ಆಗಸ್ಟ್ 27 ರಂದು ರಾಜ್ಯದ 11 ಸಾವಿರ ಕಡೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ: ಡಿಕೆ ಶಿವಕುಮಾರ್

ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಕುರಿತು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಭೆ ನಡೆಸಿದರು. ನಂತರ ಮಾತನಾಡಿದ ಅವರು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.

ಆಗಸ್ಟ್ 27 ರಂದು ರಾಜ್ಯದ 11 ಸಾವಿರ ಕಡೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ: ಡಿಕೆ ಶಿವಕುಮಾರ್
ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ
Follow us
Anil Kalkere
| Updated By: Rakesh Nayak Manchi

Updated on: Aug 10, 2023 | 8:03 PM

ಬೆಂಗಳೂರು, ಆಗಸ್ಟ್ 10: ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D. K. Shivakumar) ಹೇಳಿದರು. ಇದೇ ವೇಳೆ, ರಾಜ್ಯದ ಒಟ್ಟು 11 ಸಾವಿರ ಕಡೆಗಳಲ್ಲಿ ಏಕಕಾಲಕ್ಕೆ ಯೋಜನೆ ನೀಡಲಾಗುವುದು ಎಂದರು.

ಯೋಜನೆ ಉದ್ಘಾಟನೆ ಕುರಿತು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆ ಸಭೆ ನಡೆಸಿದ ನಂತರ ವಿಧಾನಸೌಧದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಉದ್ಘಾಟನಾ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಾಗಿದೆ ಎಂದರು.

ಇದನ್ನೂ ಓದಿ: ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆಗೆ ಸಚಿವರ ಸೂಚನೆ, ಸಮಿತಿ ವರದಿ ನಂತರವೇ ನಿರ್ಧಾರ ಎಂದ ಡಿಕೆ ಶಿವಕುಮಾರ್

ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಎಲ್ಲಾ ನಗರಸಭೆ, ಪುರಸಭೆ, ಗ್ರಾಮ ಪಂಚಾಯಿತಿಗಳಲ್ಲಿ ಉದ್ಘಾಟನೆ ನಡೆಯಲಿದೆ. ಪಂಚಾಯಿತಿಗೊಬ್ಬ ನೋಡಲ್ ಆಫೀಸರ್​ ನೇಮಕ ಮಾಡಿದ್ದೇವೆ. ಪಕ್ಷಾತೀತವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಎಲ್ಲರಿಗೂ ಅನುಕೂಲ ಆಗಲೆಂದು ಭಾನುವಾರ ಕಾರ್ಯಕ್ರಮ ನಿಗದಿ ಮಾಡಲಾಗಿದೆ. ಹೀಗಾಗಿ ಎಲ್ಲರೂ ಭಾಗವಹಿಸುವಂತೆ ಮನವಿ ಮಾಡಿದರು.

ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 1.5 ಕೋಟಿ ಜನರು ನೋಂದಾಯಿಸಿಕೊಂಡಿದ್ದಾರೆ. ಈ ಯೋಜನೆಗೆ ನೋಂದಣಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇಲ್ಲ. ಯಾವಾಗ ಬೇಕಾದರೂ ನೋಂದಣಿಗೆ ಅವಕಾಶ ಇದೆ ಎಂದು ಡಿಸಿಎಂ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು