Gruha Lakshmi Scheme: ಗೃಹ ಲಕ್ಷ್ಮಿ ಯೋಜನೆ ಜಾರಿ ಯಾವಾಗ? ಯಾರು ಅರ್ಜಿ ಸಲ್ಲಿಸಬಹುದು? ಅರ್ಹತೆ ಮತ್ತು ಇತರ ವಿವರ ಇಲ್ಲಿದೆ

ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರ ಪ್ರತಿಯೊಂದು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ.ವನ್ನು ಸರ್ಕಾರ ಹಾಕಲಿದೆ. ಯಾವಾಗದಿಂದ? ಅರ್ಹತೆಗಳು ಏನು? ಇಲ್ಲಿದೆ ಮಾಹಿತಿ.

Gruha Lakshmi Scheme: ಗೃಹ ಲಕ್ಷ್ಮಿ ಯೋಜನೆ ಜಾರಿ ಯಾವಾಗ? ಯಾರು ಅರ್ಜಿ ಸಲ್ಲಿಸಬಹುದು? ಅರ್ಹತೆ ಮತ್ತು ಇತರ ವಿವರ ಇಲ್ಲಿದೆ
ಗೃಹ ಲಕ್ಷ್ಮಿ ಯೋಜನೆ
Follow us
|

Updated on: Jun 02, 2023 | 5:38 PM

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಿಸಿದ ಬಹು ನಿರೀಕ್ಷಿತ ಐದು ಗ್ಯಾರಂಟಿಗಳನ್ನು (Congress Garantees) ಅನುಷ್ಠಾನಗೊಳಿಸುವುದಾಗಿ ಮುಖ್ಯಮಂತ್ರಿ ಸಿದರಾಮಯ್ಯ (Siddaramaiah) ಅವರು ಇಂದು (ಜೂನ್ 2) ಘೋಷಿಸಿದ್ದಾರೆ. ಮಹಿಳಾ ಮತದಾರರನ್ನು ಕಾಂಗ್ರೆಸ್‌ನತ್ತ ಸೆಳೆದ ಯೋಜನೆಗಳಲ್ಲಿ ಒಂದು ಗೃಹ ಲಕ್ಷ್ಮಿ ಯೋಜನೆ (Gruha Lakshmi Scheme) ಕೂಡ ಒಂದು. ಈ ಯೋಜನೆಯಡಿ ಪ್ರತಿ ಮನೆಯ ಯಜಮಾನ್ತಿಗೆ ತಿಂಗಳಿಗೆ 2,000 ರೂಪಾಯಿ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಹಾಗಿದ್ದರೆ ಈ ಯೋಜನೆ ಯಾವಾಗದಿಂದ ಜಾರಿಯಾಗಲಿದೆ? ಅರ್ಹತೆಗಳೇನು? ಇಲ್ಲಿದೆ ಮಾಹಿತಿ.

ಗೃಹ ಲಕ್ಷ್ಮಿ ಯೋಜನೆಗೆ ಯಾರು ಅರ್ಹರು?

ಮಹಿಳಾ ಮುಖ್ಯಸ್ಥರನ್ನು ಸರ್ಕಾರ ಹೇಗೆ ನಿರ್ಧರಿಸುತ್ತದೆ ಎಂಬುದರ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಹಿಂದೆ ಜೇಷ್ಠತೆಯ ಆಧಾರದ ಮೇಲೆ ಯೋಜನೆಯ ಲಾಭವನ್ನು ಅತ್ತೆಗೆ ಪಡೆಯುತ್ತಾರೆ ಎಂದು ಹೇಳಿದ್ದರು. ಆದರೆ, ಕುಟುಂಬದ ಮಹಿಳೆ ಯಾರು ಎಂಬುದನ್ನು ಕುಟುಂಬದವರೇ ನಿರ್ಧರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

18 ವರ್ಷ ಮೇಲ್ಪಟ್ಟ ಯಾವುದೇ ಮಹಿಳೆಯನ್ನು ಕುಟುಂಬದ ಮುಖ್ಯಸ್ಥೆ ಎಂದು ಪರಿಗಣಿಸಬಹುದು ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ. ಈ ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮತ್ತು ಎಪಿಎಲ್ ಎರಡಕ್ಕೂ ಅನ್ವಯಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Yuva Nidhi Scheme: 2022-23ನೇ ಸಾಲಿನಲ್ಲಿ ಪದವಿ ಪಡೆದವರಿಗೆ ‘ಯುವನಿಧಿ’, ತೃತೀಯ ಲಿಂಗಿಗಳಿಗೂ ಯೋಜನೆ ಭಾಗ್ಯ

ಗೃಹಲಕ್ಷ್ಮಿ ಯೋಜನೆಗೆ ಯಾವಾಗ ಅರ್ಜಿ ಸಲ್ಲಿಸಬಹುದು?

ಅರ್ಜಿಗಳನ್ನು ಸಲ್ಲಿಸಲು ಮತ್ತು ಆಧಾರ್ ಮತ್ತು ಬ್ಯಾಂಕ್ ವಿವರಗಳಂತಹ ದಾಖಲೆಗಳನ್ನು ಸಲ್ಲಿಸಲು ಜೂನ್ 15 ರಿಂದ ಜುಲೈ 15 ರ ನಡುವೆ ಒಂದು ತಿಂಗಳ ಗಡುವನ್ನು ನೀಡುವುದಾಗಿ ರಾಜ್ಯ ಸರ್ಕಾರ ಹೇಳಿದೆ.

‘ಗೃಹ ಲಕ್ಷ್ಮಿ’ ಯಾವಾಗ ಜಾರಿಯಾಗಲಿದೆ?

ಅರ್ಜಿಗಳನ್ನು ಸ್ವೀಕರಿಸಿದ ನಂತರ ಸರ್ಕಾರವು ಅದನ್ನು ಪರಿಶೀಲಿಸುತ್ತದೆ. ಈ ಕಾರ್ಯ ಮುಕ್ತಾಯದ ನಂತರ ಆಗಸ್ಟ್ 15 ರಂದು ಅಂದರೆ ಸ್ವಾತಂತ್ರ್ಯ ದಿನಾಚರಣೆಯಂದು ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕುಟುಂಬದ ಮಹಿಳಾ ಮುಖ್ಯಸ್ಥರು ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ವಿವರಗಳಂತಹ ವಿವರಗಳನ್ನು ಒದಗಿಸಬೇಕು. ನಾವು ಜೂನ್ 15 ರಿಂದ ಜುಲೈ 15 ರ ನಡುವೆ ಆನ್‌ಲೈನ್‌ನಲ್ಲಿ ಮಹಿಳೆಯರಿಂದ ಅರ್ಜಿಗಳನ್ನು ಸ್ವೀಕರಿಸಲಿದ್ದೇವೆ. ನಾವು ಈ ಅರ್ಜಿಗಳನ್ನು ಪರಿಶೀಲಿಸಿ ಅಂತಹವರಿಗೆ ಆಗಸ್ಟ್ 15ರಿಂದ ಪ್ರತಿ ತಿಂಗಳು 2,000 ರೂ.ಗಳನ್ನು ವರ್ಗಾಯಿಸುವುದಾಗಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅರ್ಜಿಗಳನ್ನು ಅಂತಿಮಗೊಳಿಸುವ ಮೊದಲು ಸರ್ಕಾರವು ಕುಟುಂಬಗಳ ಡೇಟಾವನ್ನು ದೃಢೀಕರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವೃದ್ಧಾಪ್ಯ ಮತ್ತು ವಿಧವೆಯರು ಸೇರಿದಂತೆ ವಿವಿಧ ಪಿಂಚಣಿದಾರರಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಮುಖ್ಯಮಂತ್ರಿಯವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ