AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ

ಗೃಹಲಕ್ಷ್ಮಿ ಯೋಜನೆಯ ದುರ್ಬಳಕೆ ತಡೆಯಬೇಕಿರುವ ಕಾರಣ ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಮರು ಅರ್ಜಿ ಆಹ್ವಾನಿಸಿದೆ. ಯೋಜನೆಯ ಅರ್ಹತೆ ಪಡೆಯಲು ಕುಟುಂಬದ ಯಜಮಾನಿ ಮಹಿಳೆಯರ ಹೆಸರು ಅಂತ್ಯೋದಯ, ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗಳಲ್ಲಿ ನಮೂದಾಗಿರಬೇಕು. ಆಧಾರ್, ಬ್ಯಾಂಕ್ ಪಾಸ್‌ಬುಕ್ ಮತ್ತು ರೇಷನ್ ಕಾರ್ಡ್ ಅಗತ್ಯ ದಾಖಲೆಗಳಾಗಿವೆ.

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ
ಗೃಹಲಕ್ಷ್ಮಿ ಸೌಲಭ್ಯ ಪಡೆಯಲು ಹೊಸ ಮಾನದಂಡImage Credit source: PTI
ಪ್ರಸನ್ನ ಹೆಗಡೆ
|

Updated on:Jun 14, 2026 | 12:22 PM

Share

ಬೆಂಗಳೂರು, ಜೂನ್​​ 14: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಹೊಸ ಅರ್ಹತಾ ಮಾನದಂಡಗಳು ಬಹಿರಂಗಗೊಂಡಿವೆ. ಈ ಯೋಜನೆಯಡಿ, ಕುಟುಂಬದ ಯಜಮಾನಿ ಮಹಿಳೆಯರಿಗೆ ಹಣ ಸಿಗಲಿದ್ದು, ಅಂತ್ಯೋದಯ, ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಗಳಲ್ಲಿ ಯಜಮಾನಿ ಎಂದು ನಮೂದಾಗಿರುವ ಮಹಿಳೆಯರು ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಕೆಗೆ ಏನೆಲ್ಲ ದಾಖಲೆ ಅಗತ್ಯ?

  • ಕುಟುಂಬದ ಯಜಮಾನಿಯ ಆಧಾರ್ ಕಾರ್ಡ್ ಪ್ರತಿ
  • ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಬ್ಯಾಂಕ್ ಪಾಸ್‌ಬುಕ್
  • ಯಜಮಾನಿಯ ಹೆಸರಿನಲ್ಲಿರುವ ರೇಷನ್ ಕಾರ್ಡ್

ಇದನ್ನೂ ಓದಿ: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ ಆಹ್ವಾನ; ಸಿಎಂ ಡಿಕೆಶಿ ಮಾಹಿತಿ

ಯಾರಿಗೆಲ್ಲ ಸೌಲಭ್ಯ ಸಿಗಲ್ಲ?

ಯೋಜನೆಯ ಲಾಭ ಪಡೆಯಲು ಕೆಲವು ನಿರ್ಬಂಧಗಳನ್ನು ಸಹ ವಿಧಿಸಲಾಗಿದೆ. ಕುಟುಂಬದ ಯಜಮಾನಿ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ, ಅವರು ಈ ಯೋಜನೆಗೆ ಅನರ್ಹರಾಗುತ್ತಾರೆ. ಅದೇ ರೀತಿ, ಯಜಮಾನಿ ಅಥವಾ ಅವರ ಪತಿ ಜಿಎಸ್‌ಟಿ ಪಾವತಿದಾರರಾಗಿದ್ದರೂ ಸಹ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಿಲ್ಲ.

ವಿಪಕ್ಷಗಳಿಂದ ತೀವ್ರ ಟೀಕೆ

ಇನ್ನು ಗ್ಯಾರಂಟಿ ಪರಿಷ್ಕರಣೆ ವಿಚಾರವಾಗಿ ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ನಡೆಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ, ಮರು ಅರ್ಜಿ ಸ್ವೀಕಾರ ಒಳ್ಳೆಯ ಉದ್ದೇಶವೇ ಇರಬಹುದು. ಆದರೆ ಆ ನೆಪದಲ್ಲಿ ನಿಜವಾದ ಫಲಾನುಭವಿಗಳಿಗೆ ತೊಂದರೆ ಆಗಬಾರದು. 2 ಯೋಜನೆಗಳಲ್ಲಿ ಲೋಪದೋಷಗಳಿವೆ ಎಂದು ಸರ್ಕಾರ ಹೇಳಿದೆ. ಈ ಹಿಂದೆ ಏನೂ ಯೋಚಿಸದೆ ಗ್ಯಾರಂಟಿ ಯೋಜನೆ ಘೋಷಿಸಿದ್ದರು. ಈಗ ಅದರ ಹೊಡೆತದಿಂದ ನ್ಯೂನತೆಗಳು ಗೊತ್ತಾಗಿವೆ. ಹಾಗಾಗಿ ಹೊಸದಾಗಿ ನೋಂದಣಿ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಎರಡು ತಿಂಗಳ ಗೃಹಲಕ್ಷ್ಮೀ ಹಣ ಬಾಕಿ ಬಗ್ಗೆ ಸರ್ಕಾರ ಚಕಾರ ಎತ್ತಿಲ್ಲ. 5 ಸಾವಿರ ಕೋಟಿ ಲೆಕ್ಕದ ಬಗ್ಗೆ ಸರ್ಕಾರ ಜಾಣ ಮೌನಕ್ಕೆ ಜಾರಿದೆ ಎಂದವರು ಕಿಡಿ ಕಾರಿದ್ದಾರೆ. ಮತ್ತೊಂದೆಡೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಗೃಹಲಕ್ಷ್ಮಿ ಈಗ ಚುನಾವಣಾ ಲಕ್ಷ್ಮೀ ಆಗಿದೆ. ಗೃಹಲಕ್ಷ್ಮಿ ಯೋಜನೆಯನ್ನು 4-5 ತಿಂಗಳುಗಳ ಕಾಲ ತಡೆಹಿಡಿದು, ಚುನಾವಣೆ ಬಂದಾಗ ಚುನಾವಣಾ ಲಕ್ಷ್ಮಿಯನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:19 pm, Sun, 14 June 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More