AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಜ್ಯೋತಿ ಯೋಜನೆಯಿಂದ ಹೊರನಡೆದ 1.3 ಲಕ್ಷ ಗ್ರಾಹಕರು!

ಕರ್ನಾಟಕದ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಪಡೆಯುತ್ತಿದ್ದ 1.3 ಲಕ್ಷ ಗ್ರಾಹಕರು ವೈಯಕ್ತಿಕ ದಾಖಲೆ ನೀಡಲು ನಿರಾಕರಿಸಿ ಯೋಜನೆಯಿಂದ ಹೊರನಡೆದಿದ್ದಾರೆ. ಬೆಸ್ಕಾಂ ವ್ಯಾಪ್ತಿಯಲ್ಲಿ 16 ಲಕ್ಷ ಮಂದಿಯ ದಾಖಲೆಗಳು ಇನ್ನು ಲಭ್ಯವಾಗಿಲ್ಲ. ಪರಿಶೀಲನೆಗೆ ತಪ್ಪಿಸಿಕೊಂಡವರು ಅಕ್ಟೋಬರ್ 31 ರೊಳಗೆ ಉಪವಿಭಾಗೀಯ ಕಚೇರಿಗೆ ದಾಖಲೆ ಸಲ್ಲಿಸದಿದ್ದರೆ ಯೋಜನೆಯಿಂದ ಶಾಶ್ವತವಾಗಿ ಹೊರಗುಳಿಯಲಿದ್ದಾರೆ.

ಗೃಹಜ್ಯೋತಿ ಯೋಜನೆಯಿಂದ ಹೊರನಡೆದ 1.3 ಲಕ್ಷ ಗ್ರಾಹಕರು!
ಗೃಹಜ್ಯೋತಿ
ಭಾವನಾ ಹೆಗಡೆ
|

Updated on: Oct 20, 2026 | 9:44 AM

Share

ಮುಖ್ಯಾಂಶಗಳು

  • ರಾಜ್ಯದ 1.3 ಲಕ್ಷ ಗ್ರಾಹಕರು ಗೃಹಜ್ಯೋತಿ ಯೋಜನೆಯಿಂದ ಸ್ವಯಂಪ್ರೇರಿತರಾಗಿ ಹೊರಕ್ಕೆ
  • ಗೌಪ್ಯತೆಯ ಅಭದ್ರತೆಯಿಂದಾಗಿ ದಾಖಲೆ ನೀಡಲು ಬೆಸ್ಕಾಂ ಗ್ರಾಹಕರ ನಿರಾಕರಣೆ
  • ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸದಿದ್ದರೆ ಯೋಜನೆ ಶಾಶ್ವತವಾಗಿ ರದ್ದು

ಬೆಂಗಳೂರು, ಅಕ್ಟೋಬರ್ 20: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಯಿಂದ ರಾಜ್ಯಾದ್ಯಂತ ಸುಮಾರು 1.3 ಲಕ್ಷ ಗ್ರಾಹಕರು ಸ್ವಯಂಪ್ರೇರಿತರಾಗಿ ಹೊರನಡೆಯಲು ನಿರ್ಧರಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದರೂ, ಇತ್ತೀಚೆಗೆ ಇಂಧನ ಇಲಾಖೆ ನಡೆಸಿದ ಮನೆಮನೆ ಪರಿಶೀಲನಾ ಅಭಿಯಾನದಲ್ಲಿ ವೈಯಕ್ತಿಕ ದಾಖಲೆಗಳನ್ನು ನೀಡಲು ನಿರಾಕರಿಸಿ ಯೋಜನೆಯಿಂದ ಹೊರಗುಳಿಯಲು ಇಷ್ಟಪಟ್ಟಿದ್ದಾರೆ.

ಬೆಸ್ಕಾಂ ವ್ಯಾಪ್ತಿಯೊಂದರಲ್ಲೇ ಲಕ್ಷಾಂತರ ಗ್ರಾಹರಕ ನಿರಾಕರಣೆ

ಈ ಪೈಕಿ ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯೊಂದರಲ್ಲೇ ಅತ್ಯಧಿಕ ಅಂದರೆ 1.2 ಲಕ್ಷ ಗ್ರಾಹಕರು ಯೋಜನೆ ಬೇಡವೆಂದು ತಿಳಿಸಿದ್ದಾರೆ. ಮನೆಮನೆಗೆ ಭೇಟಿ ನೀಡಿದ ಸಿಬ್ಬಂದಿಗೆ ಆಧಾರ, ಪಾನ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಗಳನ್ನು ನೀಡಲು ಗ್ರಾಹಕರು ಹಿಂದೇಟು ಹಾಕಿದ್ದಾರೆ. ವಿಶೇಷವಾಗಿ ದೊಡ್ಡ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವ ನಿವಾಸಿಗಳು ತಮ್ಮ ವೈಯಕ್ತಿಕ ಮಾಹಿತಿ ಹಾಗೂ ದಾಖಲೆಗಳು ದುರುಪಯೋಗವಾಗಬಹುದು ಎಂಬ ಗೌಪ್ಯತೆಯ ಭೀತಿಯಿಂದ ದಾಖಲೆ ಹಂಚಿಕೊಳ್ಳಲು ಒಪ್ಪಿಲ್ಲ.

ಅಗತ್ಯ ದಾಖಲೆಗಳನ್ನು ಸಲ್ಲಿಸಲು ಮತ್ತೊಂದು ಅವಕಾಶ

ರಾಜ್ಯದಲ್ಲಿ ಒಟ್ಟು 2.1 ಕೋಟಿ ಗೃಹ ಬಳಕೆಯ ವಿದ್ಯುತ್ ಗ್ರಾಹಕರಿದ್ದು, 1.8 ಕೋಟಿ ಗ್ರಾಹಕರು ಯೋಜನೆಯಡಿ ನೋಂದಾಯಿಸಿಕೊಂಡಿದ್ದರು. ಆದರೆ ಮನೆಮನೆ ಸಮೀಕ್ಷೆ ವೇಳೆ ಸುಮಾರು 25.7 ಲಕ್ಷ ಅರ್ಹ ಗ್ರಾಹಕರು ನಿಗದಿತ ಸಮಯದಲ್ಲಿ ಪರಿಶೀಲನೆಗೆ ಲಭ್ಯವಾಗಿಲ್ಲ ಅಥವಾ ದಾಖಲೆ ಸಲ್ಲಿಸಿಲ್ಲ. ಪರಿಶೀಲನೆಗೆ ತಪ್ಪಿಸಿಕೊಂಡ ಗ್ರಾಹಕರು ತಮ್ಮ ಹತ್ತಿರದ ಉಪವಿಭಾಗೀಯ ಕಚೇರಿಗೆ ಭೇಟಿ ನೀಡಿ ಅಕ್ಟೋಬರ್ 31ರೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಅಧಿಕಾರಿಗಳು ಮತ್ತೊಂದು ಅವಕಾಶ ನೀಡಿದ್ದಾರೆ.

ದಾಖಲೆ ನೀಡಲು ನಿರಾಕರಿಸಿದ ಗ್ರಾಹಕರ ವಿವರಗಳನ್ನು ಕಲೆಹಾಕಲಾಗುತ್ತಿದ್ದು, ಇಂಧನ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲಾಗುವುದು. ಸರ್ಕಾರದ ಮುಂದಿನ ನಿರ್ದೇಶನದಂತೆ ಈ ಕುರಿತು ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಅಕ್ಟೋಬರ್ 31ರವರೆಗೂ ದಾಖಲೆ ಪರಿಶೀಲನೆಗೆ ಅವಕಾಶ

ಯೋಜನೆಯಿಂದ 16 ಲಕ್ಷ ಫಲಾನುಭವಿಗಳು ಹೊರಗುಳಿಯುವ ಸಾಧ್ಯತೆ!

ಬೆಸ್ಕಾಂ ವ್ಯಾಪ್ತಿಯಲ್ಲಿನ 69 ಲಕ್ಷ ಫಲಾನುಭವಿಗಳ ಪೈಕಿ 16 ಲಕ್ಷ ಮಂದಿಯ ವಿವರ ಹಾಗೂ ದಾಖಲೆಗಳು ಇನ್ನೂ ಲಭ್ಯವಾಗಿಲ್ಲ. ಮನೆಗೆ ಬೀಗ ಹಾಕಿರುವುದು ಅಥವಾ ಬಾಡಿಗೆದಾರರು ಸ್ಥಳಾಂತರಗೊಂಡಿರುವುದರಿಂದ ಮೂರ್ನಾಲ್ಕು ಬಾರಿ ಭೇಟಿ ನೀಡಿದರೂ ಸಿಬ್ಬಂದಿಗೆ ಮಾಹಿತಿ ಸಂಗ್ರಹಿಸಲು ಸಾಧ್ಯವಾಗಿಲ್ಲ.

ದಾಖಲೆ ಸಲ್ಲಿಸದ ಗ್ರಾಹಕರು ಅಕ್ಟೋಬರ್ 31ರೊಳಗೆ ಹತ್ತಿರದ ಬೆಸ್ಕಾಂ ಉಪವಿಭಾಗೀಯ ಕಚೇರಿಗೆ ತೆರಳಿ ಅಗತ್ಯ ವಿವರ ನೀಡಲು ಕೊನೆಯ ಅವಕಾಶ ಕಲ್ಪಿಸಲಾಗಿದೆ. ಈ ಗಡುವಿನೊಳಗೆ ಮಾಹಿತಿ ನೀಡದವರನ್ನು ಪರಿಶೀಲನೆಯಿಂದ ಹೊರಗುಳಿದವರೆಂದು ಪರಿಗಣಿಸಿ, ಗೃಹಜ್ಯೋತಿ ಯೋಜನೆಯಿಂದ ಶಾಶ್ವತವಾಗಿ ತೆಗೆದುಹಾಕಲು ಇಲಾಖೆ ತೀರ್ಮಾನಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಇಂದು ಈ ರಾಶಿಯವರಿಗೆ ಹಳೆಯ ಸ್ನೇಹಿತರ ಭೇಟಿಯ ಅವಕಾಶ
ಇಂದು ಈ ರಾಶಿಯವರಿಗೆ ಹಳೆಯ ಸ್ನೇಹಿತರ ಭೇಟಿಯ ಅವಕಾಶ
ಎಣ್ಣೆ ಪಾರ್ಟಿ ಮೆಲುಕು ಹಾಕಿ ಕಾರ್ಯಕ್ರಮವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದು
ಎಣ್ಣೆ ಪಾರ್ಟಿ ಮೆಲುಕು ಹಾಕಿ ಕಾರ್ಯಕ್ರಮವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದು
ಕನ್ನಡಿಗರ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್; ಕರವೇ ನಾರಾಯಣ ಗೌಡ ಪ್ರತಿಕ್ರಿಯೆ
ಕನ್ನಡಿಗರ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್; ಕರವೇ ನಾರಾಯಣ ಗೌಡ ಪ್ರತಿಕ್ರಿಯೆ
ದುರ್ಗಾ ಪೂಜೆ ವೇಳೆ ಕಣ್ಣೀರಿಟ್ಟ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ
ದುರ್ಗಾ ಪೂಜೆ ವೇಳೆ ಕಣ್ಣೀರಿಟ್ಟ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ
ಬಿಗ್ ಬಾಸ್ ಎಲಿಮಿನೇಷನ್ ಬಳಿಕ ಒಳ್ಳೆಯ ಸಿನಿಮಾ, ಸೀರಿಯಲ್ ನಿರೀಕ್ಷೆ: ಕಾವ್ಯಾ
ಬಿಗ್ ಬಾಸ್ ಎಲಿಮಿನೇಷನ್ ಬಳಿಕ ಒಳ್ಳೆಯ ಸಿನಿಮಾ, ಸೀರಿಯಲ್ ನಿರೀಕ್ಷೆ: ಕಾವ್ಯಾ
ಕಿತ್ತೂರು ಉತ್ಸವ ಸಂದರ್ಭದಲ್ಲೇ ರಾಣಿ ಚನ್ನಮ್ಮನ ಮೂರ್ತಿಗೆ ಹಾನಿ
ಕಿತ್ತೂರು ಉತ್ಸವ ಸಂದರ್ಭದಲ್ಲೇ ರಾಣಿ ಚನ್ನಮ್ಮನ ಮೂರ್ತಿಗೆ ಹಾನಿ
ಮಂಜನ ಆ ವರ್ತನೆಯಿಂದ ನನಗೆ ತುಂಬ ನೋವಾಯಿತು: ಬಿಗ್ ಬಾಸ್ ಕಾವ್ಯಾ ಗೌಡ
ಮಂಜನ ಆ ವರ್ತನೆಯಿಂದ ನನಗೆ ತುಂಬ ನೋವಾಯಿತು: ಬಿಗ್ ಬಾಸ್ ಕಾವ್ಯಾ ಗೌಡ
ಸಚಿವ ಶಿವಲಿಂಗೇಗೌಡರ ವಿರುದ್ಧ ಶಾಸಕ ಸ್ವರೂಪ್ ವಾಗ್ದಾಳಿ
ಸಚಿವ ಶಿವಲಿಂಗೇಗೌಡರ ವಿರುದ್ಧ ಶಾಸಕ ಸ್ವರೂಪ್ ವಾಗ್ದಾಳಿ
ನನ್ನ ಡಾಕ್ಟರ್​ ಸಿದ್ದರಾಮಯ್ಯ ಅಂತ ಕರೀಬೇಡಿ: ಮಾಜಿ ಸಿಎಂ ನಗೆ ಚಟಾಕಿ
ನನ್ನ ಡಾಕ್ಟರ್​ ಸಿದ್ದರಾಮಯ್ಯ ಅಂತ ಕರೀಬೇಡಿ: ಮಾಜಿ ಸಿಎಂ ನಗೆ ಚಟಾಕಿ
ಬೆಸ್ಟ್ ದಸರಾ ರೀಲ್ಸ್​​​​ಗೆ​​​ ಬಹುಮಾನ ಘೋಷಿಸಿದ ಸಿಎಂ: ಮಿಸ್ ಮಾಡ್ಕೋಬೇಡಿ
ಬೆಸ್ಟ್ ದಸರಾ ರೀಲ್ಸ್​​​​ಗೆ​​​ ಬಹುಮಾನ ಘೋಷಿಸಿದ ಸಿಎಂ: ಮಿಸ್ ಮಾಡ್ಕೋಬೇಡಿ