ ನೀಡಿದ ಸಚಿವ  ಕೆಜೆ ಜಾರ್ಜ್​
ಕೆಜೆ ಜಾರ್ಜ್​​
Follow us
ವಿವೇಕ ಬಿರಾದಾರ
|

Updated on:Jun 07, 2023 | 1:52 PM

ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್​​ಗಿಂತ (200 Unit Electricity Free) ಕಡಿಮೆ ವಿದ್ಯುತ್​ ಬಳಕೆದಾರರು 2.16 ಕೋಟಿ ಜನರಿದ್ದಾರೆ. 2 ಲಕ್ಷ ಗ್ರಾಹಕರು ಮಾತ್ರ 200 ಯೂನಿಟ್​​ಗಿಂತ ಹೆಚ್ಚಾಗಿ ಬಳಕೆ ಮಾಡುತ್ತಾರೆ. ಗೃಹಜ್ಯೋತಿ (Gruha jyothi) ಯೋಜನೆ ಲಾಭ ಪಡೆಯಲು ಅರ್ಜಿ ಹಾಕಬೇಕು. ಸೇವಾ ಸಿಂಧು ಆ್ಯಪ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಹಾಗೇ ಒಂದು ಪ್ರತ್ಯೇಕ ಆ್ಯಪ್ ಬಿಡುಗಡೆ ‌ಮಾಡುತ್ತೇವೆ. ಸ್ವಂತ ಮನೆ ಇರಲಿ, ಬಾಡಿಗೆ ಮನೆ ಇರಲಿ ಕರಾರುಪತ್ರ ಬೇಕು ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್​ (KJ George) ಹೇಳಿದ್ದಾರೆ.

ಬೆಂಗಳೂರಿನ ಬೆಸ್ಕಾಂ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹೊಸ ಮನೆ ಕಟ್ಟಿದವರಿಗೆ, ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಾಡಿಗೆ ಇರುವವರಿಗೆ ಸದ್ಯಕ್ಕೆ ಯೋಜನೆ ಸಿಗಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಇನ್ನು 2 ದಿನದಲ್ಲಿ ಸ್ಪಷ್ಟನೆ ಕೊಡುತ್ತೇವೆ. ಬೇರೆ ರಾಜ್ಯದಿಂದ ಬಂದು ಇಲ್ಲಿ ವಾಸವಾದವರಿಗೂ ಈ ಸೌಲಭ್ಯ ನೀಡಲಾಗುತ್ತದೆ. ಆದರೆ ಆಧಾರ್ ವಿಳಾಸ ಇಲ್ಲಿ ಇರುವಂತೆ ಬದಲಾಯಿಸಿಕೊಳ್ಳಬೇಕು. ಇಲ್ಲವಾದಲ್ಲಿ ಬಾಡಿಗೆ ಕರಾರುಪತ್ರ ಕಡ್ಡಾಯವಾಗಿ ಇರಬೇಕು ಎಂದು ಹೇಳಿದರು.

ಇದನ್ನೂ ಓದಿ: Gruha Jyothi Scheme: ಬಾಡಿಗೆದಾರರಿಗೂ ಸಿಗುತ್ತಾ ಉಚಿತ ವಿದ್ಯುತ್​​, ದಾಖಲೆಗಳು ಅಗತ್ಯ – ಕೆಜೆ ಜಾರ್ಜ್ ಸ್ಪಷ್ಟನೆ

ಜುಲೈ ತಿಂಗಳಿನ ಬಿಲ್ ಆಗಸ್ಟ್​​ನಲ್ಲಿ ಪಾವತಿ ಮಾಡುವುದು ಬೇಡ. 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಮೇಲೆ ಶೇ 10 ರಷ್ಟು ವಿದ್ಯುತ್​ ಉಚಿತವಾಗಿ ನೀಡುತ್ತೇವೆ. 200 ಯೂನಿಟ್​ ವಿದ್ಯುತ್​ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. 200 ಯೂನಿಟ್​​ಗಿಂತ ಹೆಚ್ಚುವರಿ ವಿದ್ಯುತ್ ಬಳಸಿದರೇ ಯೂನಿಟ್ ಸ್ಲಾಬ್ ಅನ್ವಯ ನಿಗದಿತ ಶುಲ್ಕ ಪಾವತಿ ಮಾಡಬೇಕು ಎಂದು ತಿಳಿಸಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ. ಚುನಾವಣೆ ಮುಗಿದ ನಂತರ ಇಂದಿನ ಸರ್ಕಾರದ ವಿದ್ಯುತ್​ ದರ ಏರಿಕೆ ಆದೇಶ ಜಾರಿಗೆ ಬಂದಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ನಮ್ಮ ಸರ್ಕಾರದ ಬಡವರು, ಮಧ್ಯಮ ವರ್ಗದವರನ್ನು ರಕ್ಷಿಸುತ್ತಿದೆ. ಬಡವರು ಬಿಲ್​ ಕಟ್ಟುವುದೇ ಬೇಡ ಎಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:26 pm, Wed, 7 June 23

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ